ETV Bharat / state

ದಾವಣಗೆರೆ: ಮರಕ್ಕೆ ಕಾರು ಡಿಕ್ಕಿ; ಪೊಲೀಸ್​ ಕಾನ್ಸ್​​ಟೇಬಲ್ ಸಾವು - ದಾವಣಗೆರೆ ಅಪಘಾತ

ಮರಕ್ಕೆ ಕಾರು ಡಿಕ್ಕಿಯಾಗಿ ಪೊಲೀಸ್​ ಕಾನ್ಸ್​ಟೇಬಲ್​ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.​

ಮರಕ್ಕೆ ಕಾರು ಡಿಕ್ಕಿ: ಪೊಲೀಸ್​ ಕಾನ್ಸ್​​ಟೇಬಲ್ ಸಾವು

author img

By ETV Bharat Karnataka Team

Published : Feb 7, 2024, 6:15 PM IST

ದಾವಣಗೆರೆ: ನಿಯಂತ್ರಣ ಕಳೆದುಕೊಂಡ ಕಾರೊಂದು ಮರಕ್ಕೆ ಗುದ್ದಿದ ಪರಿಣಾಮ ಪೊಲೀಸ್​ ಕಾನ್ಸ್‌ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನ್ಯಾಮತಿಯ ದಾನಿಹಳ್ಳಿ ಸಮೀಪ ಇಂದು ನಡೆದಿದೆ. ಸಿದ್ದೇಶ್ (34) ಮೃತರು.

ದಾವಣಗೆರೆ ಡಿಎಆರ್​ನಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಿದ್ದೇಶ್ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಬಂಧಿಕರೊಬ್ಬರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ಮರಳಿ ಊರಿಗೆ ಕರೆದುಕೊಂಡು ಬರಲು ತೆರಳದಿದ್ದರು. ಈ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದ ಸಿದ್ದೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ನ್ಯಾಮತಿ ಪೊಲೀಸ್​ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮನೆಗೆ ಅಧಾರವಾಗಿದ್ದ ಸಿದ್ದೇಶ್​ರನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು. ಪೊಲೀಸ್ ಇಲಾಖೆ ಮತ್ತು ಎಸ್ಪಿ ಉಮಾ ಪ್ರಶಾಂತ್ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಘಟನೆಗಳು-ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ: ಕಳೆದ ನಾಲ್ಕು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಏರ್​ಪೋರ್ಟ್​ ಉದ್ಯೋಗಿಯೊಬ್ಬರು ಸಾವನ್ನಪ್ಪಿದ್ದರು. ಹುಬ್ಬಳ್ಳಿ ಮೂಲದ ಕಾಜೋಲ್ ಶಿಯಾನಿ ಮೃತರೆಂದು ಗುರುತಿಸಲಾಗಿದೆ. ನಾಲ್ವರು ಸಹ ಪ್ರಯಾಣಿಕರು ಗಾಯಗೊಂಡಿದ್ದರು. ಐವರು ಏರ್​ಪೋರ್ಟ್ ಉದ್ಯೋಗಿಗಳು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಪಾರ್ಟಿ ಮುಗಿಸಿ ಮನೆಗೆ ಹೋಗುವಾಗ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾಜೋಲ್​ ಶಿಯಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ: ಕಬ್ಬು ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ತುಂಬರಮಟ್ಟಿ ಕ್ರಾಸ್​ ಬಳಿ ಕಳೆದ ತಿಂಗಳು ನಡೆದಿತ್ತು. ಹುಬ್ಬಳ್ಳಿ ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ 4 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಮೃತರನ್ನು ಮಲ್ಲು ಪೂಜಾರಿ, ಕಲ್ಲಪ್ಪ ಕೌಟಗಿ, ಕಾಮಾಕ್ಷಿ ಬಡಿಗೇರ, ತುಕಾರಾಮ್ ತಳೇವಾಡ ಎಂದು ಗುರುತಿಸಲಾಗಿದೆ. ಬಾದಾಮಿಯಿಂದ ಹೊನಗನಹಳ್ಳಿಯ ತಮ್ಮ ಊರಿಗೆ ಹಿಂತಿರುಗಿದ್ದಾಗ ದುರ್ಘಟನೆ ನಡೆದಿತ್ತು.

ಇದನ್ನೂ ಓದಿ: ಚಿತ್ರದುರ್ಗ: ಟ್ಯಾಂಕರ್ ಲಾರಿಗೆ ಕಾರು ಡಿಕ್ಕಿ, ಇಬ್ಬರು ಮಹಿಳೆಯರು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.