ETV Bharat / state

ಮೈಸೂರು: ಕಲುಷಿತ ನೀರು ಕುಡಿದು ಯುವಕ ಸಾವು, 48 ಜನ ಅಸ್ವಸ್ಥ; ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ - Contaminated water consumption case

author img

By ETV Bharat Karnataka Team

Published : May 21, 2024, 1:35 PM IST

Updated : May 21, 2024, 9:35 PM IST

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)
ಕನಕರಾಜು ಸೋದರ ಸಂಬಂದಿ ರವಿ (ETV Bharat)

ಮೈಸೂರು: ಕಲುಷಿತ ನೀರು ಸೇವನೆ ಮಾಡಿ ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ. ಉಳಿದಂತೆ 48ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲುಷಿತ ನೀರು ಸೇವಿಸಿ ಕನಕರಾಜು (24) ಎಂಬ ಯುವಕ ತೀವ್ರವಾಗಿ ಅಸ್ವಸ್ಥಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮುಂಜಾಗ್ರತಾ ಕ್ರಮವಾಗಿ ಕೆ.ಸಾಲುಂಡಿ ಗ್ರಾಮಕ್ಕೆ ವೈದ್ಯಾಧಿಕಾರಿಗಳ ತಂಡದೊಂದಿಗೆ ಆಂಬ್ಯುಲೆನ್ಸ್​ಗಳನ್ನು ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಕುಮಾರಸ್ವಾಮಿ ಮಾಹಿತಿ ತಿಳಿಸಿದ್ದಾರೆ.

ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ: ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದ್ದಾರೆ.

ಆಸ್ಪತ್ರೆಗೆ ಶಾಸಕ ಜಿ.ಟಿ. ದೇವೇಗೌಡ ಭೇಟಿ: ಕಲುಷಿತ ನೀರು ಸೇವನೆ ಮಾಡಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವವರನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮೃತ ಯುವಕನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡುವಂತೆ ಆಗ್ರಹಿಸಿದರು.

ಇದನ್ನೂ ಓದಿ: ರಾಮನಗರ: ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿದ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ - DIARRHEA

ಮೃತ ಕನಕರಾಜು ಸೋದರ ಸಂಬಂದಿ ರವಿ ಹೇಳಿದ್ದೇನು? ಭಾನುವಾರ ರಾತ್ರಿ ಊಟದ ನಂತರ ಕನಕರಾಜುಗೆ ವಾಂತಿ-ಭೇದಿಯಾಗಿದೆ. ರಾತ್ರಿಯಾದ ಕಾರಣ ಸೋಮವಾರ ಬೆಳಗ್ಗೆ ಮೈಸೂರಿನ ಪ್ರತಿಷ್ಠ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಕನಕರಾಜು ಬಡವರಾಗಿದ್ದು, ಹಣ ಇಲ್ಲದ ಕಾರಣ ಇಂಜೆಕ್ಷನ್, ಮಾತ್ರೆ ತೆಗೆದುಕೊಂಡು ಊರಿಗೆ ಹೊರಟ್ಟಿದ್ದಾರೆ. ಊರಿಗೆ ಬಂದ ಅರ್ಧ ಗಂಟೆಯಲ್ಲಿ ಆರೋಗ್ಯ ಹದಗೆಟ್ಟಿದ್ದು, ಮತ್ತೆ ವಾಪಸ್ ಆಸ್ಪತ್ರೆಗೆ ಕರೆದುಕೊಂಡು ಬಂದು ಐಸಿಯುನಲ್ಲಿ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸುಮಾರು 9 ಗಂಟಗೆ ಕನಕರಾಜು ಸಾವನ್ನಪ್ಪಿದ್ದಾನೆಂದು ಮೃತರ ಸಂಬಂಧ ರವಿ ಈಟಿವಿ ಭಾರತ್​ಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಅಥಣಿಯಲ್ಲಿ ಕಾರ್ಖಾನೆ ಬಾಯ್ಲರ್ ಬ್ಲಾಸ್ಟ್​; ಓರ್ವ ಮಹಿಳೆ ಸಾವು, ಇಬ್ಬರಿಗೆ ಗಾಯ - Boiler Explosion

Last Updated : May 21, 2024, 9:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.