ETV Bharat / state

ಇನ್ನೂ ಎರಡು ದಿನ ರಾಜ್ಯದಲ್ಲಿ ಮಳೆ ಅಬ್ಬರ : ಆರೆಂಜ್ ಅಲರ್ಟ್ ಘೋಷಣೆ - RAIN ALERT IN STATE - RAIN ALERT IN STATE

ರಾಜ್ಯಾದ್ಯಂತ ಮಳೆ ಮುಂದುವರಿದಿದ್ದು, ಅನೇಕ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್​ ಅಲರ್ಟ್​ ಘೋಷಿಸಿದೆ.

CONTINUED RAIN  ORANGE ALERT  BENGALURU
ಇನ್ನೂ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ : ಆರೆಂಜ್ ಅಲರ್ಟ್ ಘೋಷಣೆ (ETV Bharat)
author img

By ETV Bharat Karnataka Team

Published : Aug 20, 2024, 9:46 AM IST

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರೆಯುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

ಇನ್ನು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಂಡ್ಯ, ಮೈಸೂರು, ಕೊಡಗು, ಹಾಸನ, ಚಾಮರಾಜನಗರ, ಬೆಳಗಾವಿ, ಬೀದ‌ರ್, ಧಾರವಾಡ, ಕಲಬುರಗಿ, ವಿಜಯಪುರದಲ್ಲಿ ಮುಂದಿನ 2 ದಿನ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಆ.22ರಿಂದ ಆ.24ರ ವರೆಗೆ ಮಳೆ ಇರುವುದಿಲ್ಲ. 25ರಿಂದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ : ರಾಜಧಾನಿ ಬೆಂಗಳೂರಿನ ಸುರಿಯುತ್ತಿರುವ ಮಳೆ ಇನ್ನೂ ಐದು ದಿನಗಳ ಕಾಲ ಮುಂದುವರೆಯಲಿದ್ದು, ಇಂದಿನಿಂದ ಎರಡು ದಿನಗಳ ಕಾಲ ಭಾರಿ ಪ್ರಮಾಣದಲ್ಲಿ ಮಳೆ ಬರುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ನಗರದಲ್ಲಿ ಕಳೆದ ಒಂದು ವಾರದಿಂದ ಸಂಜೆ ವೇಳೆಗೆ ಮಳೆ ಸುರಿಯುತ್ತಿದೆ. ರಾಜಧಾನಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹೆಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಓದಿ: ಆಸ್ಪತ್ರೆಯಲ್ಲಿ ಮಾಲೀಕ ಅಸುನೀಗಿ 2 ವಾರ ಕಳೆದ್ರೂ ಹುಡುಕಿಕೊಂಡು ಬರುವ ಸಾಕು ನಾಯಿ: ಶ್ವಾನದ ಸ್ವಾಮಿನಿಷ್ಠೆಗೆ ಸರಿಸಾಟಿ ಉಂಟೆ! - DOG IS WAITING FOR OWNER

ETV Bharat Logo

Copyright © 2025 Ushodaya Enterprises Pvt. Ltd., All Rights Reserved.