ಚಿಕ್ಕೋಡಿ: ಕಾಗವಾಡ ಶಾಸಕ ರಾಜು ಕಾಗೆ ಅವರು ಲೋಕಸಭಾ ಚುನಾವಣೆ ಪ್ರಚಾರ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ನೋಟಿಸ್ ನೀಡಿದ್ದು, 24 ಗಂಟೆಯೊಳಗಾಗಿ ಕಾರಣ ತಿಳಿಸುವಂತೆ ಸೂಚಿಸಿದ್ದಾರೆ.
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಕಾಗೆ, ಪ್ರಧಾನಿ ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ಪಿಎಂ ಆಗುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದರು. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ ರಾಜು ಕಾಗೆ - Congress MLA Raju Kage
"ನಾನು ವಿದ್ಯಾವಂತ. ಕುರಿ ಅಲ್ಲ. ನನಗೆ ಬುದ್ಧಿ ಇದೆ. ನಾನು ದೇಶವನ್ನು ಸಮರ್ಥ ರೀತಿಯಲ್ಲಿ ನಡೆಸುತ್ತೇನೆ ಎಂಬ ಆತ್ಮವಿಶ್ವಾಸವಿದೆ. ನಾಳೆ ಏನಾದ್ರೂ ಪ್ರಧಾನಮಂತ್ರಿ ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ದೇಶದ ಪ್ರಧಾನಿ ಆಗುವುದಿಲ್ಲವೇ?" ಎಂದು ಕಾಗೆ ಪ್ರಶ್ನಿಸಿದ್ದರು.