ETV Bharat / state

ಸಹಕಾರ ಸಂಘಗಳ ಕಾಯ್ದೆ ಸೆಕ್ಷನ್ 128ರ ತಿದ್ದುಪಡಿ ಸಂವಿಧಾನಬಾಹಿರ: ಹೈಕೋರ್ಟ್ - High Court

ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ಸೆಕ್ಷನ್ 128ಎಗೆ ರಾಜ್ಯ ಸರ್ಕಾರ ತಂದ ತಿದ್ದುಪಡಿಯು ಸಂವಿಧಾನಬಾಹಿರ ಎಂದು ಹೈಕೋರ್ಟ್ ಹೇಳಿದೆ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Aug 9, 2024, 7:10 AM IST

ಬೆಂಗಳೂರು: ಸಹಕಾರ ಸಂಘಗಳಲ್ಲಿ ನೇಮಕಾತಿ ವೃಂದ ರಚನೆ, ನೇಮಕಾತಿ, ನೌಕರರ ವರ್ಗಾವಣೆ ಹಾಗೂ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರವನ್ನು ಸಹಕಾರ ಸಂಘಗಳಿಂದ ಮೊಟಕುಗೊಳಿಸಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯು ಸಂವಿಧಾನಬಾಹಿರ ಎಂದು ಹೈಕೋರ್ಟ್ ಆದೇಶಿಸಿದೆ.

ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಕಾಯ್ದೆ-2023ರ ಸೆಕ್ಷನ್ 128ಎ ತಿದ್ದುಪಡಿ ಪ್ರಶ್ನಿಸಿ ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಹಕಾರ ಕೃಷಿ ಸಂಸ್ಥೆಯ ಹಾಲಿ ಅಧ್ಯಕ್ಷ ಕೆ.ವಿ. ಪ್ರಸಾದ್ ಹಾಗೂ ಇತರರು ತಕರಾರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ್ ರಮಾನಾಥ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಅಲ್ಲದೆ, ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎ ತಿದ್ದುಪಡಿ ಸಂವಿಧಾನದ ಪರಿಚ್ಛೇದ 19 (1)(ಸಿ) ಉಲ್ಲಂಘನೆಯಾಗಿದೆ. ಹಾಗಾಗಿ, ತಿದ್ದುಪಡಿಯು ಸಂವಿಧಾನಬಾಹಿರವಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಸಹಕಾರ ಸಂಘಗಳನ್ನು ರಚಿಸಿ, ಅವುಗಳನ್ನು ನಿರ್ವಹಿಸುವುದು ಸಂವಿಧಾನದ ಪರಿಚ್ಛೇದ 19(1)(ಸಿ) ಪ್ರಕಾರ ನಾಗರಿಕರ ಮೂಲಭೂತ ಹಕ್ಕಾಗಿದೆ. ಆದರೆ, ಸರ್ಕಾರ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎ ಗೆ ತಿದ್ದುಪಡಿ ತರುವ ಮೂಲಕ ಸಂವಿಧಾನದತ್ತವಾದ ಆ ಮೂಲಭೂತ ಹಕ್ಕನ್ನು ಮೊಟಕುಗೊಳಿಸಿದೆ. ಕಾನೂನು ಸುವ್ಯವಸ್ಥೆ, ದೇಶದ ಸಮಗ್ರತೆ ಮತ್ತು ಏಕಾಗ್ರತೆಗೆ ಧಕ್ಕೆ ಬರುವ ಅಪಾಯ ಇದ್ದಾಗ, ಸಾರ್ವಜನಿಕ ಸುವ್ಯವಸ್ಥೆ ನಿಯಂತ್ರಣ ಕಳೆದುಕೊಂಡಾಗ ಮೂಲಭೂತ ಹಕ್ಕುಗಳ ಮೇಲೆ ಸೀಮಿತ ನಿರ್ಬಂಧಗಳನ್ನು ಹೇರಬಹುದು. ಆದರೆ, ಈ ಪ್ರಕರಣದಲ್ಲಿ ಅಂತಹ ಸನ್ನಿವೇಶ ಇಲ್ಲ ಎಂದು ಅರ್ಜಿದಾರರರು ವಾದಿಸಿದ್ದಾರೆ.

ಅಲ್ಲದೇ, ಸ್ಥಳೀಯರು ತಾವೇ ಸೇರಿಕೊಂಡು ಕಾನೂನು ರೀತಿ ರಚಿಸಿಕೊಂಡು ನಿರ್ವಹಣೆ ಮಾಡುತ್ತ ಬಂದಿರುವ ಸಹಕಾರ ಸಂಘಗಳಲ್ಲಿನ ನೌಕರರ ನೇಮಕಾತಿ, ವರ್ಗಾವಣೆ, ಶಿಸ್ತು ಕ್ರಮ ಮತ್ತಿತರ ಆಡಳಿತಾತ್ಮಕ ವಿಚಾರಗಳನ್ನು ಆಯಾ ಸಹಕಾರ ಸಂಘಗಳ ಆಡಳಿತ ಮಂಡಳಿಗಳು ನೋಡಿಕೊಳ್ಳುತ್ತಿದ್ದವು. ಈಗ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎಗೆ ರಾಜ್ಯ ಸರ್ಕಾರ 2023ರಲ್ಲಿ ತಿದ್ದುಪಡಿ ತಂದು, ಆ ಎಲ್ಲಾ ಅಧಿಕಾರಗಳನ್ನು ಸಹಕಾರ ಸಂಘಗಳಿಂದ ಮೊಟಕುಕೊಳಿಸಿದೆ. ಇದು ಸಂವಿಧಾನದ ಮೂಲಭೂತ ಹಕ್ಕಿನ ಉಲ್ಲಂಘನೆ ಆಗಲಿದೆ. ಆದ್ದರಿಂದ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎ ಇದರ ತಿದ್ದುಪಡಿಯನ್ನು ಸಂವಿಧಾನಬಾಹಿರವೆಂದು ಘೋಷಿಸಬೇಕು ಎಂದು ಅರ್ಜಿದಾರರು ನ್ಯಾಯಪೀಠಕ್ಕೆ ಕೋರಿದ್ದರು.

ಇದನ್ನೂ ಓದಿ: ಸುನಿಲ್ ಕುಮಾರ್ ವಿರುದ್ಧ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ವಾರಂಟ್‌ಗೆ ಹೈಕೋರ್ಟ್ ತಡೆ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.