ಚಾಮರಾಜನಗರ: ಮಗ ಹಾಗೂ ಆತ್ಮೀಯರಿಗೆ ಸಂದೇಶ ಕಳುಹಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಕೊಳ್ಳೇಗಾಲದಲ್ಲಿ ನಡೆದಿದೆ.
ಕೊಳ್ಳೇಗಾಲದ ಲಕ್ಷ್ಮೀ ನಾರಾಯಣಸ್ವಾಮಿ ದೇವಸ್ಥಾನದ ಬೀದಿಯಲ್ಲಿ ವಾಸವಿದ್ದ ಪಿ.ಆರ್. ನಾಗೇಶ್(55) ಹಾಗೂ ಸತ್ಯಲಕ್ಷ್ಮೀ(44) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ.
ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸಾಯುವ ಮುನ್ನ ಮಗ ಗಣೇಶ್ ಮತ್ತು ಆತ್ಮೀಯರಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದಾರೆ. ಕೊಳ್ಳೇಗಾಲದಲ್ಲಿ ಕುರುಕುರೆ ಏಜೆನ್ಸಿಯನ್ನು ಪಡೆದುಕೊಂಡಿದ್ದ ಇವರು ವ್ಯಾಪಾರದಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದರು. ಖಾಸಗಿ ಹಣಕಾಸು ಕಂಪನಿಯಲ್ಲಿ ಮನೆ ಅಡಮಾನವಿಟ್ಟು ಸಾಲ ಪಡೆಯುವ ಜೊತೆಗೆ ಕೈ ಸಾಲಗಳನ್ನು ಮಾಡಿಕೊಂಡು ಸಾಲದ ಭಾರವನ್ನು ಹೊತ್ತುಕೊಂಡಿದ್ದರು ಎಂದು ತಿಳಿದುಬಂದಿದೆ.
ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಶಂಕೆ - SUSPECTED RAPE ON A GIRL