ETV Bharat / state

ಮಕ್ಕಳಿಲ್ಲದ ಕೊರಗು, ಅನಾರೋಗ್ಯ ಸಮಸ್ಯೆ: ದಾವಣಗೆರೆಯಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ - COUPLE SUICIDE - COUPLE SUICIDE

ವಿಷದ ಗುಳಿಗೆ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ದಂಪತಿಯನ್ನು ಆಸ್ಪತ್ರೆಗೆ ಸಾಗಿಸಿದರೂ, ಪತಿ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದರೆ, ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

Nyamthi Police Station
ನ್ಯಾಮತಿ ಪೊಲೀಸ್​ ಠಾಣೆ (ETV Bharat)
author img

By ETV Bharat Karnataka Team

Published : Jul 23, 2024, 5:09 PM IST

ದಾವಣಗೆರೆ: ಮಕ್ಕಳಿಲ್ಲದ ಕೊರಗಿನಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಭಟ್ಟೋಳ್ ಷಣ್ಮುಖಪ್ಪ(65) ಹಾಗೂ ಇಂದ್ರಮ್ಮ(50) ಆತ್ಮಹತ್ಯೆಗೆ ಶರಣಾಗಿರುವ ದಂಪತಿ.

ದಂಪತಿಗೆ ಮದುವೆಯಾಗಿ 30 ವರ್ಷ ಕಳೆದಿದ್ದು, ಮಕ್ಕಲಾಗಿಲ್ಲವೆಂದು ಮಾನಸಿಕವಾಗಿ ಕುಗ್ಗಿದ್ದರು. ಅಷ್ಟೇ ಅಲ್ಲದೇ ಕೆಲ ದಿನಗಳ ಹಿಂದೆ ಷಣ್ಮುಖಪ್ಪ ಹಾಗೂ ಇಂದ್ರಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು. ತಮ್ಮ ಆರೈಕೆ ಮಾಡುವವರು ಯಾರೂ ಇಲ್ಲ ಎಂದು ಬೇಸರದಲ್ಲಿದ್ದರು ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದ ದಂಪತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಪತಿ ಷಣ್ಮುಖಪ್ಪ ಭಾನುವಾರ ಸಾವನ್ನಪ್ಪಿದರೆ, ಚಿಕಿತ್ಸೆ ಫಲಿಸದೇ ಸೋಮವಾರ ಬೆಳಗ್ಗೆ ಪತ್ನಿ ಸಾವನ್ನಪ್ಪಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಲ್ಲಿಗೇನಹಳ್ಳಿ ಗ್ರಾಮದ ದಂಪತಿ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದರು. ಜೊತೆಗೆ ಮಕ್ಕಳಿಲ್ಲದ ಕಾರಣ ಇಳಿ ವಯಸ್ಸಿನಲ್ಲಿ ನಮ್ಮ ಆರೈಕೆ ಮಾಡುವರು ಯಾರೆಂದು ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದಾಗಿ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಖ್ಯಾತ ಧಾರಾವಾಹಿಗಳ ನಿರ್ದೇಶಕ ವಿನೋದ್ ದೋಂಡಾಲೆ ಆತ್ಮಹತ್ಯೆ - Director Vinod Dondale Suicide

ETV Bharat Logo

Copyright © 2025 Ushodaya Enterprises Pvt. Ltd., All Rights Reserved.