ETV Bharat / state

ಹುಬ್ಬಳ್ಳಿ: ಶಿವರಾತ್ರಿ ಹಬ್ಬಕ್ಕೆ ಸಾಮಗ್ರಿ ಖರೀದಿಗೆ ಬಂದ ದಂಪತಿ ಅಪಘಾತದಲ್ಲಿ ಸಾವು, ಮಗು ಪ್ರಾಣಾಪಾಯದಿಂದ ಪಾರು - accident news

ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಗು ಪ್ರಾಣಾಪಾಯದಿಂದ ಪಾರಾಗಿದೆ.

Etv Bharat
Etv Bharat
author img

By ETV Bharat Karnataka Team

Published : Mar 9, 2024, 3:36 PM IST

ಹುಬ್ಬಳ್ಳಿ: ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ತಾಲೂಕಿನ ಕುಸುಗಲ್ ಗ್ರಾಮದ ಕುಡಿಯುವ ನೀರಿನ ಕೆರೆ ಬಳಿ ಶುಕ್ರವಾರ ರಾತ್ರಿ ನಡೆದಿದೆ. ತಾಲೂಕಿನ ಇಂಗಳಹಳ್ಳಿ ಗ್ರಾಮದ ರಾಜೇಸಾಬ್‌ ನಾಯಕರ(40) ಮತ್ತು ರಾಜನಾ ನಾಯಕರ(35) ದಂಪತಿ ಮೃತಪಟ್ಟವರು. ಡಿಕ್ಕಿ ರಭಸಕ್ಕೆ ರಾಜೇಸಾಬ ಸ್ಥಳದಲ್ಲಿ ಸಾವನನ್ನಪ್ಪಿದರೆ, ತೀವ್ರ ಗಾಯಗೊಂಡ ರಾಜನಾ ಅವರನ್ನು ಕಿಮ್ಸ್​ಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಇಂದು ಮೃತಪಟ್ಟಿದ್ದಾಳೆ.

ಶಿವರಾತ್ರಿ ಪ್ರಯುಕ್ತ ಅಮರಗೋಳ ಎಪಿಎಂಸಿಯಲ್ಲಿ ಸಂತೆ ಸಾಮಾನು ಖರೀದಿಸಿ ಮಗುವಿನ ಜೊತೆ ದಂಪತಿ ಕುಸುಗಲ್ ಮಾರ್ಗವಾಗಿ ಊರಿಗೆ ತೆರಳುತ್ತಿದ್ದರು. ಈ ವೇಳೆ, ಎದುರಿಗೆ ಹೊರಟಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಮಗು ಜಿಗಿದು ಬೇರೆಡೆಗೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದೆ. ಗಂಭೀರ ಗಾಯಗೊಂಡಿದ್ದ ದಂಪತಿ ಮೃತಪಟ್ಟಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಮಾರಾಟ ಮತ್ತು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ ರೌಡಿಶೀಟರ್‌ನ ಗಡಿಪಾರು.

ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದ ರೌಡಿಗಳನ್ನು ಹುಬ್ಬಳ್ಳಿ - ಧಾರವಾಡ ನಗರದಿಂದ ಗಡಿಪಾರು ಮಾಡುವಂತಹ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇಂದು ಹುಬ್ಬಳ್ಳಿ ದಕ್ಷಿಣ ಉಪವಿಭಾಗದ ಕಸಬಾಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಓರ್ವ ರೌಡಿಶೀಟರ್‌ನನ್ನು ಗಡಿಪಾರು ಮಾಡಿ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಆದೇಶ ಹೊರಡಿಸಿದ್ದಾರೆ.

ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಹಳೇ ಹುಬ್ಬಳ್ಳಿ ಕಟಗರ ಓಣಿಯ ಜವೂರ ಫಯಾಜಹೈದ ಬೇಪಾರಿ (28)ಎಂಬಾತನನ್ನು ಮಾ.16 ರಿಂದ 06 ತಿಂಗಳ ಅವಧಿಗೆ ರಾಯಚೂರು ಜಿಲ್ಲೆಯ ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಡಿಪಾರು ಮಾಡಲಾಗಿದೆ.

ಈ ರೌಡಿಶೀಟರ್‌ ಅನಗತ್ಯ ವ್ಯವಹಾರಗಳಲ್ಲಿ ಭಾಗಿಯಾಗಿ ಜನರ ಮೇಲೆ ಹಲ್ಲೆ ಮಾಡುವುದು. ಸಣ್ಣಪುಟ್ಟ ವ್ಯಾಪಾರ ಮಾಡುವವರ ಮೇಲೆ ಗುಂಪು ಕಟ್ಟಿಕೊಂಡು ಹೊಡೆಯುವುದು. ಕೈಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡು ತಿರುಗಾಡುತ್ತ ರೌಡಿಸಂ ತೋರಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಹುಟ್ಟಿಸುವಂತಹ ಪ್ರವೃತ್ತಿ ಹೊಂದಿದ್ದ. ಈತನ ಮೇಲೆ ಕಸಬಾಪೇಟ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ಕೂಡ ದಾಖಲಿಸಲಾಗಿದೆ. ಅಲ್ಲದೇ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ. ಈತನ ಚಟುವಟಿಕೆ ಮೇಲೆ ಸತತ ನಿಗಾ ಇಡಲಾಗಿತ್ತು. ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಈತನನ್ನು ರೆಡ್ ಹ್ಯಾಂಡ್ ಆಗಿ ಸೆರೆಹಿಡಿಯಲಾಗಿತ್ತು. ಈಗಾಗಲೇ ಕಸಬಾಪೇಟ್ ಹಾಗೂ ಬೆಂಡಿಗೇರಿ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಮತ್ತೆ ಕಾನೂನು ಬಾಹಿರ ಚಟುವಟಿಕೆಗಳನ್ನು ಮುಂದುವರೆಸಿದ್ದ ಹಿನ್ನೆಲೆಯಲ್ಲಿ ಕಸಬಾಪೇಟ್ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಸಹ ತೆರೆಯಲಾಗಿದೆ‌.

ಸಮಾಜದಲ್ಲಿ ಆರೋಗ್ಯಕರ ವಾತಾವರಣ ಕಾಯ್ದುಕೊಳ್ಳಲು ಮತ್ತು ಈತನ ಅಪರಾಧಿಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ 06 ತಿಂಗಳ ಅವಧಿಗೆ ಗಡಿಪಾರು ಮಾಡಿ ಆದೇಶಿಸಲಾಗಿದೆ‌. ಈ ಮೂಲಕ ನಗರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗುವವರಿಗೆ ಕಠಿಣ ಕ್ರಮದ ಸಂದೇಶ ನೀಡಲಾಗುತ್ತದೆ ಎಂದು ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌

ಇದನ್ನೂ ಓದಿ: ಹುಬ್ಬಳ್ಳಿ: 'ಜಾಹೀರಾತುಗಳಿಗೆ ಲೈಕ್ಸ್, ರೇಟಿಂಗ್ ಕೊಟ್ಟು ಹಣ ಗಳಿಸಿ' ಸಂದೇಶ ನಂಬಿ 20 ಲಕ್ಷ ಕಳೆದುಕೊಂಡ ವ್ಯಕ್ತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.