ಬೆಂಗಳೂರು : ತಲೆಯ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಹಲಸೂರು ಠಾಣಾ ವ್ಯಾಪ್ತಿಯ ದೊಮ್ಮಲೂರು ಸಮೀಪದ ಬಿಡಿಎ ಪಾರ್ಕ್ ಬಳಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಶಿವಾಜಿನಗರದ ನಿವಾಸಿ ಸತೀಶ್ ಕುಮಾರ್ (32) ಹತ್ಯೆಯಾದ ದುರ್ದೈವಿ.
ಕೊರಿಯರ್ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಸತೀಶ್ ಕುಮಾರ್ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ ಹಲಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
ಇದನ್ನೂ ಓದಿ: ಮಗಳ ಕೊಂದ ಯುವಕನನ್ನು ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಸಾಯಿಸಿದ ಮಹಿಳೆ! - Double Murder
ಗುರುವಾರಷ್ಟೇ ಇಲ್ಲಿಯ ಜೆ.ಪಿ.ನಗರದ ಸಾರಕ್ಕಿ ಪಾರ್ಕ್‌ನಲ್ಲಿ ಶಾಕಾಂಬರಿನಗರ ನಿವಾಸಿ ಅನುಷಾ (25) ಮತ್ತು ಗೊರಗುಂಟೆ ಪಾಳ್ಯ ನಿವಾಸಿ ಸುರೇಶ್ (45) ಎಂಬುವರ ಜೋಡಿ ಕೊಲೆ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ಜೆ.ಪಿ.ನಗರ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ಸಂಬಂಧ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದಿದ್ದಾರೆ.