ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ಅವರು 14 ಬದಲಿ ನಿವೇಶನ ಪಡೆದಿರುವುದಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಸೇರಿ ಹಲವರ ವಿರುದ್ಧ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಖಾಸಗಿ ದೂರಿನ ವಿಚಾರಣೆಯನ್ನು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 9ಕ್ಕೆ ಮುಂದೂಡಿತು.
ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿರುವ ಖಾಸಗಿ ದೂರನ್ನು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಅರ್ಜಿದಾರ ಟಿ.ಜೆ.ಅಬ್ರಹಾಂ ಆಗಸ್ಟ್ 19ರಂದು ಹೈಕೋರ್ಟ್ ಮಾಡಿರುವ ಮಧ್ಯಂತರ ಆದೇಶ ಉಲ್ಲೇಖಿಸಿ ಮೆಮೊ ಸಲ್ಲಿಸಿದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿತು.
ಇದೇ ಆರೋಪದಲ್ಲಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನ ಸ್ವೀಕಾರಾರ್ಹತೆ ಪರಿಗಣಿಸುವುದಕ್ಕೆ ಸಂಬಂಧಿಸಿದ ಆದೇಶವನ್ನು ಆಗಸ್ಟ್ 20ರಂದು ಪ್ರಕಟಿಸುವುದಾಗಿ ನ್ಯಾಯಾಲಯವು ಈ ಹಿಂದೆ ಹೇಳಿತ್ತು. ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಮಂಗಳವಾರ ಇದರ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ನಿಗದಿಪಡಿಸಿದೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಹೈಕೋರ್ಟ್ನಲ್ಲಿ ನಡೆದ ವಾದವೇನು? - Muda Scam