ETV Bharat / state

ದರ್ಶನ್​ಗೆ 2 ವಾರ ಮೈಸೂರಿಗೆ ತೆರಳಲು ನ್ಯಾಯಾಲಯ ಅನುಮತಿ - DARSHAN CAN ENTER MYSURU

ನಟ ದರ್ಶನ್​ಗೆ ಎರಡು ವಾರಗಳ ಕಾಲ ಮೈಸೂರಿಗೆ ತೆರಳಲು ಬೆಂಗಳೂರಿನ ನ್ಯಾಯಾಲಯವು ಅನುಮತಿಸಿದೆ.

darshan
ದರ್ಶನ್ (ETV Bharat)
author img

By ETV Bharat Karnataka Team

Published : 6 hours ago

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್, ಎರಡು ವಾರಗಳ ಕಾಲ ಮೈಸೂರಿಗೆ ತೆರಳಲು ನಗರದ 57ನೇ ಸಿಸಿಹೆಚ್ ನ್ಯಾಯಾಲಯ ಅನುಮತಿ ನೀಡಿದೆ.

ಹತ್ಯೆ ಪ್ರಕರಣದ ಎರಡನೇ ಆರೋಪಿಯಾಗಿರುವ ದರ್ಶನ್ ಪರ ವಕೀಲರು ಅನುಮತಿ‌ ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಿಗೆ ತಿಳಿಸಿತ್ತು. ಗುರುವಾರ ಮಧ್ಯಾಹ್ನ ತಕರಾರು ಅರ್ಜಿ ಸಲ್ಲಿಸಲಾಗಿತ್ತು. ಅದರ ವಿಚಾರಣೆ ನಡೆಸಿದ ಕೋರ್ಟ್​ ಡಿಸೆಂಬರ್​ 20ರಿಂದ ಜನವರಿ 5ರವರೆಗೆ ಮೈಸೂರಿನಲ್ಲಿ ಇರಲು ಅನುಮತಿ ಕೊಟ್ಟಿದೆ.

ಡಿಸೆಂಬರ್ 13ರಂದು ಹೈಕೋರ್ಟ್ ದರ್ಶನ್ ಸೇರಿ ಏಳು ಮಂದಿಗೆ ಜಾಮೀನು ನೀಡಿತ್ತು. ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಕೂಡದು ಎಂದು ಷರತ್ತು ವಿಧಿಸಿತ್ತು. ಈ ಹಿನ್ನೆಲೆಯಲ್ಲಿ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಮೈಸೂರಿಗೆ ತೆರಳಲು ನಾಲ್ಕು ವಾರಗಳ ಕಾಲ ಅನುಮತಿ ಕೇಳಿದ್ದರು.‌ ದರ್ಶನ್ ಅವರು ಮೈಸೂರಿನಲ್ಲಿ ಫಾರ್ಮ್ ಹೌಸ್ ಹೊಂದಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಬಿಡುಗಡೆ ಬಳಿಕ ಭಗವದ್ಗೀತೆ ಹಿಡಿದು ಜೈಲಿನಿಂದ ಹೊರಬಂದ ಅನುಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.