ETV Bharat / state

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಂಧಿತರ ಎನ್ಐಎ ಕಸ್ಟಡಿ ಅವಧಿ ವಿಸ್ತರಣೆ - Rameshwaram Cafe Blast

ದಿ ರಾಮೇಶ್ವರಂ ಕೆಫೆ ಸ್ಫೋಟದ ಪ್ರಮುಖ ಇಬ್ಬರು ಆರೋಪಿಗಳ ಎನ್ಐಎ ಕಸ್ಟಡಿ ಅವಧಿ ವಿಸ್ತರಣೆ ಮಾಡಲಾಗಿದೆ.

rameshwaram-cafe-blast
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಂಧಿತರ ಎನ್ಐಎ ಕಸ್ಟಡಿ ಅವಧಿ ವಿಸ್ತರಣೆ
author img

By ETV Bharat Karnataka Team

Published : Apr 22, 2024, 5:53 PM IST

ಬೆಂಗಳೂರು: ನಗರದ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಆರೋಪಿಗಳ ಎನ್ಐಎ ಕಸ್ಟಡಿ ಅವಧಿ ವಿಸ್ತರಿಸಲಾಗಿದೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜೀಬ್​ರನ್ನು ಏಪ್ರಿಲ್ 29ರವರೆಗೂ ಎನ್ಐಎ ವಶಕ್ಕೆ ಒಪ್ಪಿಸಿ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಏಪ್ರಿಲ್ 12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದ ಎನ್ಐಎ ಅಧಿಕಾರಿಗಳು ಬೆಂಗಳೂರಿಗ ಕರೆತಂದಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಕಸ್ಟಡಿ ಅವಧಿ ಇಂದು (ಸೋಮವಾರ) ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದ ಎನ್ಐಎ ಅಧಿಕಾರಿಗಳು ಹೆಚ್ಚಿನ ತನಿಖೆಗಾಗಿ ಪುನಃ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು.

ಮಾರ್ಚ್ 1ರಂದು ಐಟಿಪಿಎಲ್ ರಸ್ತೆಯಲ್ಲಿನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರಸಹಿತ 9 ಜನರು ಗಾಯಗೊಂಡಿದ್ದರು. ಪ್ರಮುಖ ಆರೋಪಿಯ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಲಾಗಿತ್ತು. ಪ್ರಕರಣ ಸಂಬಂಧ ಹಲವೆಡೆ ದಾಳಿ, ಶೋಧ ನಡೆಸಿದ್ದ ಎನ್​ಐಎ ಅಧಿಕಾರಿಗಳು 40ಕ್ಕೂ ಅಧಿಕ ದಿನಗಳ ಬಳಿಕ ಕೋಲ್ಕತ್ತಾದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: ಕೆಫೆ ಸ್ಫೋಟ: ಕಲಬುರಗಿ, ಥಾಣೆ ಜನರ ಹೆಸರಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿದ್ದ ಉಗ್ರರು - Cafe Blast

ETV Bharat Logo

Copyright © 2024 Ushodaya Enterprises Pvt. Ltd., All Rights Reserved.