ಮೈಸೂರು: ಸಂಸದ ಪ್ರತಾಪ್ ಸಿಂಹ ಕುರಿತಂತೆ ಅವರ ವಿರುದ್ಧ ಪತ್ರಿಕಾಗೋಷ್ಠಿ ನಡೆಸದಂತೆ ಕೆಪಿಸಿಸಿ ಮಾಧ್ಯಮ ವಕ್ತಾರ ಎಂ ಲಕ್ಷ್ಮಣ್ ಅವರಿಗೆ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ ಸಮನ್ಸ್ ಕೂಡ ಜಾರಿ ಮಾಡಿದೆ.
ಮೈಸೂರು - ಕೊಡಗು ಸಂಸದ ಪ್ರತಾಪ್ ಸಿಂಹ ಕುರಿತ ಪತ್ರಿಕಾಗೋಷ್ಠಿಗಳ ವಿಚಾರವಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇನ್ಮುಂದೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಯಾವುದೇ ಪತ್ರಿಕೆ ಹಾಗೂ ಟಿವಿ ಮಾಧ್ಯಮಕ್ಕೆ ಹೇಳಿಕೆ ನೀಡುವಂತಿಲ್ಲ. ಸ್ಥಳೀಯ ಕೇಬಲ್ ಚಾನಲ್, ರೇಡಿಯೋ, ಸಾಮಾಜಿಕ ಮಾಧ್ಯಮ ಯಾವುದರಲ್ಲೂ ಯಾವುದೇ ಸ್ವರೂಪದ ಹೇಳಿಕೆ ನೀಡುವಂತಿಲ್ಲ. ಅವರ ವಿರುದ್ಧ ಪತ್ರಿಕಾಗೋಷ್ಠಿ ನಡೆಸುವಂತಿಲ್ಲ ಎಂದು ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಲಕ್ಷ್ಮಣ್ ಅವರಿಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಅಲ್ಲದೆ ಫೆ.13 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಲಕ್ಷ್ಮಣ್ ಅವರಿಗೆ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಸಮನ್ಸ್ ಜಾರಿ ಮಾಡಿ, ಆದೇಶ ಹೊರಡಿಸಿದೆ.
ಇದನ್ನೂ ಓದಿ: ಕನ್ನಡ ಬೋರ್ಡ್ ಕಡ್ಡಾಯ ಸುಗ್ರೀವಾಜ್ಞೆ ರಾಜ್ಯಪಾಲರಿಂದ ವಾಪಸ್: ಅಧಿವೇಶನದಲ್ಲಿ ಅನುಮೋದನೆ ಎಂದ ಡಿಸಿಎಂ