ETV Bharat / state

ಜಯಲಲಿತಾ ಗಳಿಸಿದ್ದ ವಸ್ತುಗಳು ತಮಿಳುನಾಡಿಗೆ: ಪ್ರಕರಣದ ವೆಚ್ಚವಾಗಿ ₹5 ಕೋಟಿ ನೀಡಲು ಅಲ್ಲಿನ ಸರ್ಕಾರಕ್ಕೆ ಸೂಚಿಸಿದ ಕೋರ್ಟ್​

ತಮಿಳುನಾಡಿನ ದಿವಂಗತ ಮಾಜಿ ಸಿಎಂ ಜೆ. ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂ. ಮೌಲ್ಯದ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವಂತೆ ಬೆಂಗಳೂರಿನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

court-instructs-jayalalitha-to-hand-over-her-earned-property-to-tamil-nadu-government
Etv Bharatcourt-instructs-jayalalitha-to-hand-over-her-earned-property-to-tamil-nadu-government
author img

By ETV Bharat Karnataka Team

Published : Jan 22, 2024, 10:33 PM IST

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂ. ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ಆರ್​ಟಿಐ ಕಾರ್ಯಕರ್ತ ಟಿ.ನರಸಿಂಹ ಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯ, ಜಯಲಲಿತಾ ಅವರ ಒಡೆವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಕರ್ನಾಟಕದ ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶಿಸಿದೆ. ಅಲ್ಲದೆ, ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗಾಗಿ ವೆಚ್ಚವಾಗಿರುವ ಐದು ಕೋಟಿ ಹಣವನ್ನು ಡಿಡಿ ರೂಪದಲ್ಲಿ ಕರ್ನಾಟಕ ಸರ್ಕಾರಕ್ಕೆ ಪಾವತಿಸುವಂತೆ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ.

ಇದಕ್ಕೂ ಮುನ್ನ ಪ್ರಕರಣದಲ್ಲಿ ರಾಜ್ಯ ಸರ್ಕಾರಿ ವಿಶೇಷ ಅಭಿಯೋಜಕರಾಗಿರುವ ಕಿರಣ್ ಎಸ್. ಜವಳಿ, ಜಪ್ತಿಯಾದ ಜಯಲಲಿತಾ ಅವರ ಆಸ್ತಿ-ವಸ್ತುಗಳ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಲಲಿತಾಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂ. ದಂಡ ವಿಧಿಸಿ 2014ರ ಸೆ.27ರಂದು ಆದೇಶಿಸಿತ್ತು.

ಜತೆಗೆ, ಜಪ್ತಿ ಮಾಡಲಾದ ಜಯಲಲಿತಾ ಅವರ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು. ಇದರಿಂದ ಆರ್​ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ಜಯಲಲಿತಾ ಅವರ ವಸ್ತುಗಳ ವಿಲೇವಾರಿಗೆ ಕೈಗೊಂಡಿರುವ ಕ್ರಮದ ಮಾಹಿತಿ ನೀಡುವ ಸಂಬಂಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಜಯಲಲಿತಾರಿಂದ ಜಪ್ತಿ ಮಾಡಿದ್ದ ವಸ್ತುಗಳು ಯಾವು?: 7040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರ ಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜೆರೇಟರ್,10 ಟಿವಿ ಸೆಟ್ , 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೇಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂ. ನಗದು ಸೇರಿದಂತೆ ಹಲವು ವಸ್ತುಗಳು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.

ಇದನ್ನೂ ಓದಿ:ಮರ ನೆಡಲು ನೀಡಿದ ಜಮೀನು ಸಾರ್ವಜನಿಕರಿಗೆ ಮಂಜೂರು ಮಾಡಿದಂತಾಗುವುದಿಲ್ಲ: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.