ETV Bharat / state

ಹೆಚ್​.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಎಸ್​ಐಟಿಗೆ ಕೋರ್ಟ್ ನೋಟಿಸ್​ - HASSAN PEN DRIVE CASE

ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ಸಂಬಂಧ ವಿಶೇಷ ತನಿಖಾ ತಂಡ (ಎಸ್ಐಟಿ)ಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.

court notice
ಎಸ್​ಐಟಿಗೆ ಕೋರ್ಟ್ ನೋಟಿಸ್​ (Etv Bharat)
author img

By ETV Bharat Karnataka Team

Published : May 2, 2024, 6:30 PM IST

Updated : May 2, 2024, 7:58 PM IST

ಬೆಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ನ್ಯಾಯಾಲಯ ವಿಶೇಷ ತನಿಖಾ ತಂಡಕ್ಕೆ (ಎಸ್​ಐಟಿ) ನೋಟಿಸ್​ ಜಾರಿ ಮಾಡಿ ಆದೇಶಿಸಿದೆ.

ಬಂಧನ ಭೀತಿಯಲ್ಲಿದ್ದ ಹೆಚ್.​ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಪ್ರಕರಣ ಸಂಬಂಧ ವಿಶೇಷ ಪಬ್ಲಿಕ್​ ಪ್ರಾಸಿಕ್ಯೂಟರ್​ ಅವರಿಗೆ ನೋಟಿಸ್​ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಅಲ್ಲದೆ, ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಎಫ್ಐಆರ್​​ನಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಆರೋಪಗಳಿವೆ. ಹೀಗಾಗಿ, ನಿರೀಕ್ಷಣಾ ಜಾಮೀನು ಅರ್ಜಿ ಹೇಗೆ ಊರ್ಜಿತವಾಗುತ್ತದೆ. ನೀವು ವಿಚಾರಣಾ ನ್ಯಾಯಾಲಯದಲ್ಲಿ ನೇರವಾಗಿ ಹಾಜರಾಗಬಹುದಿತ್ತಲ್ಲ ಎಂದು ರೇವಣ್ಣ ಪರ ಹಿರಿಯ ವಕೀಲರಿಗೆ ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ಎಫ್ಐಆರ್​​ನಲ್ಲಿ ಜಾಮೀನು ನೀಡಬೇಕಾದ ಆರೋಪಗಳಿವೆ. ಆದರೆ ಮ್ಯಾಜಿಸ್ಟ್ರೇಟ್​​ಗೆ ಅತ್ಯಾಚಾರ ಆರೋಪ ಸೇರಿಸಲು ಮನವಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ಹೆಚ್.ಡಿ.ರೇವಣ್ಣ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಎಸ್ಐಟಿ ಸಲ್ಲಿಸಿದ ಅರ್ಜಿಯ ವಿವರ ಇನ್ನೂ ಲಭ್ಯವಿಲ್ಲ. ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮನವಿ ಮಾಡಿದರು.

ಈ ಸಂಬಂಧ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯವು ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಎಸ್​ಐಟಿಗೆ​​ ಸೂಚನೆ ನೀಡಿ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹೊಳೆನರಸೀಪುರ ಶಾಸಕ ಹೆಚ್​.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಇಬ್ಬರೂ ನಾಯಕರ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಹಿಂದೆ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ದೂರು ನೀಡಿದ್ದು, ಅದರ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಎಫ್​ಐಆರ್​ನಲ್ಲಿ ಹೆಚ್.ಡಿ.ರೇವಣ್ಣ ಎ1 ಹಾಗೂ ಪ್ರಜ್ವಲ್ ರೇವಣ್ಣ ಅವರನ್ನು ಎ2 ಆರೋಪಿಯಾಗಿ ನಮೂದಿಸಲಾಗಿದೆ. ಐಪಿಸಿ ಸೆಕ್ಷನ್​ 354A, 354D, 506, 509ರ ಅಡಿ ಪ್ರಕರಣ ದಾಖಲಾಗಿದೆ.

ವಿಶೇಷ ತನಿಖಾ ತಂಡ ರಚನೆ: ಈ ನಡುವೆ ಅಶ್ಲೀಲ ವಿಡಿಯೋ ವೈರಲ್​ ಪ್ರಕರಣ ಗಂಭೀರತೆ ಪರಿಗಣಿಸಿದ್ದ ಸರ್ಕಾರಕ್ಕೆ ಕೆಲವು ಸಂಘಟನೆಗಳು ಮತ್ತು ನೊಂದ ಸಂತ್ರಸ್ತೆ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ದೂರಿನ ಬಳಿಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ವೈರಲ್​ ಆಗುತ್ತಿರುವ ಅಶ್ಲೀಲ ವಿಡಿಯೋ ಹಾಗೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕುರಿತಂತೆ ತನಿಖೆ ನಡೆಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅದರ ಅನ್ವಯ ರಾಜ್ಯ ಸರ್ಕಾರವು ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಿ ಆದೇಶಿಸಿತ್ತು.

ಇದನ್ನೂ ಓದಿ: ಲುಕ್​ ಔಟ್ ನೊಟೀಸ್ ಜಾರಿ: ಪ್ರಜ್ವಲ್​​​ ರೇವಣ್ಣ ವಿಚಾರಣೆಗೆ ಗೈರಾದರೆ ಬಂಧನ ಸಾಧ್ಯತೆ - Look out notice issued

Last Updated : May 2, 2024, 7:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.