ಹುಬ್ಬಳ್ಳಿ : ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಜಲಿ ಹತ್ಯೆ ಹಂತಕ ವಿಶ್ವ ಅಲಿಯಾಸ್ ಗಿರೀಶನನ್ನು ಜೂನ್ 16 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಸಿಐಡಿ ಕಸ್ಟಡಿ ಮುಗಿದ ಹಿನ್ನೆಲೆ ಗುರುವಾರ ಹಂತಕ ಗಿರೀಶನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ, ಮೂರನೇ ಜೆಎಮ್ಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ನಾಗೇಶ ನಾಯಕ ವಿಚಾರಣೆ ನಡೆಸಿ, ಜೂನ್ 16 ರವರೆಗೂ ವಿಶ್ವನಿಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.
ಘಟನೆಯ ಹಿನ್ನೆಲೆ : ಪ್ರೀತಿ ನಿರಾಕರಿಸಿದ ಕಾರಣಕ್ಕೆ ಕೋಪಗೊಂಡ ವಿಶ್ವನಾಥ ಅಲಿಯಾಸ್ ಗಿರೀಶ್ ಎಂಬಾತ ಮೇ.15ರಂದು ಅಂಜಲಿ ಅಂಬಿಗೇರ ಎಂಬ ಯುವತಿಯ ಮನೆಗೆ ನುಗ್ಗಿ ಆಕೆಗೆ ಚಾಕುವಿನಿಂದ ಇರಿದು, ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ.
ಇದನ್ನೂ ಓದಿ : ಅಂಜಲಿ ಕೊಲೆ ಪ್ರಕರಣ : ದಾವಣಗೆರೆಯಲ್ಲಿ ಚಾಕು ಪತ್ತೆ, ಮುಂದುವರೆದ ಆರೋಪಿ ವಿಚಾರಣೆ - ANJALI MURDER CASE