ETV Bharat / state

ಮನೆಯೂಟಕ್ಕೆ ಅನುಮತಿ ಕೋರಿ ದರ್ಶನ್ ಅರ್ಜಿ: ಆದೇಶ ಕಾಯ್ದಿರಿಸಿದ ನ್ಯಾಯಾಲಯ - Darshan Petition for Home Meal - DARSHAN PETITION FOR HOME MEAL

ಮನೆ ಊಟಕ್ಕೆ ಅನುಮತಿ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ನ್ಯಾಯಾಲಯವು ಕಾಯ್ದಿರಿಸಿದೆ.

darshan
ದರ್ಶನ್ (ETV Bharat)
author img

By ETV Bharat Karnataka Team

Published : Jul 22, 2024, 5:36 PM IST

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅವರು ಮನೆ ಊಟಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಕೋರ್ಟ್​ ಜುಲೈ 25ಕ್ಕೆ ಕಾಯ್ದಿರಿಸಿದೆ.

ದರ್ಶನ್ ಸಲ್ಲಿಸಿದ್ದ ಅರ್ಜಿಯ ವಾದ ಪ್ರತಿವಾದ ಆಲಿಸಿದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ (ಇನ್ಚಾರ್ಜ್), ತೀರ್ಪನ್ನು ಜುಲೈ 25ಕ್ಕೆ ಕಾಯ್ದಿರಿಸಿದೆ. ದರ್ಶನ್ ಪರ ವಕೀಲ ರಾಘವೇಂದ್ರ ಹಾಗೂ ಪೊಲೀಸರ ಪರ ಸರ್ಕಾರಿ ವಿಶೇಷ ಅಭಿಯೋಜಕ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಿದ್ದರು.

ಇದನ್ನೂ ಓದಿ: ಮನೆಯೂಟ ಕೇಳಿದ್ದ ದರ್ಶನ್​​​: ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌ - Darshan Application Hearing

''ಜೈಲಿನಲ್ಲಿ ನೀಡುತ್ತಿರುವ ಆಹಾರವನ್ನು ತಮ್ಮಿಂದ ಜೀರ್ಣಿಸಿಕೊಳ್ಳಲಾಗದೇ, ಅತಿಸಾರ ಉಂಟಾಗಿದೆ. ಪದೇ ಪದೆ ಭೇದಿಯಾಗುತ್ತಿದೆ. ಪರಿಣಾಮ ದೇಹದ ತೂಕ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಆಹಾರದೊಂದಿಗೆ ಹಾಸಿಗೆ ಹಾಗೂ ಪುಸ್ತಕಗಳನ್ನು ತರಿಸಿಕೊಳ್ಳಲು ಜೈಲು ಅಧಿಕಾರಿಗಳಿಗೆ ಮೌಖಿಕವಾಗಿ ಮನವಿ ಮಾಡಿದ್ದೆ. ಆದರೆ, ಅವರು ಇದಕ್ಕೆ ಒಪ್ಪಿರಲಿಲ್ಲ'' ಎಂದು ದರ್ಶನ್, ಅನುಮತಿ ಕಲ್ಪಿಸುವಂತೆ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು.

ಇದನ್ನೂ ಓದಿ: ಮನೆ ಊಟಕ್ಕೆ ಅವಕಾಶ ಕೋರಿ ದರ್ಶನ್​ ಅರ್ಜಿ: ಎಸ್​ಐಟಿಗೆ ಕೋರ್ಟ್​​ ನೋಟಿಸ್​ - Darshan Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.