ETV Bharat / state

ಸೂರಜ್ ರೇವಣ್ಣ ಜಾಮೀನು ಅರ್ಜಿ ಕಾಯ್ದಿರಿಸಿದ ನ್ಯಾಯಾಲಯ - Suraj Revanna

ಸೂರಜ್ ರೇವಣ್ಣ ಜಾಮೀನು ಅರ್ಜಿ ಕಾಯ್ದಿರಿಸಿದ ನ್ಯಾಯಾಲಯವು, ಜುಲೈ 18ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.

SURAJ REVANNA BAIL APPLICATION
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (ETV Bharat)
author img

By ETV Bharat Karnataka Team

Published : Jul 16, 2024, 6:59 AM IST

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಮತ್ತು ಜೀವ ಬೆದರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ಕಾಯ್ದಿರಿಸಿದೆ.

ಸೂರಜ್ ಆಪ್ತ ಎಂ.ಎಲ್. ಶಿವಕುಮಾರ್ ದಾಖಲಿಸಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿದ್ದು, ಜುಲೈ 18ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಸೂರಜ್ ಆಪ್ತ ಎನ್ನಲಾದ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಸೂರಜ್ ರೇವಣ್ಣ, ಚನ್ನರಾಯಪಟ್ಟಣದ ರಕ್ಷಿತ್ ಮತ್ತು ಹಾಸನದ ಸಚಿನ್ ವಿರುದ್ಧ ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಸೂರಜ್ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಚೇತನ್ ವಿರುದ್ಧ ದೂರು ಕೊಡಿಸಲು ಸಚಿನ್, ರಕ್ಷಿತ್ ಮೂಲಕ ತನ್ನ ಮೇಲೆ ಒತ್ತಡ ಹೇರಿದ್ದಾರೆ. ಸೂರಜ್ ಪ್ರಭಾವಿ ಕುಟುಂಬದವರಾಗಿದ್ದು ಭಯದಿಂದ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ ಎಂದು ಶಿವಕುಮಾರ್ ದೂರಿನಲ್ಲಿ ವಿವರಿಸಿದ್ದಾರೆ.

ಚೇತನ್ ಎಂಬಾತ ಸೂರಜ್ ಮತ್ತು ಶಿವಕುಮಾರ್ ವಿರುದ್ಧ ದಾಖಲಿಸಿರುವ ಪ್ರಕರಣದಲ್ಲಿ ಸೂರಜ್ ನಿಯಮಿತ ಜಾಮೀನು ಕೋರಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಮಂಗಳವಾರ ನಡೆಸಲಿದೆ.

ಇದನ್ನೂ ಓದಿ: ಕಾನೂನು ಭಯವಿರಬೇಕಾದರೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರ ನಿಯಂತ್ರಣ ಅಗತ್ಯ: ಹೈಕೋರ್ಟ್ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.