ETV Bharat / state

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಕೋರ್ಟ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರ ಜಾಮೀನು ಅರ್ಜಿಯ ತೀರ್ಪನ್ನು ಜನಪ್ರತಿನಿಧಿಗಳ ನ್ಯಾಯಾಲಯ ಕಾಯ್ದಿರಿಸಿದೆ.

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ (ETV Bharat)
author img

By ETV Bharat Karnataka Team

Published : Oct 10, 2024, 9:35 PM IST

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (ಕೆಎಂವಿಎಸ್‌ಟಿಡಿಸಿಎಲ್) ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) ದಾಖಲಿಸಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ಪೂರ್ಣಗೊಳಿಸಿ, ಆದೇಶವನ್ನು ಕಾಯ್ದಿರಿಸಿದೆ.

ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ನಾಗೇಂದ್ರ ಮತ್ತು ನೆಕ್ಕುಂಟಿ ನಾಗರಾಜ್ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಕಾಯ್ದಿರಿಸಿದರು.

ಇದೇ ಆರೋಪ ಸಂಬಂಧ ಸೆಪ್ಟೆಂಬರ್ 9ರಂದು ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಕಾಯಿದೆಯ ಸೆಕ್ಷನ್ 3 ಮತ್ತು 4ರ ಅಡಿಯ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ 4,970 ಪುಟಗಳ ಆರೋಪಪಟ್ಟಿ ಹಾಗೂ 144 ಪುಟಗಳ ದೂರು ಸಲ್ಲಿಸಿತ್ತು. ಪ್ರಕರಣದಲ್ಲಿ ನಾಗೇಂದ್ರ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಒಟ್ಟಾರೆ 84 ಕೋಟಿ ರೂ.ಯನ್ನು ಅಕ್ರಮವಾಗಿ ಬಳಕೆ ಮಾಡಲಾಗಿದೆ. ನಾಗೇಂದ್ರ ಅವರು ನಕಲಿ ಖಾತೆ ಸೃಷ್ಟಿಸಲು ಸೂಚಿಸಿ, ಹಣ ವರ್ಗಾವಣೆ ಮಾಡಲು ನಿರ್ದೇಶಿಸಿದ್ದಾರೆ. ನಾಗೇಂದ್ರ ಸೂಚನೆಯಂತೆ ಪದ್ಮನಾಭರಿಂದ ಹಣ ವರ್ಗಾವಣೆಯಾಗಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಒಳಸಂಚು ರೂಪಿಸಿದ್ದು, ಆ ನಂತರ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ಬಳಿಕ ವಸಂತ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ನಾಗೇಂದ್ರ ಸಭೆ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪದ್ಮನಾಭ ಅವರನ್ನು ನಾಗೇಂದ್ರ ಆಪ್ತನಾದ ನೆಕ್ಕಂಟಿ ನಾಗರಾಜ್ ಮೂಲಕ ನೇಮಕ ಮಾಡಲಾಗಿತ್ತು ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳಕೆ ಮಾಡಲಾಗಿದೆ. ನಾಗೇಂದ್ರ ಆಪ್ತ ಸಹಾಯಕನಾದ 8ನೇ ಆರೋಪಿ ವಿಜಯ್ ಕುಮಾರ್ ಮೊಬೈಲಿನಲ್ಲಿ ಹಣದ ಮೊತ್ತ, ಯಾರಿಗೆಲ್ಲಾ ಪೂರೈಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಜೈಲಿನಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ: ಬಂಧನದಲ್ಲಿ ಪ್ರಕರಣದಲ್ಲಿ ಸದ್ಯ 15 ಸಾಕ್ಷ್ಯಗಳ ಕಲೆ ಹಾಕಲಾಗಿದ್ದು, ನಾಗೇಂದ್ರ 5.26 ಕೋಟಿ ರೂಪಾಯಿ ಬಳಕೆ ಮಾಡಿದ್ದಾರೆ. ಆದರೆ, ಈ ಸಂಬಂಧ ಉತ್ತರಿಸಲು ನಾಗೇಂದ್ರ ನಿರಾಕರಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಶಾಸಕರಾದ ಬಿ.ನಾಗೇಂದ್ರ ಜುಲೈ 22ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಪೂರ್ಣ: ಸೋಮವಾರ ಬೇಲ್ ಭವಿಷ್ಯ ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.