ETV Bharat / state

ಪರಿಹಾರದ 55 ಲಕ್ಷ ರೂಪಾಯಿ ಬಾಕಿ ಇಟ್ಟುಕೊಂಡ ಸಂಸ್ಥೆ: ಸಾರಿಗೆ ವಾಹನ ಜಪ್ತಿ - COURT JUDGMENT

ಪರಿಹಾರ ಮೊತ್ತ ನೀಡದ್ದರಿಂದ ಸಾರಿಗೆ ಇಲಾಖೆಯ ವಾಹನವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

COURT SEIZED KSRTC BUS
ಜಪ್ತಿ ಮಾಡಲಾದ ಸಾರಿಗೆ ಬಸ್​ (ETV Bharat)
author img

By ETV Bharat Karnataka Team

Published : Jan 21, 2025, 3:18 PM IST

ಗಂಗಾವತಿ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಸಂತ್ರಸ್ತರ ಕುಟುಂಬಕ್ಕೆ ನೀಡಬೇಕಿದ್ದ ಪರಿಹಾರ ಮೊತ್ತವನ್ನು ಕಳೆದ ಐದು ವರ್ಷದಿಂದ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ಇಲ್ಲಿನ ನ್ಯಾಯಾಲಯದ ಸಿಬ್ಬಂದಿ, ಮಂಗಳವಾರ ಸಾರಿಗೆ ಇಲಾಖೆಯ ವಾಹನವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಯ್ದಿದ್ದಾರೆ.

ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ವಕೀಲರಾದ ಗೋವಿಂದರಾಜು, ಕವಿತಾ ನೇತೃತ್ವದಲ್ಲಿ ಆಗಮಿಸಿದ ನ್ಯಾಯಾಲಯದ ಸಿಬ್ಬಂದಿಗಳಾದ ಯಸೂಫ್ ಮಿಯಾ, ರಮೇಶ, ಉಸ್ಮಾನ್, ಸೈಯದ್ಖಾದರ್, ವೆಂಕಟೇಶ ಇತರರು, ಕೊಪ್ಪಳ ಘಟಕಕ್ಕೆ ಸೇರಿದ ವಾಹನವನ್ನು ಜಪ್ತಿ ಮಾಡಿಕೊಂಡು ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ವಕೀಲ ಗೋವಿಂದು, ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಸುರೇಶ ಮತ್ತು ಗಾಯಾಳು ನರಸಪ್ಪ ಎಂಬ ಇಬ್ಬರಿಗೆ ನ್ಯಾಯಾಲಯವು 55 ಲಕ್ಷ ಮೊತ್ತದ ಪರಿಹಾರಕ್ಕೆ ಆದೇಶಿಸಿದೆ. ಇನ್ನುಳಿದ ಗಾಯಾಳುಗಳ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿ ಬಾಕಿ ಇದೆ. ಇದೀಗ 55 ಲಕ್ಷ ಮೊತ್ತದ ಪರಿಹಾರಕ್ಕೆ ಸಾರಿಗೆ ಇಲಾಖೆಯ ವಾಹನ ಜಪ್ತಿ ಮಾಡಲಾಗಿದೆ. ನಿಗದಿತ ಅವಧಿಯಲ್ಲಿ ಇಲಾಖೆಯ ಅಧಿಕಾರಿಗಳು ಪರಿಹಾರದ ಮೊತ್ತ ಪಾವತಿಸದೇ ಹೋದಲ್ಲಿ ಜಪ್ತಿ ಮಾಡಿದ ವಾಹನವನ್ನು ನ್ಯಾಯಾಲಯ ಹರಾಜು ಮಾಡಲಿದೆ. ನಿರೀಕ್ಷಿತ ಪರಿಹಾರದ ಮೊತ್ತ ಸಿಗದಿದ್ದಲ್ಲಿ ಬಾಕಿ ಮೊತ್ತಕ್ಕೆ ಮತ್ತೆ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದರು.

ಘಟನೆ ಹಿನ್ನೆಲೆ: 2018ರಲ್ಲಿ ಮರಳಿ ಮತ್ತು ಜಂಗಮರ ಕಲ್ಗುಡಿ ಮಧ್ಯೆ ಇರುವ ಟೋಲ್​ಗೆಟ್​ ಸಮೀಪ ನಡೆದಿದ್ದ ರಸ್ತೆ ಅಪಘಾತದಲ್ಲಿ ಜಂಗಮರ ಕಲ್ಗುಡಿ ಗ್ರಾಮದ ಸುರೇಶ ಬಸಪ್ಪ ಹೊಸೂರು (25) ಎಂಬ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.

ಇದೇ ಘಟನೆಯಲ್ಲಿ ನರಸಪ್ಪ ಗಿಡ್ಡಪ್ಪ ಮಂಗಳಾಪುರ, ಯಮನೂರಪ್ಪ ಲಿಂಗಪ್ಪ ಬಾಲವಂಚಿ, ಹನುಮಂತ ಕಲ್ಗುಡಿ ಎಂಬುವವರಿಗೆ ತೀವ್ರ ಗಾಯಗಳಾಗಿದ್ದವು. ಮೃತ ಸುರೇಶನ ಕುಟುಂಬಕ್ಕೆ 45 ಲಕ್ಷ ಹಾಗೂ ನರಸಪ್ಪ ಎಂಬ ಗಾಯಾಳುವಿಗೆ 10 ಲಕ್ಷ ಪಾವತಿ ಮಾಡುವಂತೆ 2019ರಲ್ಲಿ ಇಲ್ಲಿನ ಸಿನಿಯರ್ ಸಿವಿಲ್ ನ್ಯಾಯಾಲಯ ಆದೇಶ ಮಾಡಿತ್ತು. ಆದರೆ, ಕಳೆದ ಐದು ವರ್ಷದಿಂದ ಯಾವುದೇ ಪರಿಹಾರ ನೀಡಲು ಸಾರಿಗೆ ಇಲಾಖೆ ಮುಂದಾಗದ ಹಿನ್ನೆಲೆ, ನ್ಯಾಯಾಲವು, ಈಶಾನ್ಯ ಸಾರಿಗೆ ಸಂಸ್ಥೆಗೆ ಯಾವುದೇ ವಾಹನ, ವಸ್ತುಗಳನ್ನು ಜಪ್ತಿ ಮಾಡಿಕೊಂಡು ಬರುವಂತೆ ಸಿಬ್ಬಂದಿಗೆ ಆದೇಶ ನೀಡಿತ್ತು.

ಇದನ್ನೂ ಓದಿ: ಕೆಮಿಕಲ್‌ ಸೇಂದಿ ತಯಾರಿಸುತ್ತಿದ್ದ ಮನೆಯ ಮೇಲೆ ದಾಳಿ: ಸೇಂದಿ ಜಪ್ತಿ, ಮೂವರು ವಶಕ್ಕೆ - CHEMICAL SENDHI SEIZED

ETV Bharat Logo

Copyright © 2025 Ushodaya Enterprises Pvt. Ltd., All Rights Reserved.