ETV Bharat / state

ಚನ್ನಪಟ್ಟಣ ಉಪಚುನಾವಣೆ: 'ನನಗೆ ಟಕೆಟ್ ಸಿಗುವುದು ಬಹುತೇಕ ಖಚಿತ'- ಸಿ.ಪಿ.ಯೋಗೇಶ್ವರ್ - Channapatna By Election

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್‌ ಹಂಚಿಕೆ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್​ ವಿಶ್ವಾಸದ ಮಾತುಗಳನ್ನಾಡಿದ್ದಾರೆ.

CP YOGESHWAR REACT ON BYPOLL TICKET
ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್​ (ETV Bharat)
author img

By ETV Bharat Karnataka Team

Published : Aug 22, 2024, 7:32 PM IST

ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪ್ರತಿಕ್ರಿಯೆ​ (ETV Bharat)

ರಾಮನಗರ: "ಎನ್‍ಡಿಎ ಮೈತ್ರಿ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ಶೀಘ್ರವೇ ತೆರೆಬೀಳಲಿದೆ. ನನಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಸಿಗುವುದು ಬಹುತೇಕ ಖಚಿತ" ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್​ ವಿಶ್ವಾಸ ವ್ಯಕ್ತಪಡಿಸಿದರು.

ಚನ್ನಪಟ್ಟಣದಲ್ಲಿಂದು ಮಾತನಾಡಿದ ಅವರು, "ಕ್ಷೇತ್ರದ ಎನ್‍ಡಿಎ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಾಜ್ಯದ ಬಿಜೆಪಿ ನಾಯಕರು ನನ್ನ ಪರವಾಗಿ ಮಾತನಾಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಎರಡು ಬಾರಿ ಭೇಟಿ ಮಾಡಿದ್ದು, ಅವರೂ ಸಹ ನನಗೆ ಟಿಕೆಟ್​ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳನ್ನು ನೋಡಿಕೊಂಡು ಬರುವ ಸೋಮವಾರ ಮೈತ್ರಿ ಅಭ್ಯರ್ಥಿ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಜೊತೆ ಚರ್ಚೆ ಮಾಡಲಿದ್ದೇನೆ" ಎಂದು ತಿಳಿಸಿದರು.

ಕಾಂಗ್ರೆಸ್​​ನಿಂದ ಕ್ಷೇತ್ರದಲ್ಲಿ ಉದ್ಯೋಗ ಮೇಳ ಮಾಡುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಸಿಪಿವೈ, "ಕ್ಷೇತ್ರದಲ್ಲಿ ಡಿ.ಕೆ.ಸುರೇಶ್‍ ಅವರು ಮೂರು ಬಾರಿ ಸಂಸದರಾಗಿದ್ದ ವೇಳೆ ಏಕೆ ಉದ್ಯೋಗ ಮೇಳೆ ಮಾಡಲಿಲ್ಲ?. ಇಂದು ಉದ್ಯೋಗ ಮೇಳ ಮಾಡಿದರೆ ಜನ ನಂಬುತ್ತಾರಾ? ಈ ಬಾರಿ ತಾಲೂಕಿನ ಜನತೆ ನನ್ನನ್ನು ಕೈಬಿಡುವುದಿಲ್ಲ. ಜನರ ಮೇಲೆ ನನಗೆ ವಿಶ್ವಾಸವಿದೆ. ಎನ್‍ಡಿಎ ಮೈತ್ರಿ ಬಗ್ಗೆ ಹಾಗೂ ಕುಮಾರಸ್ವಾಮಿ ಅವರ ಬಗ್ಗೆಯೂ ವಿಶ್ವಾಸವಿದೆ" ಎಂದು ಯೋಗೇಶ್ವರ್​ ಹೇಳಿದರು.

ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಡಿ.ಕೆ.ಶಿವಕುಮಾರ್ - D K Shivakumar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.