ETV Bharat / state

ಪ್ರತ್ಯೇಕ ಘಟನೆ: ಸಮರ್ಪಕ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ವಶ - Crores of rupees seized

ಸಮರ್ಪಕ ದಾಖಲೆಗಳಿಲ್ಲದೇ ಕಾರೊಂದರಲ್ಲಿ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ನಗದನ್ನು ಜಪ್ತಿ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲ ಕೊಪ್ಪಳ ಜಿಲ್ಲೆಯಲ್ಲಿಯೂ ಸಹ ಯಾವುದೇ ದಾಖಲೆ ಇಲ್ಲದೇ ಖಾಸಗಿ ವಾಹನದಲ್ಲಿ ಲಕ್ಷಾಂತರ ರೂಪಾಯಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

Vijayapura Police  Election Checkpost Cash Seized  Crores seized without document
ಪ್ರತ್ಯೇಕ ಘಟನೆ: ಸಮರ್ಪಕ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿ ವಶ
author img

By ETV Bharat Karnataka Team

Published : Mar 19, 2024, 5:51 PM IST

ವಿಜಯಪುರ/ಕೊಪ್ಪಳ: ಎರಡು ಪ್ರತ್ಯೇಕ ಘಟನೆಗಳಲ್ಲಿ ಸಮರ್ಪಕ ದಾಖಲೆಗಳಿಲ್ಲದೇ ನಗದು ಸಾಗಿಸುತ್ತಿದ್ದು, ಪೊಲೀಸರು ಕೋಟ್ಯಂತರ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಘಟನೆಗಳು ವಿಜಯಪುರ ಜಿಲ್ಲೆ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಕಂಡು ಬಂದಿದೆ.

ವಿಜಯಪುರದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ: ಸಮರ್ಪಕ ದಾಖಲೆಗಳಿಲ್ಲದೇ ಅಪಾರ ಪ್ರಮಾಣದ ನಗದನ್ನು ವಾಹನ ಒಂದರಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ, ಪೊಲೀಸರು ವಾಹನವನ್ನು ಪರಿಶೀಲನೆ ಮಾಡಿದಾಗ ಅಪಾರ ಪ್ರಮಾಣದ ಹಣ ದೊರೆತಿದ್ದು, ಆ ವಾಹನ ಮತ್ತು ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಆಯಕಟ್ಟಿನ ಸ್ಥಳಗಳಲ್ಲಿ ಈಗಾಗಲೇ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಪ್ರತಿ ವಾಹನವನ್ನ ತಪಾಸಣೆ ಮಾಡಲಾಗುತ್ತಿದೆ. ವಿಜಯಪುರ ನಗರದ ಹೊರವಲಯದ ಸಿಂದಗಿ ಬೈಪಾಸ್‌ಬಳಿಯ ಚೆಕ್‌ಪೋಸ್ಟ್​​​ನಲ್ಲಿ ತಪಾಸಣೆ ಮಾಡಲಾಗುತ್ತಿತ್ತು. ಈ ವೇಳೆ ಹೈದರಾಬಾದ್‌ದಿಂದ ಹುಬ್ಬಳ್ಳಿಗೆ ಸೂಕ್ತ ದಾಖಲೆಗಳಿಲ್ಲದೇ, ಟೋಯೊಟಾ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೋಟಿ 93 ಲಕ್ಷದ 50 ಸಾವಿರ ನಗದನ್ನು ಪೊಲೀಸರು ಜಪ್ತಿ ಮಾಡಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಾಜಿ ನಿಕ್ಕಂ ಮತ್ತು ಸಚಿನ ಮೋಯಿತೆ ಎನ್ನುವವರನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಬಂಧಿತರಿಂದ 2 ಕೋಟಿ 93 ಲಕ್ಷದ 50 ಸಾವಿರ ನಗದು, ಟೋಯೋಟಾ ಕಾರು, ಎರಡು ಮೊಬೈಲ್​ಗಳನ್ನು ಪೊಲೀಸರು ಜಪ್ತಿ ಮಾಡಿದರು. ಈ ಕುರಿತು ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಪತ್ತೆ ಕಾರ್ಯ ನಿರ್ವಹಿಸಿದ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯವೈಖರಿಯನ್ನ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಶ್ಲಾಘಿಸಿ ಪುರಸ್ಕರಿಸಿ, ಬಹುಮಾನ ಘೋಷಿಸಿದ್ದಾರೆ.

ಗಂಗಾವತಿಯಲ್ಲಿ ಲಕ್ಷಾಂತರ ರೂಪಾಯಿ ವಶಕ್ಕೆ: ಯಾವುದೇ ದಾಖಲೆ ಇಲ್ಲದೇ ಖಾಸಗಿ ವಾಹನದಲ್ಲಿ 32.92 ಲಕ್ಷ ರೂಪಾಯಿ ಹಣ ಸಾಗಿಸುತ್ತಿದ್ದ ಪ್ರಕರಣವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಘಟನೆ ತಾಲೂಕಿನ ಕಡೇಬಾಗಿಲು ಚೆಕ್​ ಪೋಸ್ಟ್ ಬಳಿ ಮಂಗಳವಾರ ನಡೆದಿದೆ.

ಸಿರುಗುಪ್ಪದಿಂದ ಗಂಗಾವತಿ - ಕಡೇಬಾಗಿಲು ಮಾರ್ಗವಾಗಿ ಹೊಸಪೇಟೆಗೆ ಈ ಹಣ ಸಾಗಿಸಲಾಗುತಿತ್ತು ಎನ್ನಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆ ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಎಲ್ಲ ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ.

ಖಾಸಗಿ ವಾಹನದಲ್ಲಿ ಅನಧಿಕೃತವಾಗಿ ಹಣ ಸಾಗಿಸುತ್ತಿದ್ದ ಬಗ್ಗೆ ಪೊಲ ಖಚಿತ ಮಾಹಿತಿ ಮೇರೆಗೆ ಖಾಸಗಿ ವಾಹನವನ್ನು ತೀವ್ರ ತಪಾಸಣೆ ನಡೆಸಿದ ಅಧಿಕಾರಿಗಳಿಗೆ 32.92 ಲಕ್ಷ ರೂಪಾಯಿ ಮೊತ್ತದ ನಗದು ಹಣ ಸಿಕ್ಕಿದೆ. ಈ ಬಗ್ಗೆ ಕಾರಿನಲ್ಲಿದ್ದವರು ಹಣ ಸಾಗಿಸುತ್ತಿದ್ದವರ ಬಗ್ಗೆ ಯಾವುದೇ ದಾಖಲೆ ತೋರಿಸಿಲ್ಲ. ಹೀಗಾಗಿ ಗಂಗಾವತಿ ತಹಸೀಲ್ದಾರ್ ಯು. ನಾಗರಾಜ್ ನೇತೃತ್ವದಲ್ಲಿ ಅಧಿಕಾರಿಗಳು, ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಹಾಯಕ ಚುನಾವಣಾಧಿಕಾರಿ ಯು. ನಾಗರಾಜ್, ಈ ಹಣವನ್ನು ಮೇಲಧಿಕಾರಿಗಳ ಸೂಚನೆ ಮೆರೆಗೆ ಆದಾಯ ತೆರಿಗೆ ಇಲಾಖೆಗೆ ಒಪ್ಪಿಸಲಾಗುವುದು. ವಾರಸುದಾರರು ಹಣಕ್ಕೆ ಸಂಬಂಧಿತ ಸೂಕ್ತ ದಾಖಲೆ ನೀಡಿ ಹಣ ಪಡೆದುಕೊಂಡು ಹೋಗಬಹುದು ಎಂದು ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಗಂಗಾವತಿ ಗ್ರಾಮೀಣ ಠಾಣೆಯ ಪೊಲೀಸರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.

ಓದಿ: ಬೆಳಗಾವಿ: ಶೆಟ್ಟರ್​ ಗೆ ಟಿಕೆಟ್​ ತಪ್ಪಿಸಲು ಬೆಂಗಳೂರಿಗೆ ಹೊರಟ ಜಿಲ್ಲಾ ಬಿಜೆಪಿ ನಾಯಕರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.