ETV Bharat / state

ಮೋದಿಯನ್ನು ಟೀಕಿಸುವುದು ಸೂರ್ಯನಿಗೆ ಉಗಿದಂತೆ, ನಿಮ್ಮ ಮುಖಕ್ಕೆ ಮೆತ್ತಿಕೊಳ್ಳುತ್ತೆ: ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ಟೀಕೆ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ಟೀಕೆ
ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ಟೀಕೆ (ETV Bharat)
author img

By ETV Bharat Karnataka Team

Published : 2 hours ago

ಚಿಕ್ಕಮಗಳೂರು/ಬೆಂಗಳೂರು: ಆಕಾಶಕ್ಕೆ ಉಗಿದರೆ ಅದು ಆಕಾಶಕ್ಕೆ ಮುಟ್ಟಲ್ಲ, ಸೂರ್ಯನಿಗೆ ತಟ್ಟಲ್ಲ, ಉಗಿದವರ ಮುಖಕ್ಕೆ ವಾಪಸ್ ಬರುತ್ತೆ. ನೀವು ಮೋದಿಯನ್ನು ಟೀಕೆ ಮಾಡೋದು ಸೂರ್ಯನಿಗೆ ಉಗಿದಂತೆ. ಅದು ನಿಮ್ಮ ಮುಖಕ್ಕೆ ಮೆತ್ತಿಕೊಳ್ಳೋದು, ನೀವೇ ಮುಖ ತೊಳೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರಿಷತ್ ಸದಸ್ಯ ಸಿ ಟಿ ರವಿ ಚಿಕ್ಕಮಗಳೂರು ನಗರದಲ್ಲಿ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು ಮೋದಿ ಅವರಿಗೆ 2014, 2019, 2024 ರಲ್ಲೂ ಸವಾಲು ಹಾಕಿದ್ದರು. ಆದರೆ ಅವರ ನಾಯಕತ್ವಕ್ಕೆ ಜನ ಮತ ನೀಡಿಲ್ಲ. ಸಿದ್ದರಾಮಯ್ಯ ಮೋದಿಯನ್ನು ಬೈದು ದೊಡ್ಡವರಾಗಬಹುದು ಎಂದು ಭಾವಿಸಿದ್ದಾರೆ. ಸಿದ್ದರಾಮಯ್ಯ ಅವರು ಸುಳ್ಳು ರಾಮಯ್ಯ ಆಗಿದ್ದಾರೆ ಎಂದು ಸಿ.ಟಿ. ರವಿ ಟೀಕಿಸಿದರು.

ಚಿಕ್ಕಮಗಳೂರಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ (ETV Bharat)

ಸಿಎಂಗೆ ಬಿ.ವೈ.ವಿಜಯೇಂದ್ರ ಪ್ರತಿಸವಾಲು: ನಿಮ್ಮ ಸರ್ಕಾರದ ಭ್ರಷ್ಟ ಅಭಿವೃದ್ಧಿ, ಶೂನ್ಯ ಆಡಳಿತದ ಇಂಚಿಂಚೂ ಕಟುಸತ್ಯವನ್ನು ಅನಾವರಣ ಮಾಡಲು ಪ್ರಧಾನಿಗಳೇಕೆ?. ನಮ್ಮ ಸಾಮಾನ್ಯ ಕಾರ್ಯಕರ್ತನೊಬ್ಬನೇ ಸಮರ್ಥನಿದ್ದಾನೆ. ಈ ಸವಾಲು ಸ್ವೀಕರಿಸಲು ಸಿದ್ಧರಿದ್ದರೆ ಹೇಳಿ, ನಾವೂ ಸಿದ್ಧರಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯಗೆ ಮರು ಸವಾಲು ಹಾಕಿದ್ದಾರೆ.

ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, ನೀವು ಬಹಿರಂಗ ಚರ್ಚೆಗೆ ಬರುವುದಾದರೆ ಬನ್ನಿ, ನಿಮಗೆ ಖಂಡಿತ ಸ್ವಾಗತವಿದೆ. ಮೋದಿ ಸರ್ಕಾರದ ಕೊಡುಗೆಗಳು, ಹಿಂದಿನ ನಮ್ಮ ಬಿಜೆಪಿ ಸರ್ಕಾರದ ಯೋಜನೆಗಳ ಪಟ್ಟಿಯನ್ನಿಡಿದು ನಿಮ್ಮ ಮುಂದೆ ಬರುತ್ತೇವೆ. ಚರ್ಚೆ, ಹೋರಾಟಗಳಿಗೆ ಅಂಜುವ ಪದ ನಮ್ಮ ಪಕ್ಷದ ಸಿದ್ಧಾಂತದ ಪಟ್ಟಿಯಲ್ಲಿ ಇಲ್ಲವೇ ಇಲ್ಲ. ಅದೇನಿದ್ದರೂ ನಿಮ್ಮ ಕಾಂಗ್ರೆಸ್ ಹಾಗೂ ನಿಮ್ಮಲ್ಲಿದೆ. ಇದಕ್ಕೆ ಉದಾಹರಣೆ ನೀವು 14 ನಿವೇಶನ ಹಿಂದಿರುಗಿಸಿ 62 ಕೋಟಿ ಪಡೆಯುವ ಘೋಷಣೆಯ ಸವಾಲಿನಿಂದ ಪಲಾಯನವಾದ ಮಾಡಿದ್ದು ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯನವರೇ, ನಿಮ್ಮ ಒಂದೂವರೆ ವರ್ಷದ ಆಡಳಿತದಲ್ಲಿ ನಿಮ್ಮ ಕೊಡುಗೆಗಳು ಏನೇನೂ ಇಲ್ಲ, ಅಭಿವೃದ್ಧಿಯ ಹಾದಿಯಲ್ಲಿ ಬರೀ ಶೂನ್ಯ, ಭ್ರಷ್ಟತೆಯ ಸಾಲು, ಸಾಲು ಹಗರಣಗಳು. ಇಂದಿಗೂ ಕರ್ನಾಟಕದ ಲಕ್ಷಾಂತರ ಜನ ಗುಡಿಸಲು ವಾಸಿಗಳಾಗಿದ್ದಾರೆ, ಸ್ವಂತ ಸೂರಿಲ್ಲದೇ ವಸತಿ ಹೀನರಾಗಿದ್ದಾರೆ. ಇವರಿಗಾಗಿ ನೀವು ಒಂದೇ ಒಂದು ನಿವೇಶವನ್ನು ವಿತರಿಸಲಾಗಿಲ್ಲ. ಆದರೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 5 ಸಾವಿರಕ್ಕೂ ಹೆಚ್ಚು ನಿವೇಶನಗಳ ದರೋಡೆ ನಿಮ್ಮ ಬಲಗೈ ಬಂಟ ಸಚಿವ ಭೈರತಿ ಸುರೇಶ್ ಅವರ ನೇತೃತ್ವದಲ್ಲಿ ಹಾಗೂ ನಿಮ್ಮ ಮಾರ್ಗದರ್ಶನದಲ್ಲಿ ನಡೆದಿದೆ ಎಂಬುದಕ್ಕೆ ನೀವೊಬ್ಬರೇ ಉಚಿತವಾಗಿ ಪಡೆದ 14 ನಿವೇಶನಗಳು ಸಾಕ್ಷಿ ಹೇಳುತ್ತಿವೆ. ಈ ನಿಟ್ಟಿನಲ್ಲಿ ನ್ಯಾಯಾಲಯಗಳು ನಿಮ್ಮ ವಿರುದ್ಧ ತೀರ್ಪಿತ್ತಿವೆ ಎಂದು ಬರೆದುಕೊಂಡಿದ್ದಾರೆ.

ನೀವು ಪ್ರಾಮಾಣಿಕರೇ ಆಗಿದ್ದರೆ ಈಗಲೂ ಇಡಿ, ಸಿಬಿಐ ತನಿಖೆಗೆ ಏಕೆ ಹೆದರುತ್ತಿದ್ದೀರಿ? ನಿಮ್ಮ ಕೈ ಕೆಳಗಿನ ಅಧಿಕಾರಿಗಳಿರುವ ಲೋಕಾಯುಕ್ತದಿಂದಲೇ ತನಿಖೆ ಆಗುವಂತೆ ನೋಡಿಕೊಳ್ಳುತ್ತಿದ್ದೀರಿ. ಮುಡಾ ನಿವೇಶನದ ಬೆಲೆ 62 ಕೋಟಿ ಎಂದು ಘೋಷಿಸಿದ್ದ ನೀವು ಬೇಷರತ್ತಾಗಿ ನಿವೇಶನಗಳನ್ನು ಹಿಂದಿರುಗಿಸಿದ್ದು ಏಕೆ? ಎಂಬುದನ್ನು ಕರ್ನಾಟಕದ ಜನತೆ ಅರಿಯದಿರುವಷ್ಟು ಮುಗ್ಧರಲ್ಲ. ‘ಕಳ್ಳ ಬೆಕ್ಕು ಕಣ್ಣುಮುಚ್ಚಿಕೊಂಡು ಹಾಲು ಕುಡಿಯುತ್ತಿದ್ದರೆ’ ಅದನ್ನು ನೋಡಿಕೊಂಡು ಸ್ವಾಭಿಮಾನಿ ಕನ್ನಡಿಗರು ಸುಮ್ಮನಾಗಿ ಬಿಡುತ್ತಾರೆಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನವಷ್ಟೇ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ, ರಾಮನಗರಕ್ಕೆ ಏನೂ ಕೊಡದ ಕುಮಾರಸ್ವಾಮಿಗೆ ಚುನಾವಣೆ ಬಂದ್ರೆ ಅಳು ಬರುತ್ತದೆ: ಡಿ ಕೆ ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.