ETV Bharat / state

ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಸಿ.ಟಿ.ರವಿ ಒತ್ತಾಯ: ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು - BJP MEETS GOVERNOR

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಹಸ್ತಾಂತರಿಸಿದೆ. ಈ ಬೆನ್ನಲ್ಲೇ ರಾಜ್ಯ ಬಿಜೆಪಿ ನಿಯೋಗವು ರಾಜ್ಯಪಾಲರಿಗೆ ದೂರು ನೀಡಿದೆ.

ಸಿ.ಟಿ.ರವಿ, ಲಕ್ಷ್ಮೀ ಹೆಬ್ಬಾಳ್ಕರ್
ಸಿ.ಟಿ.ರವಿ, ಸರ್ಕಾರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ (ETV Bharat)
author img

By ETV Bharat Karnataka Team

Published : Dec 24, 2024, 9:16 PM IST

ಬೆಂಗಳೂರು/ಚಿಕ್ಕಮಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ಪ್ರಕರಣದ ನಂತರ ನಡೆದಿರುವ ವಿದ್ಯಮಾನಗಳ ಕುರಿತು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ನಿಯೋಗ ಇಂದು ಸಂಜೆ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಅವರನ್ನು ಭೇಟಿಯಾಗಿ ಸರ್ಕಾರದ ವಿರುದ್ಧ ದೂರು ನೀಡಿದೆ.

ನಿಯೋಗದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್​​ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಜನಾರ್ದನ ರೆಡ್ಡಿ, ಸಿ.ಕೆ.ರಾಮಮೂರ್ತಿ, ಎಸ್.ರಘು, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಕೇಶವ ಪ್ರಸಾದ್​ ಇದ್ದರು.

ಸಿ.ಟಿ.ರವಿ ಬಂಧನ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಖಂಡನೀಯ. ಬಂಧನದ ವೇಳೆ ಸಾಂವಿಧಾನಿಕ ಹಾಗೂ ಕಾನೂನು ಉಲ್ಲಂಘನೆಯಾಗಿದೆ. ಪೊಲೀಸ್ ಇಲಾಖೆ ಮೂಲಕ ಅಧಿಕಾರ ದುರ್ಬಳಕೆಯಾಗಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಿ ಬಂಧನ ಪ್ರಕರಣದಲ್ಲಿ ಸತ್ಯ ಶೋಧನೆ ನಡೆಸಬೇಕು ಎಂದು ನಿಯೋಗ ಮನವಿ ಮಾಡಿದೆ.

ಕಳೆದ ಗುರುವಾರ ಸಂಜೆ 6.30ರ ಸುಮಾರಿಗೆ ಬೆಳಗಾವಿ ಸುವರ್ಣಸೌಧದಿಂದ ಹೊರಬರುತ್ತಿದ್ದಂತೆ ಸಿ.ಟಿ.ರವಿ ಅವರನ್ನು ಬಂಧಿಸಿ ಇಡೀ ರಾತ್ರಿ ಎಲ್ಲಿಗೆ ಕರೆದೊಯ್ಯಲಾಗಿತ್ತು. ಅವರನ್ನು ಸುತ್ತಾಡಿಸಿದ್ದು ಏಕೆ? ಸಂಪೂರ್ಣವಾದ ತನಿಖೆಗೆ ನಿರ್ದೇಶನ ನೀಡಬೇಕೆಂದು ನಿಯೋಗ ಕೋರಿದೆ.

ಸರ್ಕಾರ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು
ಸರ್ಕಾರ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು (ETV Bharat)

ನ್ಯಾಯಾಂಗ ತನಿಖೆಗೆ ಆಗ್ರಹ: ರಾಜ್ಯಪಾಲರ ಭೇಟಿಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪ್ರತಿಪಕ್ಷದ ನಾಯಕ ಆರ್.ಅಶೋಕ್, "ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರಿಗೆ ರಕ್ಷಣೆ ನೀಡುವಂತೆ ಕೋರಿ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ಮನವಿ ಸಲ್ಲಿಸಲಾಗಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕೆಂಬುದು ನಮ್ಮ ಆಗ್ರಹ" ಎಂದು ಹೇಳಿದರು.

"ಸಿ.ಟಿ.ರವಿ ಅವರಿಗೆ ಉಗ್ರವಾದಿಗಳು ಹಾಗೂ ನಕ್ಸಲರಿಂದ ಬೆದರಿಕೆ ಇದೆ. ಹೀಗಿದ್ದರೂ ಅವರನ್ನು ಕಬ್ಬಿನ ಗದ್ದೆಗೆ ಕರೆದುಕೊಂಡು ಹೋಗಿರುವುದು ಅನುಮಾನ ತಂದಿದೆ. ಸಿ.ಟಿ.ರವಿ ಅವರಿಗೆ ಹೀಗಾದರೆ ಇನ್ನು ಸಾರ್ವಜನಿಕರ ಪಾಡೇನು ಎಂಬ ಪ್ರಶ್ನೆ ಮೂಡುತ್ತದೆ. ಇದು ರಾಜ್ಯ ಸರ್ಕಾರಕ್ಕೆ ಒಂದು ಕಪ್ಪು ಚುಕ್ಕೆ. ಅದಕ್ಕಾಗಿ ರಾಜ್ಯಪಾಲರು ಸಂವಿಧಾನವನ್ನು ರಕ್ಷಣೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ" ಎಂದು ತಿಳಿಸಿದರು.

ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ: "ಬೆಳಗಾವಿ ಸದನದಲ್ಲಿ ನಡೆದ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ" ಎಂದು ಚಿಕ್ಕಮಗಳೂರಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.

"ನ್ಯಾಯಾಧೀಶರ ನಿರ್ದೇಶನದಲ್ಲಿ ತನಿಖೆ ನಡೆಯಲಿ. ಯಾವುದೇ ಒತ್ತಡ ಇಲ್ಲದೆ ತನಿಖೆ ಮಾಡೋದಾದ್ರೆ ಕಾನ್ಸ್​ಟೇಬಲ್ ಕೂಡ ತನಿಖೆ ಮಾಡಬಹುದು. ಯಾವಾಗ ಒಳ್ಳೆಯ ಜಾಗಕ್ಕೆ ಪೋಸ್ಟಿಂಗ್ ಬೇಕು ಅಂತಾರೆ ಆಗ ನ್ಯಾಯದ ನಿರಾಕರಣೆಯಾಗುತ್ತದೆ" ಎಂದು ತಿಳಿಸಿದ್ದಾರೆ.

"ನ್ಯಾಯ ಸಮ್ಮತವಾಗಿ, ಪ್ರಾಮಾಣಿಕವಾಗಿ ಮತ್ತು ಉತ್ತರ ಇಲ್ಲದೇ ಕೆಲಸ ಮಾಡುವುದಾದರೆ ಹಿರೇಬಾಗೇವಾಡಿಯ ಪೊಲೀಸ್ ಠಾಣೆಯೇ ಸಾಕು. ಸಿಐಡಿಗೆ ನೀಡಬೇಕಿಲ್ಲ. ಪೊಲೀಸ್ ಠಾಣೆಯಲ್ಲೇ ನ್ಯಾಯ ಸಿಗುತ್ತದೆ. ಈ ಕುರಿತು ನಮ್ಮ ನಾಯಕರ ಜೊತೆ ಚರ್ಚಿಸುತ್ತೇನೆ" ಎಂದು ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ತಕ್ಷಣವೇ ಸಿ.ಟಿ.ರವಿ ಬಿಡುಗಡೆಗೆ ಆದೇಶಿಸಿ 'ಜನಪ್ರತಿನಿಧಿಗಳಾಗಿ ಆರೋಪಿ‌, ದೂರುದಾರರ ವರ್ತನೆ ದುರದೃಷ್ಟಕರ‌' ಎಂದ ಹೈಕೋರ್ಟ್‌

ಇದನ್ನೂ ಓದಿ: ಸಿ ಟಿ ರವಿ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ‌: ಹೆಚ್ಚು ವ್ಯಾಖ್ಯಾನ ಸರಿಯಲ್ಲ- ಡಾ. ಜಿ ಪರಮೇಶ್ವರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.