ಚಿಕ್ಕಮಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಿಡುಗಡೆ ಆದೇಶದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಚಿಕ್ಕಮಗಳೂರು ನಗರದ ಬಸವನ ಹಳ್ಳಿ ಮುಖ್ಯರಸ್ತೆಯಲ್ಲಿರುವ ಸಿ.ಟಿ.ರವಿ ನಿವಾಸದ ಮುಂಭಾಗ ಸೇರಿದ ಕಾರ್ಯಕರ್ತರು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಸಿ.ಟಿ.ರವಿ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಡಿಕೆಶಿ ವಿರುದ್ಧ ಘೋಷಣೆ ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳಾ ಕಾರ್ಯಕರ್ತರು, ಶಾಸಕ ಸಿ.ಟಿ.ರವಿ ಪರ ಘೋಷಣೆ ಕೂಗುತ್ತಾ ಕುಣಿದು ಕುಪ್ಪಳಿಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿಯೂ ನಡೆಯಿತು.
ಸಂಭ್ರಮಾಚರಣೆ ಮೆರವಣಿಗೆ ನಗರದ ಹನುಮಂತಪ್ಪ ವೃತ್ತದವರೆಗೂ ಸಾಗಿತು. ಬೆಳಗ್ಗಿನಿಂದಲೂ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚರ ವಹಿಸಿದ್ದರು. ಸಿ.ಟಿ.ರವಿ ನಿವಾಸದ ಮುಂಭಾಗ ಕೂಡ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದರು.
ಇದನ್ನೂ ಓದಿ: ನನ್ನನ್ನು 4 ಜಿಲ್ಲೆಗಳಲ್ಲಿ 11 ಗಂಟೆಗೂ ಹೆಚ್ಚು ಕಾಲ ಅಲೆದಾಡಿಸಿದ್ರು, ಮಾನಸಿಕವಾಗಿ ಕುಗ್ಗಿಸುವ ಕೆಲಸ ಮಾಡಿದ್ರು: ಸಿ.ಟಿ.ರವಿ