ETV Bharat / state

ಸಿ.ಟಿ.ರವಿ ಅಸಭ್ಯ ಪದ ಬಳಕೆ ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ - OBJECTIONABLE REMARK ALLEGATION

ಸಿ.ಟಿ.ರವಿ ವಿರುದ್ಧ ಸಭಾಪತಿ ಹಾಗೂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಮಾಹಿತಿ ದೊರೆತಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

cm-siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : 3 hours ago

ಬೆಳಗಾವಿ: ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತಾಗಿ ಅಸಭ್ಯ ಪದ ಬಳಕೆ ಮಾಡಿರುವುದು ಕ್ರಿಮಿನಲ್ ಅಪರಾಧ. ಅವರ ವಿರುದ್ಧ ಸಭಾಪತಿ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುವರ್ಣ ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಸಿ.ಟಿ.ರವಿ ತಾವು ಅವಾಚ್ಯ ಪದ ಬಳಕೆ ಮಾಡಿರುವುದನ್ನು ಅಲ್ಲಗಳೆದಿರುವ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರು ಅವಾಚ್ಯ ಪದ ಬಳಸಿದ್ದಾರೆಂದು ಹಲವು ಸದಸ್ಯರು ಹೇಳುತ್ತಿದ್ದಾರೆ. ಆ ಸಂದರ್ಭದಲ್ಲಿ ನಾನು ಪರಿಷತ್‌ನಲ್ಲಿ ಇರಲಿಲ್ಲ ಎಂದು ತಿಳಿಸಿದರು.

ಇಂತಹ ಪದಪ್ರಯೋಗದಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮನನೊಂದಿದ್ದು, ಇದೊಂದು ರೀತಿಯ ಲೈಂಗಿಕ ದೌರ್ಜನ್ಯ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಿಎಂ ಹೇಳಿದರು.

ಇದನ್ನೂ ಓದಿ: ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ: ಪರಿಷತ್​ನಲ್ಲಿ‌ ಗದ್ದಲ, ಸಭಾಪತಿಗೆ ದೂರು ಕೊಡಲು ಮುಂದಾದ ಕೈ ಸದಸ್ಯರು - UPROAR AGAINST CT RAVI STATEMENT

ETV Bharat Logo

Copyright © 2024 Ushodaya Enterprises Pvt. Ltd., All Rights Reserved.