ETV Bharat / state

ಜೂನ್ 15 ರಿಂದ 26ರವರೆಗೆ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ: ಕಾರಣ - Curfew

author img

By ETV Bharat Karnataka Team

Published : Jul 12, 2024, 9:43 PM IST

ಜೂ. 15ರಿಂದ 26ರವರೆಗೆ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

CURFEW AROUND VIDHANA SOUDHA
ಸಂಗ್ರಹ ಚಿತ್ರ (IANS)

ಬೆಂಗಳೂರು: ಜೂನ್ 15ರಿಂದ 26ರವರೆಗೆ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತಲಿನ ಎರಡು ಕಿಲೋಮಿಟರ್ ವರೆಗೂ ನಿಷೇದಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.

10 ದಿನಗಳ ಕಾಲ ನಡೆಯುವ ವಿಧಾನಸೌಧದಲ್ಲಿ ಅಧಿವೇಶನ ನಡೆಯಲಿದ್ದು, ಈ ವೇಳೆ ವಿವಿಧ ರಾಜಕೀಯ ಪಕ್ಷಗಳು, ವಿವಿದ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ, ಇತ್ಯಾದಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧತೆಯಿದೆ. ಇದರಿಂದ ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೇ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯುಂಟಾಗುವ ಸಾಧ್ಯತೆ ಹೆಚ್ಚು.

ಈ ಹಿನ್ನೆಲೆಯಲ್ಲಿ ನನಗೆ ಭಾರತೀಯ ನಾಗರಿಕ ಸುರಕ್ಷ ಸಂಹಿತೆ (ಬಿಎನ್​​ಎಸ್​​ಎಸ್​) ಕಲಂ 163ನೇ ಪ್ರಕರಣದ ಅನ್ವಯ 15 ರಿಂದ 26ರವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ) ಪ್ರತಿದಿನ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ (ಅನುಮತಿ ಪಡೆದು ಫ್ರೀಡಂಪಾಕ್‌ನಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ) ಈ ಕೆಳಕೆಂಡ ನಿಬಂಧನೆಗಳಿಗೆ ಒಳಪಡುವಂತೆ ನಿಷೇಧಾಜ್ಞೆ ವಿಧಿಸಿರುವುದಾಗಿ ಅದೇಶದಲ್ಲಿ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ: ಜುಲೈ 15ರಿಂದ ಮುಂಗಾರು ಅಧಿವೇಶನ: ಸ್ಪೀಕರ್ ಯು.ಟಿ.ಖಾದರ್ - Monsoon Session

ವಿಧಾನಸೌಧದಲ್ಲಿ ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, 16ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ಜುಲೈ 15 ರಿಂದ ಜುಲೈ 26ರವರೆಗೆ ನಡೆಯಲಿದೆ. ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ತಿಳಿಸಿದ್ದಾರೆ. ಜುಲೈ 15 ರಂದು ಅಧಿವೇಶನ ಆರಂಭದ ದಿನ. ಇಲ್ಲಿಯವರಗೆ ನಿಧನ ಹೊಂದಿರುವ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಲಾಗುವುದು ಎಂದು ಸ್ಪೀಕರ್ ಹೇಳಿದರು.

ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. ಈ ಅಧಿವೇಶನದಲ್ಲಿ ಒಟ್ಟು 9 ದಿನಗಳ ಕಾಲ ಪ್ರಶ್ನೋತ್ತರ ಕಲಾಪವನ್ನು ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನ ಸೆಳೆಯುವ ಸೂಚನೆ, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯಕ್ರಮಗಳನ್ನು ನಡೆಸಲಾಗುವುದು. 2023-24ನೇ‌ ಸಾಲಿನ ವಿಧಾನ ಮಂಡಲ, ವಿಧಾನ ಸಭೆಯ ಸ್ಥಾಯಿ ಸಮಿತಿಗಳ ಅವಧಿ ಆಗಸ್ಟ್ 8 ರಂದು ಮುಕ್ತಾಯಗೊಳ್ಳಲಿದೆ. ಹೀಗಾಗಿ 2024-25ನೇ ಸಾಲಿಗೆ ಹೊಸದಾಗಿ ಸಮಿತಿಗಳನ್ನು ರಚಿಸುವ ಸಂಬಂಧ ಚುನಾವಣಾ ಪ್ರಸ್ತಾವ ಮಂಡಿಸಿ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.