ETV Bharat / state

ಬಂಗಾಳ ಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ: ರಾಜ್ಯದಲ್ಲಿ ಮೋಡ, ಮಂಜು ಮುಸುಕಿದ ವಾತಾವರಣ - CYCLONE FENGAL

ಬಂಗಾಳ ಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೋಡ ಕವಿದ, ಮಂಜು ಮುಸುಕಿದ ವಾತಾವರಣ ಉಂಟಾಗಿದೆ.

cyclone
ಚಂಡಮಾರುತ, ಸಂಗ್ರಹ ಚಿತ್ರ (IANS)
author img

By ETV Bharat Karnataka Team

Published : Nov 27, 2024, 5:28 PM IST

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣದಿಂದ ತಾಪಮಾನ ಕಡಿಮೆಯಾಗಿದ್ದು, ಕೆಲವೆಡೆ ಮಂಜು ಮುಸುಕಿದ ವಾತಾವರಣ ಕಂಡು ಬಂರುತ್ತಿದೆ.

ರಾಜ್ಯದಲ್ಲಿ ಒಣ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 5 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಂಭವವಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಇದು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ಹೇಳಿದೆ.

ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಮಂಜು ಕವಿಯುವ ಸಾಧ್ಯತೆಯಿದೆ. ಹಗಲಿನಲ್ಲೂ ಬಿಸಿಲು ಇಲ್ಲದಿರುವುದರಿಂದ ಚಳಿಯ ಅನುಭವ ಉಂಟಾಗುತ್ತಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಡಿ.1ರಿಂದ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.