ETV Bharat / state

ಮತದಾನ ಜಾಗೃತಿಗಾಗಿ ಸೈಕಲ್ ಜಾಥಾ: ಮತದಾನದ ಮಹತ್ವ ತಿಳಿಸಿದ ತುಷಾರ್ ಗಿರಿನಾಥ್​ - Cyclothon for voting awareness - CYCLOTHON FOR VOTING AWARENESS

Voting awareness: ಲೋಕಸಭಾ ಚುನಾವಣೆ ಹಿನ್ನೆಲೆ ಮತದಾನ ಜಾಗೃತಿ ಮೂಡಿಸಲು ಇಂದು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ ಸೈಕಲ್ ಜಾಥಾ ಹಮ್ಮಿಕೊಂಡಿದ್ದು, ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಚುನಾವಣೆ ಕುರಿತು ಮಾಹಿತಿ ನೀಡಿದರು.

ಜಾಗೃತಿಯ ಸೈಕಲ್ ಜಾಥಾ
ಜಾಗೃತಿಯ ಸೈಕಲ್ ಜಾಥಾ
author img

By ETV Bharat Karnataka Team

Published : Apr 11, 2024, 1:56 PM IST

Updated : Apr 11, 2024, 2:38 PM IST

ತುಷಾರ್ ಗಿರಿನಾಥ್​

ಬೆಂಗಳೂರು: ಲೋಕಸಭಾ ಚುನಾವಣೆ ನಿಮಿತ್ತ ಚುನಾವಣಾ ಆಯೋಗ, ಬೃಹತ್​​ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಯೂನಿಯನ್ ಬ್ಯಾಂಕ್​ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ ಮತದಾನ ಜಾಗೃತಿಯ ಸೈಕಲ್ ಜಾಥಾ ಹಮ್ಮಿಕೊಂಡಿತ್ತು. ಸೈಕಲ್ ಜಾಥಾ(ಸೈಕ್ಲೋಥಾನ್)ಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದರು.

ಚಾಲನೆ ನೀಡಿದ ಬಳಿಕ ಮಾತನಾಡಿದ ತುಷಾರ್​​​​ ಗಿರಿನಾಥ್​ ಅವರು, "ಏಪ್ರಿಲ್​​ 26 ರಂದು ನಡೆಯುವ ಮತದಾನದ ಹಬ್ಬವನ್ನು ಎಲ್ಲರೂ ಸೇರಿ ಒಟ್ಟಾಗಿ ಆಚರಿಸೋಣ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ದಕ್ಷಿಣ ಕರ್ನಾಟಕದಲ್ಲಿ ಏಪ್ರಿಲ್​​ 26 ರಂದು ಹಾಗೂ ಉತ್ತರ ಕರ್ನಾಟಕದಲ್ಲಿ ಮೇ 7 ರಂದು ಮತದಾನ ನಡೆಯುತ್ತಿದೆ. ಮತ ಚಲಾಯಿಸಲು ಅರ್ಹರಿರುವ ಎಲ್ಲರೂ ತಪ್ಪದೇ ಮತ ಚಲಾಯಿಸೋಣ ಎಂದು ಕರೆ ನೀಡಿದರು". ಜತೆಗೆ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಹಾಗೂ ಜಾಥಾಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ" ಎಂದರು.

ಸೈಕ್ಲೋಥಾನ್ ಸಾಗಿದ ಹಾದಿ: ವಿಧಾನಸೌಧದ ಗ್ರಾಂಡ್​ ಸ್ಟೆಪ್ಸ್ ಮುಂಭಾಗದಿಂದ, ಕೆ.ಆರ್​ ವೃತ್ತದ ನೃಪತುಂಗ ರಸ್ತೆಯ ಮೂಲಕ ಸಾಗಿ, ಹಡ್ಸನ್ ವೃತ್ತ, ಕಸ್ತೂರ್​ ಬಾ ರಸ್ತೆ, ಕ್ವೀನ್ಸ್​​ ರಸ್ತೆ(ಚಿನ್ನಸ್ವಾಮಿ ಕ್ರೀಡಾಂಗಣ)ಯಿಂದ, ಡಾ.ಬಿ.ಆರ್​. ಅಂಬೇಡ್ಕರ್​ ರಸ್ತೆಯ ಮೂಲಕ ವಿಧಾನಸೌಧ ಪೂರ್ವ ದ್ವಾರದ ಬಳಿ ಸೈಕ್ಲೋಥಾನ್ ಮುಕ್ತಾಯಗೊಂಡಿತು.

ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ, ಚುನಾವಣಾ ರಾಯಭಾರಿಗಳಾದ ಅನುಪ್ ಶ್ರೀಧರ್, ನೀತು ವನಜಾಕ್ಷಿ, ಸೈಕ್ಲಿಸ್ಟ್​ಗಳಲ್ಲಿ ಎನ್.ಎಸ್.ಎಸ್ ವಿದ್ಯಾರ್ಥಿಗಳು, ನಾಗರಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಂಗಳೂರಿನ ಹೆಚ್​​ಎಎಲ್​​ ವಿಚಾರದಲ್ಲಿ ರಾಹುಲ್ ಗಾಂಧಿ ಕ್ಷಮೆ ಕೇಳುತ್ತಾರಾ: ಬಿಎಸ್​ ಯಡಿಯೂರಪ್ಪ ಪ್ರಶ್ನೆ - B S Yediyurappa

Last Updated : Apr 11, 2024, 2:38 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.