ETV Bharat / state

ಊಟ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಡಿ ಗ್ರೂಪ್ ನೌಕರ ಸಾವು: ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಆಹಾರ ನಿರೀಕ್ಷಕ - Two government employees died - TWO GOVERNMENT EMPLOYEES DIED

ಕರ್ತವ್ಯದಲ್ಲಿದ್ದಾಗಲೇ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಮತ್ತೊಂದೆಡೆ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿ‌ನ ಹಂಗಳ ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದ ವೇಳೆ ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ಆಹಾರ ನಿರೀಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

HEART ATTACK  ROAD ACCIDENT  RAMANAGARA  CHAMARAJANAGAR
ಪ್ರತ್ಯೇಕ ಇಬ್ಬರು ಸರ್ಕಾರಿ ಸಿಬ್ಬಂದಿ ಸಾವಿನ ಪ್ರಕರಣ ವರದಿ: ಡಿ ಗ್ರೂಪ್ ನೌಕರ ಹೃದಯಾಘಾತದಿಂದ ಮೃತ್ಯು, ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಆಹಾರ ನಿರೀಕ್ಷಕ (ETV Bharat)
author img

By ETV Bharat Karnataka Team

Published : Jun 29, 2024, 7:29 AM IST

ರಾಮನಗರ: ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಿನ್ನೆ (ಶುಕ್ರವಾರ) ನಡೆದಿದೆ. ಯೋಗೀಶ್ ಕುಮಾರ್ (45) ಮೃತಪಟ್ಟಿರುವ ಸರ್ಕಾರಿ ನೌಕರ. ಇವರು ಡಿ ಗ್ರೂಪ್ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕುಮಾರ್ ನಿನ್ನೆ ಮಧ್ಯಾಹ್ನ ಊಟ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ.

ಕುಸಿದು ಬಿದ್ದ ದೃಶ್ಯವಳಿ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಹೋದ್ಯೋಗಿಗಳು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಯೋಗೀಶ್ ಕುಮಾರ್ ಸಾವನ್ನಪ್ಪಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಅಪಘಾತದಲ್ಲಿ ಆಹಾರ ನಿರೀಕ್ಷಕ ಸಾವು: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿ‌ನ ಹಂಗಳ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದ ವೇಳೆ ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ಆಹಾರ ನಿರೀಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್​ನ ಹಿಂಬದಿಯಲ್ಲಿ ಕುಳಿತಿದ್ದ ಆಹಾರ ಶಿರಸ್ತೇದಾರ್ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಸಮೀಪ ನಿನ್ನೆ (ಶುಕ್ರವಾರ) ಸಂಜೆ ನಡೆದಿದೆ.

ಗುಂಡ್ಲುಪೇಟೆ ತಾಲೂಕಿನ ಅಂಕಹಳ್ಳಿ ಗ್ರಾಮದ ಆಹಾರ ನಿರೀಕ್ಷಕ ನಾಗೇಂದ್ರಪ್ಪ(46) ಮೃತಪಟ್ಟವರು. ಮೈಸೂರು ನಿವಾಸಿ ಆಹಾರ ಶಿರಸ್ತೇದಾರ್ ರಮೇಶ್(52) ತೀವ್ರವಾಗಿ ಗಾಯಗೊಂಡವರು. ಇಬ್ಬರು ಬೈಕ್​ನಲ್ಲಿ ಹಂಗಳ ಗ್ರಾಮದಿಂದ ಬರುತ್ತಿದ್ದ ವೇಳೆ ಗುಂಡ್ಲುಪೇಟೆ ಕಡೆಯಿಂದ ಹೋಗುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿಯಾಗಿದೆ. ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಯಿತು. ಪರೀಕ್ಷಿಸಿದ ವೈದ್ಯರು ನಾಗೇಂದ್ರಪ್ಪ ಮೃತಪಟ್ಟಿರುವುದನ್ನು ಧೃಡಪಡಿಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಗಾರದಲ್ಲಿ ಇರಿಸಲಾಗಿದೆ. ಆಹಾರ ಶಿರಸ್ತೇದಾರ್ ರಮೇಶ್ ಅವರಿಗೆ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದೊಯ್ಯಲಾಗಿದೆ. ಟ್ರ್ಯಾಕ್ಟರ್ ಮತ್ತು ಬೈಕ್ ವಶಕ್ಕೆ ಪಡೆಕೊಂಡ ಪೊಲೀಸರು, ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಕೋವಿಡ್‌ ಲಾಕ್‌ಡೌನ್‌ ನಂತರ ರಾಜ್ಯದಲ್ಲಿ ಮತ್ತೆ ಹೆಚ್ಚಿದ ರಸ್ತೆ ಅಪಘಾತಗಳು; ಇಲ್ಲಿದೆ ಅಂಕಿಅಂಶ - Major Road Accident In Karnataka

ETV Bharat Logo

Copyright © 2024 Ushodaya Enterprises Pvt. Ltd., All Rights Reserved.