ETV Bharat / state

ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಸಮಗ್ರ ತನಿಖೆ: ಡಿಕೆ ಶಿವಕುಮಾರ್​ - DK Shivakumar - DK SHIVAKUMAR

ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ನಮ್ಮ ಸರ್ಕಾರ ಯಾರನ್ನೂ ರಕ್ಷಿಸುವುದಿಲ್ಲ ಎಂದು ಡಿಸಿಎಂ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್​ (ETV Bharat)
author img

By ETV Bharat Karnataka Team

Published : Jun 1, 2024, 4:04 PM IST

ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಭರವಸೆ ನೀಡಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಹಗರಣಗಳು ಬಿಜೆಪಿ ಕಾಲದಲ್ಲೂ ನಡೆದಿವೆ. ಇದು ಬೊಮ್ಮಾಯಿ ಅವರು ಸೇರಿದಂತೆ ಎಲ್ಲರಿಗೂ ಗೊತ್ತಿದೆ. ಆದರೂ, ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸಚಿವರಾಗಿದ್ದ ಕೆ.ಎಸ್​.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿದ್ದವರು, ಈಗ ಏಕೆ ಸುಮ್ಮನಿದ್ದೀರಿ ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ಪ್ರಕರಣದಲ್ಲಿ ನೇರವಾಗಿ ಈಶ್ವರಪ್ಪ ಅವರ ಹೆಸರು ಬಂದಿತ್ತು. ಅದೇ ರೀತಿ ಈ ​ ಪ್ರಕರಣದಲ್ಲೂ ನಮಗೆ ದಾಖಲೆ ಅಥವಾ ಪಾಲ್ಗೊಂಡಿರುವ ಬಗ್ಗೆ ಸುಳಿವು ಸಿಕ್ಕರೆ ನಮ್ಮ ಗೌರವ ಕಾಪಾಡಿಕೊಳ್ಳಲು ತನಿಖೆ ಮುಗಿಯುವ ತನಕ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಮಾಡುತ್ತೇವೆ.

ನಮ್ಮ ಸರ್ಕಾರ ಪಾರದರ್ಶಕವಾಗಿ ಇರಬೇಕು. ನಿಗಮದ ಹಣ ಎಲ್ಲೆಲ್ಲಿ ಹೋಗಿದೆ ಎಂದು ಅಧಿಕಾರಿಗಳು ಬೆನ್ನುಹತ್ತಿದ್ದಾರೆ. ಹಣವನ್ನು ಮರಳಿ ಪಡೆಯುತ್ತೇವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದಷ್ಟು ಜನರ ಬಂಧನವಾಗಿದೆ ಎಂದು ವಿವರಿಸಿದರು.

ಹಗರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎನ್ನುವ ಆಗ್ರಹದ ಇದೆ, ಇಂತಿಷ್ಟು ಕೋಟಿಯ ಬ್ಯಾಂಕ್ ಅವ್ಯವಹಾರ ನೇರವಾಗಿ ಸಿಬಿಐ ತನಿಖೆಗೆ ಹೋಗುತ್ತದೆ ಅದು ನಿಯಮ. ಇಲ್ಲಿ ಸರ್ಕಾರ ಕೊಡಬೇಕಾಗಿದ್ದು, ತೆಗೆದುಕೊಳ್ಳಬೇಕಾದ್ದು ಏನಿಲ್ಲ. ನಾವು ತನಿಖೆಗೆ ಸಹಕಾರ ನೀಡುತ್ತೇವೆ. ಅದರಲ್ಲಿ ಯಾವುದೇ ರಾಜಕೀಯ ಮಾಡದೇ ತನಿಖೆ ಮಾಡಲಿ ಎಂದು ತಿಳಿಸಿದರು.

ಸಿ.ಟಿ.ರವಿ, ನಾನು ಹಣ ಹಂಚಿಕೊಂಡಿದ್ದೇವೆ: ಸಿ.ಟಿ. ರವಿ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಯಾರೋ ಒಬ್ಬ ರವಿ ಎನ್ನುವವನು ಸಿಎಂ ಮತ್ತು ಡಿಸಿಎಂ ಹಣ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದಾನೆ. ಆದರೆ ಸಿ.ಟಿ ರವಿ ಮತ್ತು ನಾನು ಇಬ್ಬರೂ ಸೇರಿ ಹಣ ಹಂಚಿಕೊಂಡಿದ್ದೇವೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟನೆ - Valmiki Corporation

ETV Bharat Logo

Copyright © 2024 Ushodaya Enterprises Pvt. Ltd., All Rights Reserved.