ETV Bharat / state

ರಾಜ್ಯಕ್ಕಾಗಿರುವ ಅನ್ಯಾಯ ಒಪ್ಪಿಕೊಂಡ ನಿರ್ಮಲಾ ಸೀತಾರಾಮನ್​ಗೆ ಧನ್ಯವಾದ: ಡಿ.ಕೆ.ಶಿವಕುಮಾರ್ - D K Shivakumar

ನಾವು ಬರ ಪರಿಹಾರಕ್ಕೆ ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದರು.

dcm-d-k-shivakumar-reaction-on-union-minister-nirmala-sitharaman-statement
ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡ ನಿರ್ಮಲಾ ಸೀತಾರಾಮನ್​ಗೆ ಧನ್ಯವಾದ: ಡಿ.ಕೆ. ಶಿವಕುಮಾರ್
author img

By ETV Bharat Karnataka Team

Published : Apr 7, 2024, 3:09 PM IST

Updated : Apr 7, 2024, 3:28 PM IST

ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದು, ಅವರಿಗೆ ಧನ್ಯವಾದಗಳು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಇಂದು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್​ಮೆಂಟ್ ನಿವಾಸಿಗಳ ಭೇಟಿ ಬಳಿಕ ಮಾತನಾಡಿದ ಅವರು, ಬರ ಪರಿಹಾರ ವಿಳಂಬಕ್ಕೆ ಚುನಾವಣಾ ಆಯೋಗ ಕಾರಣ ಎಂಬ ಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.

ಇಷ್ಟು ದಿನಗಳ ಕಾಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದರು. ನಾವು ಬರ ಪರಿಹಾರ ನೀಡುವಂತೆ ಮನವಿ ನೀಡಿ ಎಷ್ಟು ತಿಂಗಳಾಗಿದೆ?. ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಆಯೋಗದ ನೆಪ ಹೇಳುತ್ತಿದ್ದಾರೆ. ಕೇಂದ್ರದ ಅಕ್ಷಮ್ಯ ಅಪರಾಧದ ಬಗ್ಗೆ ಜನರಿಗೂ ಅರಿವಾಗಿದೆ. ಈ ಮೂಲಕ ಡಿ.ಕೆ.ಸುರೇಶ್ ಅವರ ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ಪಾಲಿನ ಹೋರಾಟ ಒಪ್ಪಿಕೊಂಡಿದ್ದಾರೆ ಎಂದರು.

ಮೇಕೆದಾಟು ಯೋಜನೆ ವಿಚಾರವಾಗಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮಾತನಾಡಿ, ಇಲ್ಲಿನ ಜನರ ಕಷ್ಟಕ್ಕೆ ಪರಿಹಾರ ನೀಡಿ ಧೈರ್ಯ ತುಂಬುವವರು ನಾವು. ಬೇರೆ ಅಭ್ಯರ್ಥಿಗಳು ನಮ್ಮಂತೆ ಜನರಿಗೆ ಅಭಯ ನೀಡುವುದಿಲ್ಲ. ಕುಮಾರಸ್ವಾಮಿ ಈಗ ಮೇಕೆದಾಟು, ಮಹದಾಯಿ ಯೋಜನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಅಧಿಕಾರ ಇದ್ದಾಗ ಈ ವಿಚಾರದಲ್ಲಿ ಏನೂ ಮಾಡದವರು ಈಗ ಏನು ಮಾಡುತ್ತಾರೆ?. ನಾನು ಮೇಕೆದಾಟು ಪಾದಯಾತ್ರೆ ಮಾಡುವಾಗ ಅವರು ಕೊಟ್ಟಿರುವ ಹೇಳಿಕೆ ನೋಡಿ. ನಮ್ಮ ಪಾದಯಾತ್ರೆ ಸಂದರ್ಭದಲ್ಲಿ ಕಬಾಬ್ ತಿನ್ನೋಕೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ ಈಗ ಪಾದಯಾತ್ರೆ ಬಗ್ಗೆ ಮಾತಾಡುತ್ತಿದ್ದಾರೆ. ಮಂಡ್ಯಕ್ಕೆ ಬಂದ ನಂತರ ಅವರಿಗೆ ಬಿಸಿ ತಟ್ಟಿರುವಂತೆ ಕಾಣುತ್ತಿದೆ ಎಂದು ಟೀಕಿಸಿದರು.

ನಾವು ಹೋರಾಟ ಮಾಡಿದ್ದು ರಾಜ್ಯದ ಜನತೆಗಾಗಿ. ರಾಜಕಾರಣದಲ್ಲಿ ಅದು ನಮ್ಮ ಬದ್ಧತೆ. ಅದನ್ನು ಅವರಿಂದ ಸಹಿಸಲು ಆಗಲಿಲ್ಲ. ಅವರು ಏನಾದರೂ ಮಾಡಿಕೊಳ್ಳಲಿ. ಕಾವೇರಿ ಜಲಾನಯನ ಪ್ರದೇಶದ ಜನರಿಗೆ, ಬೆಂಗಳೂರು ಜನರಿಗೆ ಕುಡಿಯುವ ನೀರು ಪೂರೈಸಲು ನಾನು ನೀರಾವರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ನಾನು ಕೊಟ್ಟ ಮಾತಿನಂತೆ ನಡೆಯುತ್ತೇನೆ ಎಂದು ಜನರಿಗೆ ನಂಬಿಕೆ ಇದೆ. ಅವರ ನಂಬಿಕೆಗೆ ತಕ್ಕಂತೆ ನಡೆಯುತ್ತೇನೆ. ಇದು ಮತದಾರರಿಗೆ ಮನವರಿಕೆಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಬಿಜೆಪಿಯವರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಕರಂದ್ಲಾಜೆ ಇಲ್ಲಿಗೆ ಬಂದಿದ್ದಾರೆ, ಇಲ್ಲಿಂದಲೂ ನೀವು ವಾಪಸ್ ಕಳಿಸಿ: ಸಿಎಂ - Lok Sabha Election

Last Updated : Apr 7, 2024, 3:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.