ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಚೇರಿಗೆ ಸಾಹಿತಿಗಳನ್ನು ಕರೆದದ್ದು ನಾನೇ. ಅದರಲ್ಲಿ ತಪ್ಪೇನಿದೆ? ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಅಕಾಡೆಮಿ ಅಧ್ಯಕ್ಷರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ ಹೀಗೆ ಉತ್ತರಿಸಿದ ಅವರು, ಸಾಹಿತಿಗಳು ರಾಜಕಾರಣಿಗಳು ಆಗಬಾರದು ಅಂತೇನಿಲ್ಲವಲ್ಲ. ಅಕಾಡೆಮಿ ಅಧ್ಯಕ್ಷರ ಸಭೆ ನಾನೇ ಕರೆದಿದ್ದು, ಅದರಲ್ಲೇನಿದೆ. ಇದು ಸರ್ಕಾರದ ನೇಮಕ. ಹೀಗಾಗಿ ಎಲ್ಲಿ ಬೇಕಾದರೂ ಕರೆಸಿಕೊಳ್ಳಬಹುದು. ಎಲ್ಲಿ ಬೇಕಾದರೂ ಸಭೆ ಮಾಡಬಹುದು ಎಂದು ಹೇಳಿದರು.
ಪ್ರಾಧಿಕಾರಗಳು ಇಂಡಿಪೆಂಡೆಂಟ್ ಬಾಡಿಗಳಲ್ಲ. ಆಲ್ ಆರ್ ಪೊಲಿಟಿಷಿಯನ್ಸ್, ಅವರದ್ದೇ ಆದ ಸಿದ್ಧಾಂತಗಳನ್ನು ಇಟ್ಟುಕೊಂಡು ಅವರೂ ರಾಜಕೀಯ ಮಾಡುತ್ತಾರೆ. ಅದನ್ನು ಕೆಲವೊಬ್ಬರು ಹೇಳಿಕೊಳ್ಳದೇ ಇರಬಹುದು. ನಾನು ಕರೆದಾಗ, ಇಷ್ಟ ಇದ್ದೋರು ಬಂದಿದ್ದಾರೆ. ಕೆಲವರು ಬಂದಿಲ್ಲ ಎಂದರು.
ಇದು ಮಾಧ್ಯಮದವರಿಗೆ ತಪ್ಪು ಎನಿಸಬಹುದು. ಸಾಹಿತಿಗಳೂ ರಾಜಕಾರಣಿಗಳೇ. ಅವರೂ ರಾಜಕಾರಣಕ್ಕೆ ಬರಬಹುದು. ನಿಮ್ಮನ್ನು ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳುವುದಿಲ್ಲವೇ?. ನೀವು ಬೆಳಗಿಂದ ಸಾಯಂಕಾಲದ ತನಕ ನಮ್ಮ ಹಿಂದೆ ಓಡಾಡುವುದಿಲ್ಲವೇ? ನಮಗೋಸ್ಕರ ಬಡಿದಾಡೋದಿಲ್ಲವೇ? ಎಂದು ಮಾಧ್ಯಮದವರನ್ನು ಡಿಕೆಶಿ ಕೇಳಿದರು.
ಇದನ್ನೂ ಓದಿ : ಬೆಂಗಳೂರಿಗರಿಗೆ ಸದ್ಯದಲ್ಲೇ ನೀರಿನ ದರ ಏರಿಕೆ ಶಾಕ್; ಹೀಗಂದ್ರು ಡಿಸಿಎಂ ಡಿಕೆ ಶಿವಕುಮಾರ್ - DCM DK Shivakumar