ETV Bharat / state

ಜನರ ತೀರ್ಪನ್ನು ಸ್ವಾಗತಿಸುತ್ತೇನೆ-ಡಿ.ಕೆ.ಸುರೇಶ್; ಇದು ಕಾರ್ಯಕರ್ತರ ಗೆಲುವು-ಡಾ.ಸಿ.ಎನ್‌.ಮಂಜುನಾಥ್​ - Lok Sabha Election Results

author img

By ETV Bharat Karnataka Team

Published : Jun 4, 2024, 4:25 PM IST

Updated : Jun 4, 2024, 4:44 PM IST

ಲೋಕಸಭೆ ಚುನಾವಣೆ 2024ರ ಫಲಿತಾಂಶದ ಕುರಿತು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಮತ್ತು ಸೋಲು ಅನುಭವಿಸಿದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್​ ಪ್ರತಿಕ್ರಿಯಿಸಿದ್ದಾರೆ.

Former MP D. K Suresh and manjunath
ಡಿ.ಕೆ.ಸುರೇಶ್ ಹಾಗು ಡಾ.ಸಿ.ಎನ್.ಮಂಜುನಾಥ್ (ETV Bharat)

ಕಾಂಗ್ರೆಸ್‌ ಅಭ್ಯರ್ಥಿ ಡಿ. ಕೆ ಸುರೇಶ್​ ಹಾಗೂ ವಿಜೇತ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಮಾತನಾಡಿದರು (ETV Bharat)

ರಾಮನಗರ : ''ಈ ಗೆಲುವು ನನ್ನದ್ದಲ್ಲ, ಕಾರ್ಯಕರ್ತರ ಗೆಲುವು. ರಾಜ್ಯದ ನಾಯಕರು ಹಾಗೂ ಕಾರ್ಯಕರ್ತ ಬಂಧುಗಳು ಇದಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಅದಕ್ಕೋಸ್ಕರ ನಾನು ಎಲ್ಲರಿಗೂ ಹೃದಯಸ್ಪರ್ಶಿ ನಮಸ್ಕಾರ ಹೇಳುತ್ತೇನೆ. ಇದರಲ್ಲಿ ರಾಷ್ಟ್ರೀಯ ನಾಯಕರಾದಂತಹ ನರೇಂದ್ರ ಮೋದಿ, ಅಮಿತ್ ಶಾ, ದೇವೇಗೌಡರು, ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ ಇವರೆಲ್ಲರೂ ಉತ್ತಮವಾದ ಸಲಹೆ, ಮಾರ್ಗದರ್ಶನವನ್ನು ಕೊಟ್ಟಿದ್ದಾರೆ. ಜನ ಕೇವಲ ಮತಗಳನ್ನು ಕೊಟ್ಟಿಲ್ಲ. ಅವರ ಪ್ರೀತಿಯನ್ನೂ ಹಂಚಿಕೊಂಡಿದ್ದಾರೆ. ಹೀಗಾಗಿ ಇದು ಕಾರ್ಯಕರ್ತರ ಗೆಲುವು, ಮತದಾರರ ಗೆಲುವೆಂದು ಹೇಳಬೇಕಾಗುತ್ತೆ'' ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಎನ್‌ಡಿಎ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.

ಸಾಮಾನ್ಯ ಕಾರ್ಯಕರ್ತನಾಗಿ ಹೋರಾಟ ಮಾಡುವೆ- ಡಿ.ಕೆ.ಸುರೇಶ್: ಇನ್ನು ಸೋಲಿನ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್, "ನನ್ನ ಕ್ಷೇತ್ರದ ಜನರ ತೀರ್ಮಾನವನ್ನು ಸ್ವಾಗತಿಸುತ್ತಾ ಡಾ.ಮಂಜುನಾಥ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತನಾಗಿ ಹೋರಾಟ ಮುಂದುವರಿಸುತ್ತೇನೆ" ಎಂದು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, "ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ ಕೆಲಸ ಮಾಡಲು ಜನ ಮೂರು ಬಾರಿ ಅವಕಾಶ ನೀಡಿದ್ದರು. ನಾಲ್ಕನೇ ಬಾರಿಯ ಅಗ್ನಿಪರೀಕ್ಷೆಯಲ್ಲಿ ವಿರಾಮ ನೀಡಿದ್ದಾರೆ. ಕ್ಷೇತ್ರದ ಮತದಾರರಿಗೆ ಧನ್ಯವಾದಗಳು. ನನಗೆ ಮತ ಹಾಕಿರುವ, ಪಕ್ಷಕ್ಕಾಗಿ ಕೆಲಸ ಮಾಡಿರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಧನ್ಯವಾದ ಹೇಳುತ್ತೇನೆ'' ಎಂದರು.

''ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟ ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಇತರೆ ನಾಯಕರಿಗೂ ಧನ್ಯವಾದ ತಿಳಿಸುತ್ತೇನೆ. ಕನ್ನಡಿಗರ ಧ್ವನಿಯಾಗಿ, ಕ್ಷೇತ್ರದ ಅಭಿವೃದ್ಧಿಗೆ ನಾನು ಕೆಲಸ ಮಾಡಿದ್ದೇನೆ. ಜನ ಹೊಸಬರಿಗೆ ಅವಕಾಶ ನೀಡಿದೆ. ಅವರು ಉತ್ತಮವಾಗಿ ಕೆಲಸ ಮಾಡಲಿ. ರಾಜ್ಯಕ್ಕೆ, ಕ್ಷೇತ್ರಕ್ಕೆ ಒಳ್ಳೆಯದಾಗಲಿ'' ಎಂದು ತಿಳಿಸಿದರು.

''ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕಾರ ಮಾಡಬೇಕು. ನಾನು ಗೆಲ್ಲುವ ಬಗ್ಗೆ ಶೇ.100ರಷ್ಟು ನಂಬಿಕೆ ಇತ್ತು. ನಾನು ಮಾಡಿದ ಅಭಿವೃದ್ಧಿ ಕೆಲಸಗಳಿಗೆ ಮನ್ನಣೆ ಸಿಗುವ ವಿಶ್ವಾಸವಿತ್ತು. ಆದರೆ ನನಗೆ ವಿಶ್ರಾಂತಿ ನೀಡಿದ್ದಾರೆ. ಈಗ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ" ಎಂದು ಹೇಳಿದರು.

ಕ್ಷೇತ್ರದಲ್ಲಿ ಮೈತ್ರಿ ಯಶಸ್ವಿಯಾಯಿತೇ ಎಂದು ಕೇಳಿದಾಗ, "ರಾಜಕಾರಣದಲ್ಲಿ ತಂತ್ರ, ಕುತಂತ್ರಗಳು ಕೆಲಸ ಮಾಡುತ್ತವೆ. ಈಗಲೂ ಅದು ಕೆಲಸ ಮಾಡಿದ್ದು, ಅದನ್ನು ನಾವು ಸ್ವಾಗತ ಮಾಡಬೇಕು. ಇದರಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಜನರ ತೀರ್ಮಾನವೇ ಅಂತಿಮ. ಮುಂದಿನ ದಿನಗಳಲ್ಲೂ ಹೋರಾಟ ಮುಂದುವರಿಸುತ್ತೇನೆ. ನನಗೆ ರಾಜಕಾರಣ, ರಾಜಕೀಯ ಜೀವನ ಅನಿವಾರ್ಯವಲ್ಲ. ನಾನು ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಕೆಲಸ ಮಾಡಿದ್ದೇನೆ" ಎಂದರು.

'ಮಾಧ್ಯಮಗಳ ಸರ್ವೇಗಳು ಸುಳ್ಳಾಗಿವೆ': ಚುನಾವಣೆಯಲ್ಲಿ ಇಂಡಿ ಒಕ್ಕೂಟ ಉತ್ತಮ ಪ್ರದರ್ಶನ ನೀಡಿರುವ ಕುರಿತ ಪ್ರಶ್ನೆಗೆ, "ಉತ್ತರ ಭಾರತದಲ್ಲಿ ಕಾಂಗ್ರೆಸ್ ಹಾಗೂ ಇಂಡಿ ಒಕ್ಕೂಟ ಉತ್ತಮ ಸ್ಥಾನಗಳನ್ನು ಗಳಿಸಿದೆ. ಮೋದಿ ಅವರ ಸಾಧನೆಗೆ ಜನ ಉತ್ತರ ನೀಡುತ್ತಿದ್ದಾರೆ. ಬಿಜೆಪಿಯವರು 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಾಗಿ ಹೇಳುತ್ತಿದ್ದರು. ಮಾಧ್ಯಮಗಳ ಸರ್ವೇಗಳು ಸುಳ್ಳಾಗಿವೆ" ಎಂದು ತಿಳಿಸಿದರು.

ಇದನ್ನೂ ಓದಿ: ಮೊದಲ ಚುನಾವಣೆಯಲ್ಲೇ ಡಾ.ಮಂಜುನಾಥ್​​ಗೆ ಭರ್ಜರಿ ಗೆಲುವು: ಡಾಕ್ಟರ್​ ಹೃದಯ ಬಡಿತಕ್ಕೆ ಬಂಡೆ ಪುಡಿ ಪುಡಿ - Bengaluru Rural Lok Sabha

Last Updated : Jun 4, 2024, 4:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.