ETV Bharat / state

ಗೃಹ ಜ್ಯೋತಿ ಲಾಭ ಪಡೆಯಲು ಇಲ್ಲಿದೆ ಸದಾವಕಾಶ: ಮನೆ ಬದಲಿಸುವವರಿಗೆ ಸಿಗಲಿದೆ ಈ ಸೌಲಭ್ಯ - ಏನದು ಗೊತ್ತಾ? - Gruha Jyothi Yojana - GRUHA JYOTHI YOJANA

ಉಚಿತ ವಿದ್ಯುತ್ ಸೌಲಭ್ಯ ಒದಗಿಸುವ ‘ಗೃಹಜ್ಯೋತಿ ಯೋಜನೆ’ಗೆ ವರ್ಷದ ಸಂಭ್ರಮ. ಇದೇ ಸಂದರ್ಭದಲ್ಲಿ ಮನೆ ಬದಲಾಯಿಸುವ ಗ್ರಾಹಕರಿಗೆ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ.

ಗೃಹ ಜ್ಯೋತಿ
ಗೃಹ ಜ್ಯೋತಿ (ETV Bharat)
author img

By ETV Bharat Karnataka Team

Published : Aug 6, 2024, 10:27 PM IST

ಬೆಂಗಳೂರು: ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹ ಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದು.

ಡಿ-ಲಿಂಕ್‌ ಮಾಡುವುದು ಹೇಗೆ?:

https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ಗ್ರಾಹಕರು ನೋಂದಾಯಿಸಿಕೊಳ್ಳಬಹುದು. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

ಮನೆ ಬದಲಿಸುವ ಸಂದರ್ಭಲ್ಲಿ ಆಧಾರ್‌ ನಂಬರ್‌ ಜತೆ ಲಿಂಕ್‌ ಆಗಿರುವ ಆರ್‌.ಆರ್‌. ನಂಬರ್‌ ವಿವರ ಪರಿಶೀಲಿಸಿ ಡಿ-ಲಿಂಕ್‌ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್‌ ಜತೆ ಲಿಂಕ್‌ ಆಗಿರದ ಆರ್‌.ಆರ್‌. ನಂಬರ್‌ಗೆ ಲಿಂಕ್‌ ಮಾಡಬಹುದು. ಅಂದರೆ, ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿ ಪಡಿಸಿಕೊಳ್ಳಿ.

"ರಾಜ್ಯದ 1.56 ಕೋಟಿ ಜನರು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್‌ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್‌ ಫೀ, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಡಿಲಿಂಕ್‌ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ. ಸಾಫ್ಟ್‌ವೇರ್‌ನಲ್ಲಿ ಬದಲಾವಣೆ ಮಾಡಿ, ಜನತೆ ಈ ಸೌಲಭ್ಯ ಒದಗಿಸಲಾಗಿದೆ" ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

"ಗೃಹ ಜ್ಯೋತಿ ಯೋಜನೆಯ ವೆಬ್‌ಸೈಟ್‌ ಸಾಫ್ಟ್‌ವೇರ್‌ ಅಪ್‌ಡೇಟ್‌ ಮಾಡುವ ಡಿ-ಲಿಂಕ್‌ಗೆ ಇದ್ದ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗಿದೆ. ಡಿ-ಲಿಂಕ್‌ಗೆ ಅವಕಾಶ ಕಲ್ಪಿಸಿಕೊಡವಂತೆ ಗ್ರಾಹಕರು ಕೋರಿದ್ದರು, ಅದಕ್ಕೆ ಸ್ಪಂದಿಸಿ ಈ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಡಲಿದೆ. ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಬೇಕು" ಎಂದು ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ತಿಳಿಸಿದ್ದಾರೆ.

ಗೃಹಜ್ಯೋತಿ ಫಲಾನುಭವಿಗಳ ಸಂಖ್ಯೆ 1.56 ಕೋಟಿ: 2024ರ ಜೂನ್‌ವರೆಗೆ ಒಟ್ಟು 1.67 ಕೋಟಿ ನೋಂದಣಿಯಾಗಿದೆ. ಒಟ್ಟು ಫಲಾನುಭವಿಗಳ ಸಂಖ್ಯೆ 1.56 ಕೋಟಿ. 2023 ಆಗಸ್ಟ್‌ರಿಂದ 2024 ಜೂನ್‌ವರೆಗೆ ಸರ್ಕಾರ ಬಿಡುಗಡೆ ಮಾಡಿರುವ ಒಟ್ಟ ಸಬ್ಸಿಡಿ 8,239 ಕೋಟಿ ರೂ ಆಗಿದೆ.

ಇದನ್ನೂ ಓದಿ: ಇಂದಿನಿಂದಲೇ ಎರಡೂ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮೆ: ಲಕ್ಷ್ಮಿ ಹೆಬ್ಬಾಳ್ಕರ್‌ - Gruha Lakshmi Scheme

ETV Bharat Logo

Copyright © 2024 Ushodaya Enterprises Pvt. Ltd., All Rights Reserved.