ETV Bharat / state

"ಹೋಮದ ಪೂರ್ಣಾಹುತಿ ಬಳಿಕ ಪ್ರಸಾದ ಕೊಡುವ ಪದ್ಧತಿ, ಪ್ರಸಾದ ಕೊಡುವ ಸಮಯ ಬಂದಿದೆ": ಡಿ.ವಿ. ಸದಾನಂದ ಗೌಡ - FORMER CM D V SADANANDA GOWDA

ಬಿಜೆಪಿಯೊಳಗಿನ ಭಿನ್ನಮತ ಹಾಗೂ ಗುಂಪುಗಾರಿಕೆಗೆ ಸರಿಯಾದ ಸಮಯದಲ್ಲಿ ಸರಿಯಾದ ಪರಿಹಾರ ದೊರೆಯಲಿದೆ. ಆ ಪರಿಹಾರ ದೊರೆಯುವ ಸಮಯ ಈಗ ಬಂದಿದೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಹೇಳಿದರು.

CM D V Sadananda Gowda
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ (ETV Bharat)
author img

By ETV Bharat Karnataka Team

Published : Dec 4, 2024, 1:58 PM IST

ಬೆಂಗಳೂರು: "ದೊಡ್ಡ ದೊಡ್ಡ ಹೋಮ ಮಾಡಿ ಪೂರ್ಣಾಹುತಿ ಮಾಡಿದ ನಂತರ ಪ್ರಸಾದ ಕೊಡುತ್ತಾರೆ. ಆ ಪ್ರಸಾದ ಕೊಡುವ ಸಮಯಕ್ಕೆ ಬಂದಿದ್ದೇವೆ" ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಒಂದು ಕಾಲ ಕೂಡಿ ಬಂದಿದೆ. ಆ ಪ್ರಸಾದ ಕೊಡುವ ಸಮಯಕ್ಕೆ ಬಂದಿದ್ದೇವೆ. ಎಲ್ಲಾ ಸಂಸದರು, ಯತ್ನಾಳ್ ಟೀಮ್ ದೆಹಲಿಯಲ್ಲಿ ಇದ್ದಾರೆ. ದೆಹಲಿಯಲ್ಲಿ ಜೋಶಿ ನೇತೃತ್ವದಲ್ಲಿ ಸಂಸದರ ಸಭೆ ಮಾಡಿದ್ದಾರೆ. ಯತ್ನಾಳ್ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಇಂದು ಶಿಸ್ತು ಸಮಿತಿ ಅಧ್ಯಕ್ಷರ ಮುಂದೆ ಯತ್ನಾಳ್ ಉತ್ತರ ಕೊಡುತ್ತಾರೆ. ನಮ್ಮಲ್ಲಿನ ಜಗಳ ವಿರೋಧಿಗಳಿಗೆ ಅಸ್ತ್ರ ಆಗುತ್ತಿದೆ" ಎಂದರು.

"ತರುಣ್ ಚುಗ್ ನಿನ್ನೆ ಚರ್ಚೆ ಮಾಡಲು ಅವಕಾಶ ಕೊಡಲಿಲ್ಲ. ನನಗೆ ಯಾವುದೇ ಸಂಬಂಧ ಇಲ್ಲ, ನಾನು ಅದಕ್ಕಾಗಿ ಬಂದಿಲ್ಲ ಅಂದರು. ದೆಹಲಿಗೆ ಈಗಾಗಲೇ ಅಧ್ಯಕ್ಷರು ಹೋಗಿ ಬಂದಿದ್ದಾರೆ. ಆರ್‌. ಅಶೋಕ್ ಕೂಡಾ ದೆಹಲಿಗೆ ಹೋಗಿದ್ದಾರೆ. ಯತ್ನಾಳ್ ಟೀಮ್ ಕೂಡಾ ದೆಹಲಿಯಲ್ಲೇ ಇದೆ. ಇದಕ್ಕಿಂತ ಇನ್ನು ಏನು ರಿಪೋರ್ಟ್ ಬೇಕು? ಎಲ್ಲರ ಕಡೆಯಿಂದಲೂ ವರದಿಯನ್ನು ಹೈಕಮಾಂಡ್ ಸ್ವೀಕರಿಸಿದೆ‌. ಇನ್ನು ಎರಡು ಮೂರು ದಿನಗಳಲ್ಲಿ ಒಂದು ನಿರ್ಧಾರಕ್ಕೆ ಬನ್ನಿ. ಯಾರೇ ತಪ್ಪು ಮಾಡಿದರೂ ಕ್ರಮ ಆಗಲಿ. ಇಲ್ಲಿ ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ" ಎಂದು ಕಿಡಿಕಾರಿದರು‌.

"ಚಮಚಾಗಿರಿ ಮಾಡುವುದರಿಂದ ಪಕ್ಷ ಸಂಘಟನೆ ಆಗಲ್ಲ. ದುಡ್ಡಿನ ಮೂಟೆ ಇಟ್ಟುಕೊಂಡು ಬಂದವರಿಂದ ಪಕ್ಷ ಸಂಘಟನೆ ಆಗಲ್ಲ. ಅತ್ಯಂತ ದೊಡ್ಡ ಶಿಸ್ತು ಉಲ್ಲಂಘನೆ ಸೋಮಶೇಖರ್ ಮತ್ತು ಹೆಬ್ಬಾರ್‌ ಅವರಿಂದ ಆಗಿದೆ. ತೇಪೆ ಹಾಕುವ ಕೆಲಸ ಈ ಬಾರಿ ಆಗಬಾರದು ಅಂತ ಹೈಕಮಾಂಡ್ ನಾಯಕರಿಗೆ ಹೇಳುತ್ತೇನೆ. ಅದು ಯಾರೇ ಆದರೂ ಕ್ರಮ ಆಗಬೇಕು. ಸ್ಥಳೀಯ ಚುನಾವಣೆ ಮೇಲೂ ಇದು ಪರಿಣಾಮ ಬೀರುತ್ತದೆ. ಯತ್ನಾಳ್ ಮಾಡಿರುವುದು ಇಡೀ ಲೋಕಕ್ಕೆ ಗೊತ್ತಿದೆ. ಫೈಟ್ ಮಾಡಲು ಒಂದು ತಂಡ ರಚನೆ ಆಗುವುದು ಸರಿಯಲ್ಲ. ಅವರೆಲ್ಲಾ ದೆಹಲಿಗೆ ಹೋಗಿದ್ದರೆ ಮತ್ತಷ್ಟು ಗೌರವ ಬರುತ್ತಿತ್ತು. ತೊಡೆ ತಟ್ಟಿ ಯತ್ನಾಳ್ ಟೀಮ್ ಹೋಗುವುದು ಸರಿಯಲ್ಲ. ಬಲ ಪ್ರದರ್ಶನ ಮಾಡುವುದಾದರೆ ಹೈಕಮಾಂಡ್ ಬೇಕಾಗಿಲ್ಲ ಅಲ್ವಾ?" ಎಂದು ಪ್ರಶ್ನಿಸಿದರು.

"ನಾವು ಹೈಕಮಾಂಡ್‌ಗೆ ಹೋಗಿ ವರದಿ ಕೊಡುವ ಮೂಲಕ ನಮ್ಮ ಗೌರವ ಹೆಚ್ಚಿಸಿಕೊಳ್ಳಬೇಕು. ಇದು ಬಯಲಾಟ ಇದ್ದಂತೆ. ಇವತ್ತು ಒಂದು ತಂಡದ ಆಟ, ನಾಳೆ ಮತ್ತೊಂದು ತಂಡದ ಆಟ. ರಾಷ್ಟ್ರೀಯ ಪ್ರಮುಖರು ತೀರ್ಮಾನ ಮಾಡಬೇಕು. ತಪ್ಪು ಇದ್ದವರನ್ನು ಹೊರ ಹಾಕಬೇಕು, ಅಶಿಸ್ತನ್ನು ಸರಿ ಮಾಡಬೇಕು. ಪ್ರತ್ಯೇಕ ಹೋರಾಟ ಮಾಡುವುದನ್ನು ನಿಲ್ಲಿಸಬೇಕು. ಬದಲಾವಣೆಯಿಂದ ಎಲ್ಲಾ ಸರಿ ಮಾಡಬಹುದು ಎಂದು ಅನ್ನಿಸಿದರೆ, ಅದಾದರೂ ಮಾಡಿ. ಸದಸ್ಯತ್ವದಲ್ಲಿ ನಾವು ಎಷ್ಟರಮಟ್ಟಿಗೆ ಸ್ಥಾನದಲ್ಲಿ ಇದ್ದರೆ ಏನು? ಪಕ್ಷದ ಜಗಳ ಬೀದಿಗೆ ಬಂದಿದೆ. ಒಂದು ಟೀಮ್ ವಕ್ಫ್​ ವಿರುದ್ಧ ಹೋರಾಟ ಮಾಡಿ ಜನರ ಬಳಿ ಹೋದ ಮೇಲೆ ಮತ್ತೊಂದು ತಂಡ ಹೋದರೆ ಪ್ರಯೋಜನ ಆಗುವುದಿಲ್ಲ" ಎಂದು ತಿಳಿಸಿದರು.

"ಡಿಸೆಂಬರ್ 7 ರಂದು ತೀರ್ಮಾನ ಆಗಲು ಉಸ್ತುವಾರಿಗಳ ಕೈಯಲ್ಲಿ ಏನೂ ಇಲ್ಲ. ಏನೇ ಆದರೂ ಜೆ.ಪಿ. ನಡ್ಡಾ ತೀರ್ಮಾನ ಮಾಡಬೇಕು. ಉಸ್ತುವಾರಿಗಳು ವರದಿ ಪಡೆದು ಹೈಕಮಾಂಡ್​ಗೆ ಕೊಡಬೇಕು ಅಷ್ಟೇ. ಆರ್. ಅಶೋಕ್ ಅವರ ಜೊತೆ ಮಾತನಾಡಿದ್ದೆ. ದೆಹಲಿಗೆ ಹೋಗುತ್ತಾರೆ ಅಂತ ನನಗೆ ಗೊತ್ತಿರಲಿಲ್ಲ. ನಾವೆಲ್ಲರೂ ಮಾತನಾಡುವುದು ಸರಿ ಇದೆ ಅಂತ ಅಶೋಕ್ ಹೇಳಿದ್ದಾರೆ. ಪರಿಹಾರ ಇದ್ದೇ ಇದೆ, ಎಲ್ಲರೂ ತಾಳ್ಮೆಯಿಂದ ಇರಬೇಕು" ಎಂದರು.

ಇದನ್ನೂ ಓದಿ: ಬಿಜೆಪಿ ಗುಂಪುಗಾರಿಕೆ ನಮಗೆ ದೌರ್ಬಲ್ಯ, ಕಾಂಗ್ರೆಸ್​ಗೆ ನಮ್ಮ ದೌರ್ಬಲ್ಯವೇ ಶಕ್ತಿ, ಅಸ್ತ್ರ: ಡಿ.ವಿ‌.ಸದಾನಂದ ಗೌಡ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.