ಮೈಸೂರು : ಚಾಮುಂಡೇಶ್ವರಿ ದೇವಾಲಯದಲ್ಲಿ ನಟ ಡಾಲಿ ಧನಂಜಯ್ ಹಾಗೂ ಡಾ. ಧನ್ಯತಾ ಅವರು ತಮ್ಮ ಲಗ್ನ ಪತ್ರಿಕೆ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ನಟ ಡಾಲಿ ಧನಂಜಯ್, ಲಗ್ನ ಪತ್ರಿಕೆ ಪ್ರಿಂಟ್ ಆದಮೇಲೆ ಇಲ್ಲಿಗೆ ಬಂದಿರಲಿಲ್ಲ. ಹಾಗಾಗಿ ಇಂದು ದೇವಸ್ಥಾನಕ್ಕೆ ಬಂದಿದ್ದೇವೆ. ಮದುವೆಗೆ ಸಿದ್ಧತೆಗಳು ನಡೆಯುತ್ತಿವೆ. ಲಗ್ನ ಪತ್ರಿಕೆ ಕೊಡುವುದನ್ನ ಶುರು ಮಾಡಿದ್ದೇನೆ. ಹಿರಿಯರಿಗೆ ಈಗಾಗಲೇ ಲಗ್ನ ಪತ್ರಿಕೆ ಕೊಡಲು ಶುರು ಮಾಡಿದ್ದೇನೆ. ಇಂದು ಚಾಮುಂಡಿ ಬೆಟ್ಟದಲ್ಲಿ ಲಗ್ನ ಪತ್ರಿಕೆಗೆ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದರು.
ಮೈಸೂರಿನಲ್ಲೇ ಮದುವೆ ನಡೆಯುತ್ತಿದೆ. ಎಲ್ಲರೂ ಬಂದು ಆಶೀರ್ವಾದ ಮಾಡಿ. ಎಲ್ಲರಿಗೂ ಲಗ್ನ ಪತ್ರಿಕೆ ಕೊಡುತ್ತೇನೆ ಎಂದು ತಿಳಿಸಿದರು.
ಡಾ. ಧನ್ಯತಾ ಮಾತನಾಡಿ, ಮೈಸೂರಿನಲ್ಲಿ ಮದುವೆ ನಡೆಯುತ್ತಿದೆ. ಮೈಸೂರು ಅಂದ್ರೆ ನಮಗೆಲ್ಲರಿಗೂ ನಂಟು ಇದೆ. ಚೆನ್ನಾಗಿ ಆಗಲಿ, ಮದುವೆಗೆ ಎಲ್ಲರೂ ಬಂದು ಆಶೀರ್ವಾದ ಮಾಡಿ ಎಂದರು.
ಇದನ್ನೂ ಓದಿ : ಶಿವಣ್ಣನನ್ನು ಮದುವೆಗೆ ಆಹ್ವಾನಿಸಿದ ಡಾಲಿ ಧನಂಜಯ್ - ಧನ್ಯತಾ - DAALI DHANANJAY DHANYATA WEDDING