ETV Bharat / state

ದಕ್ಷಿಣ ಭಾರತ ಉತ್ಸವದಲ್ಲಿ 4,200 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆ: ಸಚಿವ ಹೆಚ್.ಕೆ.ಪಾಟೀಲ್ - DAKSHIN BHARAT UTSAV 2024

ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ದಕ್ಷಿಣ ಭಾರತ ಉತ್ಸವದ ಮೂಲಕ ಸುಮಾರು 4,200 ಕೋಟಿ ರೂ.ಗಳಷ್ಟು ಹೂಡಿಕೆಯ ಪ್ರಸ್ತಾವನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸಚಿವ ಹೆಚ್​.ಕೆ.ಪಾಟೀಲ್ ಮಾಹಿತಿ ನೀಡಿದರು.

ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ದಕ್ಷಿಣ ಭಾರತ ಉತ್ಸವದ ಸಮಾರೋಪ ಸಮಾರಂಭ
ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ದಕ್ಷಿಣ ಭಾರತ ಉತ್ಸವದ ಸಮಾರೋಪ ಸಮಾರಂಭ (ETV Bharat)
author img

By ETV Bharat Karnataka Team

Published : Jun 16, 2024, 8:44 PM IST

ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಶೇಕಡಾ 50 ರಷ್ಟು ಹೆಚ್ಚಾಗಿದೆ. ಈ ಕ್ಷೇತ್ರಗಳಲ್ಲಿ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವ್ಯಾಪಕ ಅವಕಾಶವಿದೆ. ದಕ್ಷಿಣ ಭಾರತ ಉತ್ಸವದ ಮೂಲಕ ಹರಿದು ಬಂದಿರುವ ಸುಮಾರು 4,200 ಕೋಟಿ ರೂಪಾಯಿಗಳ ಹೂಡಿಕೆಯ ಜೊತೆಗೆ ಇನ್ನಷ್ಟು ಹೆಚ್ಚು ಹಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಬಳಸುವಂತೆ ಪ್ರವಾಸೋದ್ಯಮ ಹಾಗೂ ಕಾನೂನು ಸಚಿವ ಹೆಚ್‌.ಕೆ. ಪಾಟೀಲ್ ಕರೆ ನೀಡಿದರು.

ಇಂದು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ದಕ್ಷಿಣ ಭಾರತ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಅವರು, ದಕ್ಷಿಣ ಭಾರತ ರಾಜ್ಯಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಅವುಗಳಲ್ಲಿ ಹೂಡಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಎಫ್‌ಕೆಸಿಸಿಐ ಆಯೋಜಿಸಿರುವ ಈ ಕಾರ್ಯಕ್ರಮ ಬಹಳ ಮಹತ್ವದ್ದಾಗಿದೆ. ಈ ಉತ್ಸವದ ಮೂಲಕ ಸುಮಾರು 4,200 ಕೋಟಿಗಳಷ್ಟು ಹೂಡಿಕೆಯ ಪ್ರಸ್ತಾವನೆಗಳಿಗೆ ಒಡಂಬಡಿಕೆ ಆಗುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಫ್‌ಕೆಸಿಸಿಐ ಪದಾಧಿಕಾರಿಗಳ ಕಾರ್ಯ ಅಭಿನಂದನೆಗೆ ಅರ್ಹವಾಗಿದೆ. ಶಕ್ತಿ ಯೋಜನೆಯ ಅನುಷ್ಠಾನದ ನಂತರ ರಾಜ್ಯದಲ್ಲಿ ಎಲ್ಲಾ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಶೇಕಡಾ 50 ರಷ್ಟು ಹೆಚ್ಚಾಗಿದೆ. ಈ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನ ಹೆಚ್ಚಿಸುವುದು ಕೇವಲ ಸರ್ಕಾರದಿಂದ ಸಾಧ್ಯವಿಲ್ಲ. ಈ ಕ್ಷೇತ್ರಗಳಲ್ಲಿ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಇಲ್ಲಿನ ಹೂಡಿಕೆಯಿಂದ ಬಹಳಷ್ಟು ಉಪಯೋಗವನ್ನು ಉದ್ದಿಮೆದಾರರು ಪಡೆದುಕೊಳ್ಳಬಹುದಾಗಿದೆ ಎಂದರು.

ಎಫ್‌ಕೆಸಿಸಿಐ ಅಧ್ಯಕ್ಷರಾದ ರಮೇಶ್‌ ಚಂದ್ರ ಲಹೋಟಿ ಮಾತನಾಡಿ, ದಕ್ಷಿಣ ಭಾರತ ರಾಜ್ಯಗಳನ್ನು ಒಂದೇ ವೇದಿಕೆಯ ಅಡಿಯಲ್ಲಿ ತರುವ ಪ್ರಯತ್ನಕ್ಕೆ ಯಶಸ್ಸು ದೊರೆತಿದೆ. ಕೈಗಾರಿಕಾ ಉತ್ಪಾದನೆ, ಕೃಷಿಯ ನಂತರ ಹೆಚ್ಚಿನ ಉದ್ಯೋಗಾವಕಾಶಗಳನ್ನ ಮತ್ತು ಹೂಡಿಕೆಯ ಅವಕಾಶ ಇರುವುದು ಪ್ರವಾಸೋದ್ಯಮ ಕ್ಷೇತ್ರದಲ್ಲಿ. ಈ ಉತ್ಸವದ ಮೂಲಕ ಎಫ್‌ಕೆಸಿಸಿಐ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡುವಂತೆ ಉದ್ದಿಮೆದಾರರನ್ನು ಪ್ರೋತ್ಸಾಹಿಸಿದೆ. ಇದರಿಂದಾಗಿ ಸುಮಾರು 4,200 ಕೋಟಿ ರೂಪಾಯಿಗಳಷ್ಟು ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲೂ ಎಫ್‌ಕೆಸಿಸಿಐ ವತಿಯಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರೋತ್ಸಾಹ ನೀಡಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ದಕ್ಷಿಣ ಭಾರತ ಉತ್ಸವದ ಸಮಾರೋಪ ಸಮಾರಂಭ
ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ದಕ್ಷಿಣ ಭಾರತ ಉತ್ಸವದ ಸಮಾರೋಪ ಸಮಾರಂಭ (ETV bharat)

ಕಾರ್ಯಕ್ರಮದಲ್ಲಿ ಬಂಡವಾಳ ಹೂಡಿಕೆಗೆ ಮುಂದಾದ ಕೆಲವು ಉದ್ದಿಮೆದಾರರಿಗೆ ಒಡಂಬಡಿಕೆಯ ಪತ್ರಗಳನ್ನು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಹಾಗೂ ಪ್ರವಾಸೋದ್ಯಮ ಸಚಿವರಾದ ಡಾ.ಹೆಚ್‌.ಕೆ.ಪಾಟೀಲ್ ವಿತರಿಸಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ಡಾ. ವಿ.ರಾಮ್‌ ಪ್ರಸಾತ್‌ ಮನೋಹರ್‌ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ದಕ್ಷಿಣ ಭಾರತ ಉತ್ಸವ: ರಾಜ್ಯಕ್ಕೆ ಹರಿದು ಬಂತು ₹3,750 ಕೋಟಿ ರೂ. ಬಂಡವಾಳ - ಸಚಿವ ಹೆಚ್.ಕೆ.ಪಾಟೀಲ್ - Minister H K Patil

ETV Bharat Logo

Copyright © 2024 Ushodaya Enterprises Pvt. Ltd., All Rights Reserved.