ETV Bharat / state

ದಕ್ಷಿಣ ಕನ್ನಡ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್​ಗೆ ಗೆಲುವು

ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ 1600ಕ್ಕೂ ಅಧಿಕ ಮತಗಳಿಂದ ಜಯ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್
ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ (ETV Bharat)
author img

By ETV Bharat Karnataka Team

Published : 2 hours ago

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನಪರಿಷತ್ ಉಪಚುನಾವಣೆ ಮತ ಎಣಿಕೆ ಕಾರ್ಯ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600ಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನೀಡಿದ ಕಾಂಗ್ರೆಸ್​​ನ ರಾಜು ಪೂಜಾರಿ ಪರಾಭವಗೊಂಡಿದ್ದಾರೆ. ಈ ಮೂಲಕ ಬಿಜೆಪಿ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದೆ.

ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅ.21 ರಂದು ಚುನಾವಣೆ ನಡೆದಿತ್ತು.

ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿತ್ತು. ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಮತ ಎಣಿಕೆ ನಡೆಯಿತು. ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಯಿತು. ಬಿಜೆಪಿ ಅಭ್ಯರ್ಥಿಯು 3655 ಮತ, ಕಾಂಗ್ರೆಸ್ 1958, ಎಸ್​ಡಿಪಿಐ 195, ಪಕ್ಷೇತರ 9 ಮತ್ತು 90 ಅಸಿಂಧು ಮತಗಳಾಗಿವೆ.

ಈ ಬಾರಿ ನಡೆದ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳು‌ ಸ್ಪರ್ಧಿಸಿದ್ದರು. ಬಿಜೆಪಿಯಿಂದ ಕಿಶೋರ್ ಬಿ.ಆರ್, ಕಾಂಗ್ರೆಸ್​​ನಿಂದ ರಾಜು ಪೂಜಾರಿ, ಎಸ್​ಡಿಪಿಐನಿಂದ ಅನ್ವರ್ ಸಾದತ್.ಎಸ್ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ಕಣದಲ್ಲಿದ್ದರು.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿ ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 6,032 ಮತದಾರರಿದ್ದರು. ಇದರಲ್ಲಿ 5,906 ಮಂದಿ ಮತ ಚಲಾಯಿಸಿದ್ದರು. ಉಭಯ ಜಿಲ್ಲೆಗಳ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿದ್ದರು.

ಕಿಶೋರ್ ಕುಮಾರ್ ಪರಿಚಯ: ಕಿಶೋರ್ ಕುಮಾರ್ ಬೊಟ್ಯಾಡಿ ಸದ್ಯ ದ.ಕ.ಜಿಲ್ಲಾ ಸಮಿತಿಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ. ಆರ್‌ಎಸ್‌ಎಸ್‌ ಕಲ್ಪನೆ ಶಾಖೆಯ ಮುಖ್ಯ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದಾರೆ. 1994 ರಿಂದ 1998 ರವರೆಗೆ ಪುತ್ತೂರಿನ ನರಿಮೊಗರು ಪ್ರದೇಶದ ಆರ್‌ಎಸ್‌ಎಸ್ ಮಂಡಲದಲ್ಲಿ ಸೇವೆ ಸಲ್ಲಿಸಿದ್ದಾರೆ. ABVP ಅಡಿ 2000 ರಿಂದ 2004 ರವರೆಗೆ ವಿದ್ಯಾರ್ಥಿ ಚಳವಳಿಯಲ್ಲಿ ಭಾಗಿಯಾಗಿದ್ದರು.

ಬಜರಂಗದಳದ (ಉಡುಪಿ, ಮಂಗಳೂರು, ಕೊಡಗು ಮತ್ತು ಕಾಸರಗೋಡು) ಮಂಗಳೂರು ವಿಭಾಗ ಸಹ - ಸಂಚಾಲಕರಾಗಿ ಮತ್ತು 2008 ರಿಂದ 2013 ರವರೆಗೆ ಬಿಜೆಪಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. 2014 ರಿಂದ 2016 ರವರೆಗೆ ಯುವ ಮೋರ್ಚಾದ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾಗಿ ಮತ್ತು ಸೌತ್ ಕೆನರಾ ಆರ್​​ಟಿಐ ಆಕ್ಟಿವಿಸ್ಟ್ ಗ್ರೂಪ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಪುತ್ತೂರು ಸಾಹಿತ್ಯ ಸಂಗಮ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಸಾಮಗ್ರಿ ಪೂರೈಕೆದಾರರ ಒಕ್ಕೂಟದ (ಮಾಲೀಕರು ಮತ್ತು ಚಾಲಕರು) ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. 2021 ರಿಂದ 2023 ರವರೆಗೆ ಮೆಸ್ಕಾಂನ ನಾಮಿನಿ ನಿರ್ದೇಶಕರಾಗಿದ್ದರು. ಬಿಜೆಪಿ ದ.ಕ.ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಇದನ್ನೂ ಓದಿ: ಅಧಿಕಾರ ಎಲ್ಲಿ ಸಿಗುತ್ತೋ ಅಲ್ಲಿಗೆ ಸಿ.ಪಿ.ಯೋಗೇಶ್ವರ್ ಜಂಪ್ ಆಗ್ತಾರೆ: ನಿಖಿಲ್ ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.