ETV Bharat / state

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಧಿಕಾರಿ ಸೂಚನೆ - DEPRESSION IN ARABIAN SEA

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

rain
ಸಂಗ್ರಹ ಚಿತ್ರ (IANS And ETV Bharat)
author img

By ETV Bharat Karnataka Team

Published : Oct 16, 2024, 11:04 AM IST

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ, ಅಕ್ಟೋಬರ್ 16 ರಿಂದ 19ರವರೆಗೆ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆದ್ದರಿಂದ, ಈ ದಿನಗಳಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಡಿಸಿ ಸೂಚಿಸಿದ್ದಾರೆ.

ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಹೋಗದಂತೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸುವಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.

ಇದನ್ನೂ ಓದಿ: ನೇರಳೆ ಮಾರ್ಗದ ಮೇಲೆ ಬಿದ್ದ ಮರ, ಈಗ ಸಂಚಾರಕ್ಕೆ ಮುಕ್ತ: ಮರ ತೆರವು ಯಶಸ್ವಿ ಎಂದ ಬಿಎಂಆರ್​ಸಿಎಲ್​

12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಇಂದು 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಉತ್ತರ ಕನ್ನಡ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮೈಸೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಬಂಗಾಳ ಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ 12 ಜಿಲ್ಲೆಗಳಿಗೆ ಮತ್ತೆ ಆರೆಂಜ್ ಅಲರ್ಟ್ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.