ETV Bharat / state

ಮಕ್ಕಳೊಂದಿಗೆ ಕೆಸರು ಗದ್ದೆಯಲ್ಲಿ ಆಟವಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ - DC Mullai Muhilan - DC MULLAI MUHILAN

ಕೆಸರು ಗದ್ದೆಯಲ್ಲಿ ಮಕ್ಕಳೊಂದಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆಟ ಆಡಿ ಗಮನ ಸೆಳೆದರು.

ಮಕ್ಕಳೊಂದಿಗೆ ಕೆಸರು ಗದ್ದೆಯಲ್ಲಿ ಆಟವಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ
ಮಕ್ಕಳೊಂದಿಗೆ ಕೆಸರು ಗದ್ದೆಯಲ್ಲಿ ಆಟವಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (ETV Bharat)
author img

By ETV Bharat Karnataka Team

Published : Sep 24, 2024, 8:05 AM IST

ಬಂಟ್ವಾಳ(ದಕ್ಷಿಣ ಕನ್ನಡ): ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವ ಭಾರತ್ ಯುವಕ ಸಂಘ (ರಿ) ಅನಂತಾಡಿ ವತಿಯಿಂದ ಪಡಿಪಿರೆ ಗದ್ದೆಯಲ್ಲಿ ಸೋಮವಾರ ನಡೆದ 6ನೇ ವರ್ಷದ 'ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು' ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭಾಗವಹಿಸಿದರು. ಕೆಸರಿಗಿಳಿದ ಡಿಸಿ ಮಕ್ಕಳೊಂದಿಗೆ ಆಟವಾಡಿದರು. ಮಳೆಗಾಗಿ ರಜೆ ನೀಡುವ ಮಕ್ಕಳ ಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಇವರು ಈಗ ಕೆಸರಲ್ಲೂ ಆಟವಾಡಿ ಮಕ್ಕಳ ಖುಷಿ ಹೆಚ್ಚಿಸಿದ್ದಾರೆ.

ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿ, "ದೇಶದ ಬೆನ್ನೆಲುಬಾತ ರೈತ ಸಂತೋಷವಾಗಿದ್ದರೆ ಇಡೀ ಜಗತ್ತೇ ಸಂತಸಪಡುತ್ತದೆ. ಪ್ರತಿಯೊಬ್ಬರಿಗೆ ಆಹಾರ ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು. ಹವಾಮಾನದ ಎಡರು-ತೊಡರುಗಳನ್ನು ದಾಟಿ ರೈತ ಬದುಕಬೇಕಾಗುತ್ತದೆ. ಈ ನೆಲದ ಸಂಸ್ಕೃತಿ ಬೆಳೆದು ಬಂದಿರುವುದು ಗದ್ದೆಗಳಿಂದ" ಎಂದು ಹೇಳಿದರು.

ಮಕ್ಕಳೊಂದಿಗೆ ಕೆಸರು ಗದ್ದೆಯಲ್ಲಿ ಆಟವಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ
ಮಕ್ಕಳೊಂದಿಗೆ ಕೆಸರು ಗದ್ದೆಯಲ್ಲಿ ಆಟವಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (ETV Bharat)

ಕೆಸರು ಗದ್ದೆಯಲ್ಲಿ ಮಕ್ಕಳು, ಮಹಿಳೆಯರು, ಪುರುಷರಿಗೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು. ವಿವಿಧ ಆಟಗಳಲ್ಲಿ ಗ್ರಾಮಸ್ಥರು ಕೂಡಾ ಭಾಗಿಯಾಗಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ತುಳು ಸಂಸ್ಕೃತಿಯ ಚಾಪೆ ನೇಯುವುದು, ಬುಟ್ಟಿ ನೇಯುವುದು, ಮುಟ್ಟಾಲೆ ಕಟ್ಟುವುದು, ತೆಂಗಿನಗರಿ ನೇಯುವುದು ಹಾಗು ಅಕ್ಕಿ ಮುಡಿ ಕಟ್ಟುವ ಪ್ರಾತ್ಯಕ್ಷತೆ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅನೀಶ್ ಅಶ್ವತ್ತಾಡಿ ವಹಿಸಿದ್ದರು. ಧ್ವಜಾರೋಹಣವನ್ನು ಡಾ.ರೂಪಲತಾ ಕೊಂಗಲಾಯಿ ನೆರವೇರಿಸಿ, ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಮಾಣಿ ವಲಯ ಅಧ್ಯಕ್ಷ ರಾಮ್ ಕಿಶಾನ್ ರೈ ಮಾಡಿದರು. ಕ್ರೀಡಾಕೂಟದ ಕೆಸರು ಗದ್ದೆಯ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಹಾಗೂ ವಿಠಲ ಕೋಟ್ಯಾನ್ ಪೊಯ್ಯೇ ನೆರವೇರಿಸಿದರು.

ವೇದಿಕೆಯಲ್ಲಿ ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ನಿವೃತ್ತ ಶಿಕ್ಷಕ ರಾಮಣ್ಣ ಗೌಡ ಕೋಂಗಲಾಯಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ನಾರ್ಶ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೆರಳಕಟ್ಟೆ, ಸರ್ಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನ ರಾಧಾಕೃಷ್ಣಮೂಲ್ಯ, ಮಲ್ಲರಾಯ ದೈವ ಪರಿಚರಕರಾದ ರಾಮಣ್ಣ ಗೌಡ, ಬಾಲಪ್ಪ ಮಡಿವಾಳ, ಲಕ್ಷ್ಮಣ ಪೂಜಾರಿ ಬಾಕಿಲ, ಪದ್ಮನಾಭ ಪೂಜಾರಿ ಈಡೆಮುಂಡೆವು ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಶಾಲೆಗಳಿಗೆ ದಸರಾ ರಜೆ ಘೋಷಣೆ; 17 ದಿನ ಮಕ್ಕಳಿಗೆ ಹಾಲಿಡೇಸ್​ - Dasara holiday announced

ETV Bharat Logo

Copyright © 2024 Ushodaya Enterprises Pvt. Ltd., All Rights Reserved.