ETV Bharat / state

ಮೈಸೂರು: ದಲಿತ ಮಹಿಳೆ ಅನುಮಾನಾಸ್ಪದ ಸಾವು; ಅತ್ಯಾಚಾರದ ದೂರು - DALIT WOMAN SUSPICIOUS DEATH - DALIT WOMAN SUSPICIOUS DEATH

ಬಾಳೆ ತೋಟದಲ್ಲಿ ಮೃತ ಮಹಿಳೆಯ ಶವ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದು, ಮೃತ ಮಹಿಳೆಯ ಸಹೋದರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ.

casual picture
ಸಾಂದರ್ಭಿಕ ಚಿತ್ರ (IANS)
author img

By ETV Bharat Karnataka Team

Published : Aug 25, 2024, 10:19 AM IST

Updated : Aug 25, 2024, 11:51 AM IST

ಮೈಸೂರು: 38 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಅನುಮಾನಾಸ್ಪದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ರೈತರೊಬ್ಬರ ಬಾಳೆ ತೋಟದಲ್ಲಿ ಮೃತ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆ ಬಾಳೆ ತೋಟದ ಮಾಲೀಕ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದ ನಂಜನಗೂಡಿನ ಡಿವೈಎಸ್ಪಿ ರಘು, ಪಿಎಸ್‌ಐ ಲಕ್ಷ್ಮಿಕಾಂತ ಕೋಳಿ, ಚೇತನ್​ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಗ್ರಾಮದ ಪೊಲೀಸ್ ಠಾಣೆಯಲ್ಲಿ ಮೃತಳ ಸಹೋದರ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಅನ್ಯ ವರ್ಗದ ವ್ಯಕ್ತಿಯಿಂದ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ದಲಿತ ಸಂಘಟನೆಯವರು ಆರೋಪ ಮಾಡಿದ್ದಾರೆ. ಈಗಾಗಲೇ ಮೃತ ಮಹಿಳೆಯ ಶವವನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳನ್ನ ಕೊಚ್ಚಿ ಕೊಂದ ಮಲತಂದೆ! - Stepfather Murdered daughters

Last Updated : Aug 25, 2024, 11:51 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.