ETV Bharat / state

ಕೆಆರ್‌ಎಸ್ ಸುತ್ತ ಗಣಿಗಾರಿಕೆ: ಅಧ್ಯಯನ ವರದಿಗೆ ಕಾಲಾವಕಾಶ ಕೋರಿದ ಅಣೆಕಟ್ಟು ಸುರಕ್ಷತಾ ಸಮಿತಿ - Mining Permission Around KRS

author img

By ETV Bharat Karnataka Team

Published : Jul 31, 2024, 10:31 PM IST

ಕೆಆರ್‌ಎಸ್ ಸುತ್ತ ಗಣಿಗಾರಿಕೆ ಚಟುವಟಿಕೆ ನಿಷೇಧಿಸಿರುವ ಕಾರಣ ಅಣೆಕಟ್ಟು ಸುರಕ್ಷತೆ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕಾಲಾವಕಾಶ ಬೇಕೆಂದು ರಾಜ್ಯಮಟ್ಟದ ಅಣೆಕಟ್ಟು ಸುರಕ್ಷತಾ ಸಮಿತಿ ಹೇಳಿದೆ.

krs dam
ಕೆಆರ್‌ಎಸ್ ಅಣೆಕಟ್ಟು, ಹೈಕೋರ್ಟ್‌ (ETV Bharat)

ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್‌ಎಸ್) ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲ ಬಗೆಯ ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆ ಸುರಕ್ಷತೆ ವಿಚಾರವಾಗಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕನಿಷ್ಠ 4 ತಿಂಗಳು ಕಾಲಾವಕಾಶ ಬೇಕು ಎಂದು ರಾಜ್ಯಮಟ್ಟದ ಅಣೆಕಟ್ಟು ಸುರಕ್ಷತಾ ಸಮಿತಿ ಹೈಕೋರ್ಟ್‌ಗೆ ತಿಳಿಸಿದೆ.

ನ್ಯಾಯಾಲಯದ ಆದೇಶದಂತೆ ಕೆಆರ್‌ಎಸ್ ಸುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಮತ್ತು ಸಿಮೀತ ಗಣಿ ಚಟುವಟಿಕೆಗಳಿಗೆ ಷರತ್ತುಗಳನ್ನು ವಿಧಿಸಿ ಮಂಡ್ಯ ಜಿಲ್ಲಾಧಿಕಾರಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

ಸರ್ಕಾರದ ಪರ ವಕೀಲ ಎಸ್.ಎಸ್.ಮಹೀಂದ್ರ ವಾದ ಮಂಡಿಸಿ, ಕೆಆರ್‌ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ವಿಚಾರವಾಗಿ ಹಾಗೂ 'ಪ್ರಾಯೋಗಿಕ ಸ್ಫೋಟ' (ಟ್ರಯಲ್ ಬ್ಲಾಸ್ಟ್​​) ವಿಧಾನದ ಮೂಲಕ ಪರಿಶೀಲಿಸುವ ಬದಲು ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿಯು 'ಮ್ಯಾಥಮ್ಯಾಟಿಕಲ್ ಮೊಡಾಲಿಟಿ ಆಂಡ್ ಪ್ರಾಪರ್ ವ್ಯಾಲಿಡೇಷನ್' ವಿಧಾನದ ಮೂಲಕ ವೈಜ್ಞಾನಿಕವಾಗಿ ಸಮಗ್ರ ವಿಶ್ಲೇಷಣೆ ಮಾಡುತ್ತಿದೆ. ಇದಕ್ಕಾಗಿ ಸಮಯ ಹಿಡಿಯುತ್ತದೆ. ಆದ್ದರಿಂದ ಕನಿಷ್ಠ ನಾಲ್ಕು ತಿಂಗಳು ಕಾಲಾವಕಾಶಬೇಕು ಎಂದು ಕೋರಿದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿಗೆ 4 ತಿಂಗಳ ಕಾಲ ಸಮಯ ನೀಡಿ, ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿತು. ಇದೇ ವೇಳೆ, ಕೆಆರ್‌ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ಬಗೆಯ ಗಣಿ ಚಟುವಟಿಕೆಗಳನ್ನು ನಿಷೇಧಿಸಿ ಹೊರಡಿಸಲಾದ ಆದೇಶ ಮಾರ್ಪಾಡು ಮಾಡಬೇಕು. ಹಾಗೂ ಗಣಿ ಚಟುವಟಿಕೆ ನಿಷೇಧಿಸಿ ಹೊರಡಿಸಿದ ಆದೇಶದಲ್ಲಿ ಸಮಿತಿಯ ವರದಿ ಬರುವವರೆಗೆ ಪರಿವರ್ತಿತ ಜಮೀನಿನಲ್ಲಿ ಗಣಿ ಉದ್ದೇಶಿತ ಬಳಕೆಗೆ ಯಾವುದೇ ಅವಕಾಶ ಇರುವುದಿಲ್ಲ ಎಂದು ವಿಧಿಸಿದ್ದ ಷರತ್ತು ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಹಲವು ಮಧ್ಯಂತರ ಅರ್ಜಿಗಳನ್ನು ನ್ಯಾಯಪೀಠ ಇತ್ಯರ್ಥಪಡಿಸಿತು. ಅಲ್ಲದೆ, ಎಲ್ಲಾ ಮಧ್ಯಂತರ ಅರ್ಜಿದಾರರು ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿ ಮುಂದೆ ಮನವಿ ಸಲ್ಲಿಸಬಹುದು ಎಂದು ಹೇಳಿದೆ.

ಪ್ರಕರಣದ ಹಿನ್ನೆಲೆ: ತಮ್ಮ ಜಮೀನಿನಲ್ಲಿ ಗಣಿಗಾರಿಕೆ ನಡೆಸುವುದಕ್ಕೆ ಅನುಮತಿ ನೀಡುವಂತೆ ಕೋರಿ ಅರ್ಜಿದಾರರು ಮಂಡ್ಯ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಶೀಲನೆ ನಡೆಸಿದ್ದ ಜಿಲ್ಲಾಧಿಕಾರಿಗಳು, ಹಲವು ಷರತ್ತುಗಳೊಂದಿಗೆ ಅರ್ಜಿದಾರರಿಗೆ ಅನುಮತಿ ನೀಡಿದ್ದರು. ಆ ಅನುಮತಿಯು ಕಾವೇರಿ ನಿರಾವರಿ ನಿಗಮದ ವತಿಯಿಂದ ನಡೆಯುವ ಪರೀಕ್ಷಾರ್ಥ ಸ್ಫೋಟದ ನಂತರ ಸಲ್ಲಿಕೆಯಾಗುವ ವರದಿ ಪರಿಶೀಲಿಸಿ ಸಕ್ಷಮ ಪ್ರಾಧಿಕಾರ ಕೈಗೊಳ್ಳಬಹುದಾದ ನಿರ್ಧಾರಗಳಿಗೆ ಬದ್ಧರಾಗಿರಬೇಕು. ಆ ವರದಿ ಬರುವವರೆಗೂ ಅರ್ಜಿದಾರರು ತಮ್ಮ ಪರಿವರ್ತಿತ ಜಮೀನಿನಲ್ಲಿ ಉದ್ದೇಶಿತ ಬಳಕೆಗೆ ಉಪಯೋಗ ಮಾಡಿಕೊಳ್ಳುವುದಕ್ಕೆ ಯಾವುದೇ ಅವಕಾಶವಿರುವುದಿಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಷರತ್ತು ವಿಧಿಸಿದ್ದರು.

ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದ ಅರ್ಜಿದಾರರು, ಜಿಲ್ಲಾಧಿಕಾರಿಗಳ ವಿಧಿಸಿರುವ ಷರತ್ತು ರದ್ದುಗೊಳಿಸಬೇಕು ಎಂದು ಕೋರಿದ್ದರು. ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಅಣೆಕಟ್ಟೆ ಸುತ್ತಲು 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿ ಸ್ಫೋಟ ನಡೆಸುವಂತಿಲ್ಲ ಎಂದು ಷರತ್ತು ವಿಧಿಸಿತ್ತು.

ಇದನ್ನೂ ಓದಿ: ಪೊಲೀಸರು ವಿಚಾರಣೆಗೆಂದು ಠಾಣೆಗೆ ಕರೆಯುವಾಗ ಕ್ರೈಂ ಸಂಖ್ಯೆ, ಎಫ್‌ಐಆರ್ ವಿವರಣೆ ನೀಡುವುದು ಕಡ್ಡಾಯ: ಹೈಕೋರ್ಟ್ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.