ETV Bharat / state

ದರ್ಶನ್, ಇತರರ ಜಾಮೀನು ಅರ್ಜಿ ವಿಚಾರಣೆ ಮಂಗಳವಾರಕ್ಕೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಮತ್ತಿತರ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯು ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ.

darshan
ದರ್ಶನ್ (ETV Bharat)
author img

By ETV Bharat Karnataka Team

Published : 3 hours ago

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಸೇರಿದಂತೆ ಮತ್ತಿತರರ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರಕ್ಕೆ(ಡಿ.3) ಮುಂದೂಡಿದೆ.

ದರ್ಶನ್ ಸೇರಿದಂತೆ ಮತ್ತಿತರರ ಆರೋಪಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು.

ಪ್ರಕರಣದ 11ನೇ ಆರೋಪಿಯಾಗಿರುವ ಆರ್.ನಾಗರಾಜ್ (ದರ್ಶನ್ ವ್ಯವಸ್ಥಾಪಕ) ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಚೌಟ, ''ಅರ್ಜಿದಾರರ ಕುರಿತಂತೆ ಪೊಲೀಸರ ಚೆಕ್ ಲಿಸ್ಟ್ ಸಂಶಯಕ್ಕೆ ಕಾರಣವಾಗುತ್ತದೆ. ಅವರ ಬಂಧನಕ್ಕೆ ಕಾರಣ ನೀಡಿಲ್ಲ.ಅರ್ಜಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ಆಕ್ಷೇಪಣೆಯಲ್ಲಿಯೂ ಈ ಬಗ್ಗೆ ವಿವರಣೆ ನೀಡಿಲ್ಲ'' ಎಂದು ವಿವರಿಸಿದರು.

ಇದನ್ನೂ ಓದಿ: ಪೆನ್​ಡ್ರೈವ್​ ಹಂಚಿಕೆ ಆರೋಪ: ಎಫ್​ಐಆರ್​ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಪ್ರೀತಂ ಗೌಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.