ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಅವರ ಆರೋಗ್ಯ ತಪಾಸಣೆಗಾಗಿ ಹೈಕೋರ್ಟ್ 6 ವಾರಗಳ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿದೆ. ಅವರ ಚಲನವಲನಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಇಂದು ಮಧ್ಯಾಹ್ನ ಸುಮಾರು 2 ಗಂಟೆ ಹೊತ್ತಿಗೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ.
ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ದರ್ಶನ್ ಮನೆ ಬಳಿ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದೆ. ರಾತ್ರಿಯಿಂದಲೇ ಮಗನ ಹುಟ್ಟುಹಬ್ಬದ ಖುಷಿಯಲ್ಲಿರುವ ದರ್ಶನ್ ಮಧ್ಯಾಹ್ನ 2ಗಂಟೆ ಸುಮಾರಿಗೆ ಆಸ್ಪತ್ರೆಗೆ ಶಿಫ್ಟ್ ಆಗುವ ಸಾಧ್ಯತೆ ಇದೆ. ಬೆನ್ನು ನೋವಿನ ಹಿನ್ನೆಲೆಯಲ್ಲಿ ಸರ್ಜರಿಗಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಆಗಲಿದ್ದಾರೆ.
ಇದನ್ನೂ ಓದಿ: ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ನಿವಾಸದ ಬಳಿ ಪೊಲೀಸ್ ಬಿಗಿ ಭದ್ರತೆ: 50ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ
ದರ್ಶನ್ ಅವರು ಜೈಲಿನಿಂದ ಹೊರಬಂದಿರುವ ಹಿನ್ನೆಲೆ ಅಪಾರ ಸಂಖ್ಯೆಯ ಅಭಿಮಾನಿಗಳು ಅವರನ್ನು ನೋಡೋ ಸಲುವಾಗಿ ಆರ್ಆರ್ ನಗರದ ನಿವಾಸದ ಬಳಿ ಬಂದು ಸೇರುವ ಸಾಧ್ಯತೆ ಇದೆ. ಹಾಗಾಗಿ ಅವರ ಮನೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರಿತಿಯ ಅಹಿತಕರ ಘಟನೆಗಳು ಸಂಭವಿಸಿದಂತೆ ಈ ಎಚ್ಚರಿಕೆ ವಹಿಸಲಾಗಿದೆ. ದರ್ಶನ್ ಮನೆ ರಸ್ತೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. 2 ಕೆಎಸ್ಆರ್ಪಿ ತುಕಡಿ, ಸ್ಥಳೀಯ ಪೊಲೀಸರು ಸೇರಿದಂತೆ 50ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ.
ಇದನ್ನೂ ಓದಿ: ನಾಗ ಚೈತನ್ಯ ಶೋಭಿತಾ ಧೂಳಿಪಾಲ ಮದುವೆಗೆ ಸಿದ್ಧತೆ: ದಿನಾಂಕ ಇಲ್ಲಿದೆ