ETV Bharat / state

ತನಿಖಾಧಿಕಾರಿಗಳೆದುರು ಹೇಳಿಕೆ ದಾಖಲಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ - Vijayalakshmi Records Statements - VIJAYALAKSHMI RECORDS STATEMENTS

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ತನಿಖಾಧಿಕಾರಿಗಳ ಎದುರು ತಮ್ಮ ಹೇಳಿಕೆ ದಾಖಲಿಸಿದ್ದಾರೆ.

VIJAYALAKSHMI RECORDS STATEMENTS
ಅನ್ನಪೂರ್ಣೇಶ್ವರಿ ನಗರ ಠಾಣೆ (ETV Bharat)
author img

By ETV Bharat Karnataka Team

Published : Jun 19, 2024, 2:25 PM IST

Updated : Jun 19, 2024, 4:10 PM IST

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಹತ್ಯೆಯಾದ ರೇಣುಕಾಸ್ವಾಮಿ ಅವರನ್ನು ಭೇಟಿಯಾದ ಸಂದರ್ಭ ನಟ ದರ್ಶನ್ ಧರಿಸಿದ್ದ ಶೂ ಅನ್ನು ವಿಜಯಲಕ್ಷ್ಮೀ ಅವರ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದಿದ್ದರು. ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಲು ಸೂಚಿಸಿದ್ದರಿಂದ, ವಿಜಯಲಕ್ಷ್ಮೀ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಆಗಮಿಸಿದ್ದಾರೆ.

ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾಸ್ವಾಮಿಯನ್ನು ಭೇಟಿಯಾದಾಗ ನಟ ದರ್ಶನ್ ಧರಿಸಿದ್ದ ಬಟ್ಟೆಗಳನ್ನು ಜೂನ್ 16ರಂದು ಆರ್.ಆರ್ ನಗರದ ದರ್ಶನ್ ಅವರ ನಿವಾಸದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಶೂ ಪತ್ತೆಯಾಗಿರಲಿಲ್ಲ. 'ಶೂ ಮತ್ತು ಇತರ ಕೆಲ ಬೆಲೆಬಾಳುವ ವಸ್ತುಗಳನ್ನು ವಿಜಯಲಕ್ಷ್ಮೀ ಅವರ ಮನೆಗೆ ಕೊಟ್ಟಿರುವುದಾಗಿ' ದರ್ಶನ್ ಅವರ ಕಾಸ್ಟ್ಯೂಮ್ ಅಸಿಸ್ಟೆಂಟ್ ಪೊಲೀಸರಿಗೆ ತಿಳಿಸಿದ್ದ. ಅದರ ಅನ್ವಯ ಅದೇ ದಿನ ಬನಶಂಕರಿಯ 3ನೇ ಹಂತದಲ್ಲಿರುವ ವಿಜಯಲಕ್ಷ್ಮೀ ಅವರ ಅಪಾರ್ಟ್‌ಮೆಂಟ್​ ಬಳಿ ತೆರಳಿದ್ದ ಪೊಲೀಸರು ಶೂ ಅನ್ನು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ ದುರ್ಬಲಗೊಳಿಸುವ ಉದ್ದೇಶ ಸರ್ಕಾರಕ್ಕಿಲ್ಲ; ಎಸ್​ಪಿಪಿ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ: ಡಾ.ಜಿ.ಪರಮೇಶ್ವರ್ - Renukaswamy murder case

ಅದೇ ವಿಚಾರವಾಗಿ ವಿಜಯಲಕ್ಷ್ಮೀ ಅವರ ಹೇಳಿಕೆ ಅಗತ್ಯ ಇರುವುದರಿಂದ ಠಾಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅದರನ್ವಯ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವಿಜಯಲಕ್ಷ್ಮೀ ಆಗಮಿಸಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

Last Updated : Jun 19, 2024, 4:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.