ETV Bharat / state

ಇಬ್ಬರು ನಕಲಿ ವೈದ್ಯರಿಗೆ 1 ಲಕ್ಷ ರೂ ದಂಡ, ಮೆಡಿಕಲ್ ಸ್ಟೋರ್ ಮುಚ್ಚಲು ದಾವಣಗೆರೆ ಡಿಸಿ ಆದೇಶ - Fake Doctors

author img

By ETV Bharat Karnataka Team

Published : Sep 13, 2024, 11:27 AM IST

ನಕಲಿ ವೈದ್ಯರ ವಿರುದ್ಧ ದಾವಣಗೆರೆ ಡಿಸಿ ಕಠಿಣ ಕ್ರಮ ಕೈಗೊಂಡಿದ್ದಾರೆ. 1 ಲಕ್ಷ ರೂ ದಂಡ ವಿಧಿಸುವ ಜೊತೆಗೆ ಕ್ಲಿನಿಕ್ ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.

ನಕಲಿ ವೈದ್ಯರ ವಿರುದ್ಧ ಕ್ರಮ
ನಕಲಿ ವೈದ್ಯರ ವಿರುದ್ಧ ಕ್ರಮ (ETV Bharat)

ದಾವಣಗೆರೆ: ಇಬ್ಬರು ನಕಲಿ ವೈದ್ಯರಿಗೆ ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ಜಿಲ್ಲಾಧಿಕಾರಿ ಬಿಸಿ ಮುಟ್ಟಿಸಿದ್ದಾರೆ. ಜಿಲ್ಲೆಯ ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದಲ್ಲಿ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಲಾಗಿದೆ. ಇಬ್ಬರಿಗೂ ತಲಾ 1 ಲಕ್ಷ ರೂ. ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಭದ್ರಾವತಿ ಮೂಲದ ಶ್ರೀನಿವಾಸ್ (57) ಹೊನ್ನಾಳಿ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಮೆಡಿಕಲ್ಸ್ ಸ್ಟೋರ್ ಜೊತೆಗೆ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಾ ಜನರಿಗೆ ಚಿಕಿತ್ಸೆ ನೀಡುತ್ತಿದ್ದರು. ಇವರು ಪಡೆದ ಮೆಡಿಕಲ್ ಸ್ಟೋರ್ ಲೈಸೆನ್ಸ್ ರದ್ದುಪಡಿಸಿ ದಂಡ ವಿಧಿಸಲಾಗಿದೆ.

ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲ್ಲೂಕಿನ ಮೂಲದ ಮತ್ತೋರ್ವ ನಕಲಿ ವೈದ್ಯ ಲಕ್ಷ್ಮಣ್ (45) ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದಲ್ಲಿ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಅನಧಿಕೃತ ಕ್ಲಿನಿಕ್ ನಡೆಸುತ್ತಾ ಬಂದಿದ್ದರು. ಕ್ಲಿನಿಕ್ ತಪಾಸಣೆ ವೇಳೆ ಬಿಇಎಂಎಸ್ ಪ್ರಮಾಣ ಪತ್ರ ಹೊಂದಲಾಗಿದೆ ಎಂಬ ಮಾಹಿತಿ ನೀಡಿದ್ದರು. ಆದರೆ ಅಮಾನ್ಯ ಪ್ರಮಾಣ ಪತ್ರವಾಗಿರುವುದರಿಂದ ನಕಲಿ ಎಂದು ಪರಿಗಣಿಸಿ ಒಂದು ಲಕ್ಷ ರೂ ದಂಡದ ಬರೆ ಎಳೆಯಲಾಗಿದೆ.

ಉಪ ವಿಭಾಗಾಧಿಕಾರಿಯಿಂದ ಸ್ಥಳ ಮಹಜರ್: ನಕಲಿ ಕ್ಲಿನಿಕ್​ಗಳ ಬಗ್ಗೆ ಹೊನ್ನಾಳಿ ಉಪ ವಿಭಾಗಾಧಿಕಾರಿ ಅಭಿಷೇಕ್ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ‌.ಗಿರೀಶ್ ಸ್ಥಳ ಮಹಜರು ಮಾಡಿ ಸಮಗ್ರ ವರದಿ ನೀಡಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಕೆಪಿಎಂಇ ನೋಂದಣಿ ಸದಸ್ಯ ಕಾರ್ಯದರ್ಶಿ ಡಾ.ಷಣ್ಮುಖಪ್ಪ ಜಿಲ್ಲಾಧಿಕಾರಿಗಳಿಗೆ ವರದಿಯೊಂದಿಗೆ ಕ್ರಮಕ್ಕಾಗಿ ಪ್ರಸ್ತಾವನೆ ಸಲ್ಲಿಸಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ – ಪುಣೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಯಶಸ್ವಿ: ಸೆ.16ರಂದು ಪ್ರಧಾನಿ ಮೋದಿ ಹಸಿರು ನಿಶಾನೆ - Hubballi Pune Vande Bharat Express

ETV Bharat Logo

Copyright © 2024 Ushodaya Enterprises Pvt. Ltd., All Rights Reserved.