ETV Bharat / state

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿಸಿ - ಸಿಇಒ ಸಭೆ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ - CM instructions to officials

author img

By ETV Bharat Karnataka Team

Published : Jul 9, 2024, 2:56 PM IST

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎರಡನೇ ದಿನದ ಡಿಸಿ, ಸಿಇಒ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಯಿತು.

CM Siddaramaiah  Bengaluru CM instructions to officials
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿಸಿ-ಸಿಇಒ ಸಭೆ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ (ETV Bharat)

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಎರಡನೇ ದಿನದ ಡಿಸಿ, ಸಿಇಒ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದರು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಲವು ಸೂಚನೆಗಳನ್ನು ನೀಡಿದ್ದಾರೆ.

''ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಪಾಲಿಸಿ ನಾವು ಮಾಡ್ತೀವಿ. ನೀವು ಮಾಸ್ಟರ್ ಪ್ಲಾನ್ ಸಿದ್ದಪಡಿಸಿಕೊಂಡು ಬನ್ನಿ ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.‌ ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ. 320 ಕಿಮೀ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು. ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲ ನಕಾಶೆ ಸಿದ್ಧಪಡಿಸಬೇಕು'' ಎಂದರು.

''ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ. ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ. ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನವನ್ನು ಒದಗಿಸಲಾಗುವುದು'' ಎಂದರು.

ನಿರ್ಲಕ್ಷ್ಯಕ್ಕೊಳಗಾದ 23,000 ಸ್ಮಾರಕಗಳು: ''ರಾಜ್ಯದಲ್ಲಿ ಕೆಲವೇ ಪ್ರವಾಸೋದ್ಯಮ ತಾಣಗಳಿಗೆ ಫೋಕಸ್‌ ದೊರೆಯುತ್ತಿದೆ. 25 ಸಾವಿರ ಸ್ಮಾರಕಗಳಿವೆ. ಇವುಗಳ ಪೈಕಿ ಸುಮಾರು 23 ಸಾವಿರ ಸ್ಮಾರಕಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ ಕಾಯ್ದೆ 2015 ಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದರೆ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಸಾಧ್ಯವಿದೆ'' ಎಂದು ತಿಳಿಸಿದರು.

''ಪ್ರವಾಸೋದ್ಯಮ ತಾಣಗಳ ಸಮೀಕ್ಷೆ, ಸಂರಕ್ಷಣೆ ಇತ್ಯಾದಿಗಳ ಮಾಸ್ಟರ್‌ ಪ್ಲಾನ್‌ ಜಿಲ್ಲಾವಾರು ಸಿದ್ಧಪಡಿಸಬೇಕು. ಮೂರು ತಿಂಗಳ ಒಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು. ಪ್ರವಾಸಿಕ ತಾಣಗಳನ್ನು ಹಂತ ಹಂತವಾಗಿ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಬೇಕು'' ಎಂದು ಸಿಎಂ ಸೂಚಿಸಿದರು.

''ಕಪ್ಪತ್ತಗುಡ್ಡ ನಿಸರ್ಗ ಪ್ರದೇಶವನ್ನು ಪ್ರವಾಸೋದ್ಯಮ ಕ್ಷೇತ್ರವಾಗಿ ಇನ್ನಷ್ಟು ಅಭಿವೃದ್ಧಿ ಪಡಿಸಲು ಸಾಧ್ಯವಿದೆ. ಈ ಬಗ್ಗೆ ಗಮನ ಹರಿಸಿ. ಎಲ್ಲ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿದರೆ ರಾಜ್ಯದ ಪ್ರತೀ ಜಿಲ್ಲೆಗಳನ್ನೂ ಪ್ರವಾಸೋದ್ಯಮ ಜಿಲ್ಲೆಗಳನ್ನಾಗಿ ಮಾಡಬಹುದಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಅವರು ಪ್ರಸ್ತಾವನೆಗೆ ಮುಂದಿಟ್ಟರು. ಇದಕ್ಕೆ ಧ್ವನಿಗೂಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಅತೀ ವಿಸ್ತಾರವಾದ ಕರಾವಳಿ ಪ್ರದೇಶವಿದೆ. ಕರಾವಳಿ ಉದ್ಧಕ್ಕೂ ನಾವು ಪ್ರವಾಸೋದ್ಯಮ ಬೆಳೆಸುವ, ಅಭಿವೃದ್ಧಿಪಡಿಸುವ ಅವಕಾಶಗಳು ಹೇರಳವಾಗಿವೆ'' ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

ಅಮೂಲ್ಯ ಪ್ರಾಣ ಹೋದರೆ ಸಹಿಸಲ್ಲ: ''ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿರುವ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು. ಕಂದಾಯ, ಪೊಲೀಸ್‌, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ. ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಹಾಟ್‌ಸ್ಟಾಟ್‌ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್‌ ವ್ಯವಸ್ಥೆ, ಟ್ರಾಮಾ ಸೆಂಟರ್‌ ನೆಟ್‌ವರ್ಕ್‌ ಮಾಡಬೇಕು'' ಎಂದರು.

ಕಲಿಕೆಯಿಂದ ದೂರ ಉಳಿದ ಮಕ್ಕಳನ್ನು ಪತ್ತೆ ಹಚ್ಚಿ: ''ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಿ. ಶಾಲೆಯಿಂದ ಯಾವ ಮಕ್ಕಳೂ ಹೊರಗುಳಿಯಬಾರದು. ಪ್ರತಿ ವರ್ಷ 6ರಿಂದ 16 ವರ್ಷದೊಳಗಿನ ಮಕ್ಕಳ ಸಮೀಕ್ಷೆ ನಡೆಸಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮತ್ತೆ ಸೇರಿಸಲು ಕ್ರಮ ಕೈಗೊಳ್ಳಬೇಕು'' ಎಂದು ಸೂಚಿಸಿದರು.

2 ಸಾವಿರ ಶಾಲೆ ಆರಂಭಕ್ಕೆ ಯೋಜನೆ: ''ಬಜೆಟ್‌ನಲ್ಲಿ ಘೋಷಿಸಿರುವಂತೆ 2 ಸಾವಿರ ಪಂಚಾಯತ್‌ ವ್ಯಾಪ್ತಿಯಲ್ಲಿ ಮಾದರಿ ಶಾಲೆಗಳನ್ನು ಸಿಎಸ್‌ಆರ್‌ ಅಡಿಯಲ್ಲಿ ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಲಾಗಿದೆ. ಇದಕ್ಕಾಗಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ರಾಜ್ಯದಲ್ಲಿ ಖಾಸಗಿ ಕಂಪೆನಿಗಳು ಕಾಯ್ದೆ ಪ್ರಕಾರ ಕಳೆದ ಸಾಲಿನಲ್ಲಿ 8163 ಕೋಟಿ ಕಡ್ಡಾಯವಾಗಿ ಸಿಎಸ್‌ಆರ್‌ ಅಡಿ ವೆಚ್ಚ ಮಾಡಬೇಕಾಗಿತ್ತು. ಖಾಸಗಿ ಕಂಪೆನಿಗಳು ಈ ಅವಧಿಯಲ್ಲಿ 4 ಲಕ್ಷ ಕೋಟಿ ರೂ. ಲಾಭ ಗಳಿಸಿವೆ. 1190 ಕೋಟಿ ಕಳೆದ ವರ್ಷ ಸಿಎಸ್‌ಆರ್‌ ಅಡಿ ವೆಚ್ಚ ಮಾಡಿದ್ದು, ಶೇ.30ರಷ್ಟು ಮಾತ್ರ ಸಿಎಸ್‌ಆರ್‌ ಅಡಿ ಬಳಸುತ್ತಿವೆ'' ಎಂದು ತಿಳಿಸಿದರು.

''ರಾಮನಗರ ಜಿಲ್ಲೆಯಲ್ಲಿ ಪೈಲೆಟ್‌ ಯೋಜನೆಯಾಗಿ ಆರಂಭಿಸಲಾಗಿದ್ದು, ಮೂರು ಪಂಚಾಯತ್‌ಗಳಿಗೆ ಒಂದು ಶಾಲೆಯಂತೆ ಈಗಾಗಲೇ 20 ಶಾಲೆ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಟೊಯೋಟಾ ಕಂಪನಿ ಒಂದೇ 20 ಕೋಟಿ ಸಿಎಸ್‌ಆರ್‌ ಅಡಿ ಒದಗಿಸಿದ್ದಾರೆ. ನಾವು 3 ಎಕ್ರೆ ಜಮೀನು ಒದಗಿಸಬೇಕು. ಶಾಲೆಯ ಮಾದರಿಯನ್ನು ಮಾತ್ರ ನಾವು ಒದಗಿಸುತ್ತೇವೆ. ನಿರ್ಮಾಣ ಕಾರ್ಯವನ್ನು ಅವರೇ ಮಾಡುತ್ತಾರೆ. ರಾಜ್ಯದಲ್ಲಿ ಈಗಾಗಲೇ 500 ಸ್ಥಳಗಳನ್ನು ಗುರುತಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 2 ಸಾವಿರ ಶಾಲೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಪ್ರಮುಖ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ'' ಎಂದು ಇದೇ ವೇಳೆ, ಸಚಿವರು ಮಾಹಿತಿ ನೀಡಿದರು.

ಬಾಲ್ಯವಿವಾಹ, ಬಾಲ ಗರ್ಭಿಣಿಯರ ಪ್ರಕರಣ ತಡೆಗಟ್ಟಿ: ''ಬಾಲ ತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಿಎಂ ಗರಂ ಆದರು. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆಗೆ ಸಿಎಂ ಖಡಕ್ ಸೂಚನೆ ನೀಡಿದರು. ಬಾಲ್ಯ ಗರ್ಭಿಣಿ ಪ್ರಕರಣ ತಡೆಗೆ ಕ್ರಮ ರಾಜ್ಯದಲ್ಲಿ 2022-23ರ ಅವಧಿಯಲ್ಲಿ 13477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು'' ಎಂದು ಸೂಚಿಸಿದರು.

ಇದನ್ನೂ ಓದಿ: ಒಟಿಎಸ್ ಮೂಲಕ ಬಾಕಿ ಆಸ್ತಿ ತೆರಿಗೆ ತ್ವರಿತವಾಗಿ ಪಾವತಿಸಿ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಮನವಿ - Property Tax Arrears

ETV Bharat Logo

Copyright © 2024 Ushodaya Enterprises Pvt. Ltd., All Rights Reserved.