ETV Bharat / state

ಅರಮನೆ ಸಮೀಪ ಪಾರಿವಾಳಗಳಿಗೆ ಆಹಾರ ಹಾಕುವವರು ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ - Feeding Pigeons Near Mysuru Palace - FEEDING PIGEONS NEAR MYSURU PALACE

ಮೈಸೂರು ಅರಮನೆ ನೋಡಬರುವ ಪ್ರವಾಸಿಗರು ಪಾರಿವಾಳಗಳಿಗೆ ಅತಿಯಾಗಿ ಆಹಾರ ಧಾನ್ಯಗಳನ್ನು ಹಾಕುತ್ತಿರುವುದು ಹಾಗು ಅವುಗಳ ಹಿಕ್ಕೆಯಿಂದ ಅರಮನೆಯ ಸ್ವಚ್ಛತೆ ಹಾಳಾಗುತ್ತಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ.

DC KV Rajendra
ಪಾರಿವಾಳಗಳ ಹಿಕ್ಕೆಯಿಂದ ಮೈಸೂರು ಅರಮನೆಯ ಸ್ವಚ್ಛತೆ ಹಾಗೂ ಸೌಂದರ್ಯಕ್ಕೆ ಹಾನಿ (ETV Bharat)
author img

By ETV Bharat Karnataka Team

Published : Jun 27, 2024, 8:16 PM IST

ಅರಮನೆ ಮುಂಭಾಗ ಆಹಾರ ಧಾನ್ಯ ತಿನ್ನುತ್ತಿರುವ ಪಾರಿವಾಳಗಳು (ETV Bharat)

ಮೈಸೂರು: ಪ್ರವಾಸಿಗರು, ಸಾರ್ವಜನಿಕರು ಪಾರಿವಾಳಗಳಿಗೆ ಹಾಕುವ ಅತಿಯಾದ ಆಹಾರ ಧಾನ್ಯಗಳ ವ್ಯರ್ಥದಿಂದ ಹಾಗೂ ಪಾರಿವಾಳಗಳ ಹಿಕ್ಕೆಯಿಂದ ಅರಮನೆಯ ಸ್ವಚ್ಛತೆ ಹಾಗೂ ಸೌಂದರ್ಯ ಹಾಳಾಗುತ್ತಿದೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

''ಜೈನ್ ಸಂಸ್ಥೆಯ ವತಿಯಿಂದಲೂ ಸಹ ಪ್ರತಿನಿತ್ಯ ಪಾರಿವಾಳಗಳಿಗೆ 2 ಮೂಟೆ ಗೋಧಿ, ಜೋಳ, ಭತ್ತವನ್ನು ನೀಡುತ್ತಿದ್ದಾರೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ಕೂಡಾ ಆಹಾರ ಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನೀಡುತ್ತಿದ್ದಾರೆ. ಇದರಿಂದ ಪಾರಿವಾಳಗಳು ಅರಮನೆಯ ಕಟ್ಟಡದ ಮೇಲೆಲ್ಲಾ ಹಿಕ್ಕೆಗಳನ್ನು ಹಾಕಿ, ಹಾನಿ ಉಂಟುಮಾಡುತ್ತಿವೆ. ಇದು ಹೀಗೆಯೇ ಮುಂದುವರೆದರೆ ಮುಂಬರುವ ದಿನಗಳಲ್ಲಿ ಸಾಂಸ್ಕೃತಿಕ ಕಟ್ಟಡ ತನ್ನ ಸೌಂದರ್ಯವನ್ನು ಕಳೆದುಕೊಳ್ಳುತ್ತದೆ. ಹಾಗಾಗಿ ಈಗಲೇ ಅದನ್ನು ತಡೆಗಟ್ಟಬೇಕು'' ಎಂದರು.

''ಅರಮನೆಯ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಿತ್ಯ ಮುಂಜಾನೆ ಮೂಟೆಗಳಲ್ಲಿ ಗೋಧಿ ಕಾಳುಗಳನ್ನು ತಂದು ಸುರಿಯುತ್ತಾರೆ. ಇದನ್ನು ತಿನ್ನಲು ಸಾವಿರಾರು ಪಾರಿವಾಳಗಳು ಅಲ್ಲಿಯೇ ಬೀಡುಬಿಟ್ಟಿವೆ. ಕಾಳು ತಿನ್ನುವ ಸಂದರ್ಭದಲ್ಲಿ ಅವುಗಳು ಹಾರುವ ದೃಶ್ಯ ಮನೋಹರವಾಗಿರುತ್ತದೆ. ಇದನ್ನು ಶೂಟ್‌ ಮಾಡಲು ಖ್ಯಾತ ಛಾಯಾ ಗ್ರಾಹಕರೂ ಆಗಮಿಸುತ್ತಾರೆ'' ಎಂದು ಹೇಳಿದರು.

''ಪಾರಿವಾಳಗಳಿಗೆ ಕಾಳು ಹಾಕುವುದನ್ನು ಪಾರಂಪರಿಕ ತಜ್ಞರು ಹಾಗೂ ಪರಿಸರ ಪ್ರೇಮಿಗಳು ಅಪಾಯಕಾರಿ ಎಂದು ಪರಿಗಣಿಸಿದ್ದಾರೆ. ಹಾಗಾಗಿ ಸಾರ್ವಜನಿಕರು ತಮ್ಮ ಖುಷಿಗಾಗಿ ಪಕ್ಷಿಗಳಿಗೆ ತೊಂದರೆ ನೀಡದಂತೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು'' ಎಂದುಸೂಚನೆ ನೀಡಿದರು.

ಅರಮನೆಯ ಅಧಿಕಾರಿಗಳು ಜೈನ್ ಸಂಸ್ಥೆಯೊಂದಿಗೆ ಮಾತನಾಡಿ, ಅವಶ್ಯಕತೆಗೆ ತಕ್ಕಷ್ಟು ಆಹಾರವನ್ನು ನೀಡುವಂತೆ ಅವರಿಗೆ ಮಾಹಿತಿ ನೀಡಬೇಕು. ಸಾರ್ವಜನಿಕರು ಹಾಗೂ ಪ್ರವಾಸಿಗರು ನೀಡುವ ಆಹಾರ ಧಾನ್ಯಗಳಿಗೆ ಅನುಗುಣವಾಗಿ ಅವಶ್ಯಕವಿದ್ದರೆ ಸಂಸ್ಥೆಯವರು ಪಾರಿವಾಳಗಳಿಗೆ, ಪಕ್ಷಿಗಳಿಗೆ ಆಹಾರ ಧಾನ್ಯಗಳನ್ನು ಒದಗಿಸುವಂತೆ ಸಂಸ್ಥೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಒಂದೇ ಸ್ಥಳದಲ್ಲಿ ಅತಿ ಹೆಚ್ಚು ಧಾನ್ಯಗಳನ್ನು ಹಾಕುತ್ತಿರುವುದರಿಂದ ಅರಮನೆಯ ಸ್ವಚ್ಛತೆಗೆ ಧಕ್ಕೆ ಉಂಟಾಗುತ್ತಿದ್ದು, ಅದರ ಬಗ್ಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಒಬ್ಬ ಸಹಾಯಕನನ್ನು ನೇಮಿಸಬೇಕು ಎಂದು ತಿಳಿಸಿದರು.

dc-k-v-rajendra
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿ (ETV Bharat)

ಒಂದೇ ಕಡೆ ಹೆಚ್ಚು ಆಹಾರ ಧಾನ್ಯ ಹಾಕುವ ಬದಲು ಹಂತ ಹಂತವಾಗಿ ಪಾರಂಪರಿಕ ಕಟ್ಟಡಗಳಿಂದ ದೂರದಲ್ಲಿ ಪಕ್ಷಿಗಳಿಗೆ ಆಹಾರ ಧಾನ್ಯ ಹಾಕಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಈ ಸಲಹೆ ಒಪ್ಪಿದ ಜೈನ್ ಸಂಸ್ಧೆ, ಸೂಕ್ತ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್, ಅರಮನೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಜನತಾ ಕರ್ಫ್ಯೂಗೆ ಮನೆ ಸೇರಿದ ಜನ, ಅರಮನೆ ಮುಂಭಾಗದಲ್ಲಿ ಪಾರಿವಾಳಗಳ ಸ್ವಚ್ಛಂದ ಹಾರಾಟ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.