ETV Bharat / state

ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ಹೇಳಿದ್ದೇನು? - Mysuru Dasara 2024 - MYSURU DASARA 2024

ಹತ್ತು ದಿನಗಳ ಕಾಲ ನಡೆಯುವ ನವರಾತ್ರಿಯ ಕಾರ್ಯಕ್ರಮಗಳ ಹಾಗೂ ದಸರಾ ಉದ್ಘಾಟನೆ ಜಂಬೂ ಸವಾರಿ ಸೇರಿದಂತೆ ಇತರ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ 'ಈಟಿವಿ ಭಾರತ'ದ ಜೊತೆ ಮಾತನಾಡಿದ್ದಾರೆ.

ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ
ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ (ETV Bharat)
author img

By ETV Bharat Karnataka Team

Published : Oct 2, 2024, 9:19 PM IST

Updated : Oct 2, 2024, 10:35 PM IST

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಈ ಕುರಿತು ಮೈಸೂರು ಜಿಲ್ಲಾಧಿಕಾರಿ ಹಾಗೂ ದಸರಾದ ವಿಶೇಷಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ 'ಈಟಿವಿ ಭಾರತ'ದ ಜೊತೆ ಮಾತನಾಡಿ, ನಾಳೆ (ಗುರುವಾರ) ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45 ರ ಶುಭ ವೃಶ್ಚಿಕ ಲಗ್ನದಲ್ಲಿ ಗಣ್ಯರು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಪುಪ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ಚಾಲನೆ ದೊರೆಯಲಿದೆ. ಹತ್ತು ದಿನಗಳ ಕಾಲ ನಡೆಯಲಿರುವ ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದರು.

19 ಉಪ ಸಮಿತಿಗಳು ಎಲ್ಲಾ ಕಾರ್ಯಕ್ರಮಗಳ ಉಸ್ತುವರಿ ನೋಡಿಕೊಳ್ಳುತ್ತಿವೆ. ದಸರಾದ ವೇಳೆ ಅರಮನೆ ಮುಂಭಾಗ ಸಾಂಸ್ಕೃತಿಕ ಕಾರ್ಯಕ್ರಮಗಳು, ದಸರಾ ಕುಸ್ತಿ, ಚಲನಚಿತ್ರೋತ್ಸವ , ವಸ್ತುಪ್ರರ್ದಶನ ನಾಳೆ ಉದ್ಘಾಟನೆಯಾಗಲಿವೆ. ಯುವ ದಸರಾಕ್ಕೆ ಪ್ರಸಿದ್ಧ ಕಲಾವಿದರು ಆಗಮಿಸಲಿದ್ದಾರೆ. ಈ ಬಾರಿ ಯುವ ದಸರಾವನ್ನು ನಗರದ ಹೊರ ವಲಯದಲ್ಲಿ ಆಯೋಜಿಸಲಾಗಿದೆ. ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಂಭಾಗದ ಆಸನಗಳಿಗೆ ಟಿಕೆಟ್‌ ದರ ನಿಗದಿ ಮಾಡಲಾಗಿದೆ. ಸಾರ್ವಜನಿಕರು ಉಚಿತವಾಗಿ ಯುವ ದಸರಾ ವೀಕ್ಷಣೆ ಮಾಡಲು ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ಪ್ರತಿಕ್ರಿಯೆ (ETV Bharat)

ವೆಬ್​ಸೈಟ್​ನಲ್ಲಿ ದಸರಾ ವೀಕ್ಷಣೆ ಮಾಡಲು ಗೋಲ್ಡ್​ ಕಾರ್ಡ್​ಗಳನ್ನು ಖರೀದಿಸಬಹುದು. ಜಂಬೂ ಸವಾರಿಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಡಲಾಗಿದೆ. ಈ ಬಾರಿ ದಸರಾ ನಡೆಸಲು ನನಗೆ ಸಂತಸವಾಗಿದ್ದು, ನಮ್ಮ ತಂಡ ಕಳೆದ ಒಂದು ತಿಂಗಳಿನಿಂದ ದಸರಾ ಸಿದ್ಧತೆಯಲ್ಲಿ ತೊಡಗಿದೆ. ತಾಯಿಯ ಆರ್ಶೀವಾದೊಂದಿಗೆ ದಸರಾ ಯಾವುದೇ ತೊಂದರೆಯಿಲ್ಲದೇ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ದಸರಾ ವೈಭವ: ಅರಮನೆಯ ರಾಜವಂಶಸ್ಥರ ನವರಾತ್ರಿ ಧಾರ್ಮಿಕ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. - MYSURU DASARA 2024

Last Updated : Oct 2, 2024, 10:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.